ಮೈಸೂರು: ನಾಳೆ ಸಾಂಸ್ಕೃತಿಕ ನಗರಿ ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಲಿರುವ ಹಿನ್ನೆಲೆಯಲ್ಲಿ ಇಂದು ಲಲಿತ ಮಹಲ್ ರಸ್ತೆಯ ಫಾಸ್ಟ್‌ಫುಡ್‌ಗಳನ್ನು ತೆರವುಗೊಳಿಸಲಾಗಿದೆ.
ಜೆಸಿಬಿ ಮೂಲಕ 50ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಲಾಗಿದ್ದು, ಏಕಾಏಕಿ ಫಾಸ್ಟ್‌ಫುಡ್ ತೆರವಿಗೆ ಮುಂದಾದ ಪಾಲಿಕೆ ಸಿಬ್ಬಂದಿ ವಿರುದ್ಧ ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಕಷ್ಟು ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳು ಅಂಗಡಿಗಳ ತೆರವಿನಿಂದ ತೀವ್ರ ಕಂಗಾಲಾಗಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆಯಿತು.





