Mysore
24
overcast clouds

Social Media

ಗುರುವಾರ, 09 ಏಪ್ರಿಲ 2026
Light
Dark

ಸೆ.1ರಂದು ಮೈಸೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು: ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್‌ ರೆಡ್ಡಿ ಸೂಚನೆ

cm preparetion ,president, lakshimi kantha

ಮೈಸೂರು: ಸೆಪ್ಟೆಂಬರ್.‌1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್‌ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್‌ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದರು.

ಇಂದು ಜಿಲ್ಲಾ ಪಂಚಾಯತ್‌ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳು ರಾಡಿಷನ್‌ ಬ್ಲೂನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ಸಂಬಂಧ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್‌ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.

ಸಭೆಯಲ್ಲಿ ಪೊಲೀಸ್‌ ಆಯುಕ್ತರಾದ ಸೀಮಾ ಲಾಟ್ಕರ್‌, ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್‌ ಕುಮಾರ್‌, ಪಾಲಿಕೆ ಆಯುಕ್ತ ಶೇಕ್‌ ತನ್ವಿರ್‌ ಆಸಿಫ್‌, ಡಿಸಿಪಿ ಸುಂದರ್‌ರಾಜ್‌ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.

Tags:
error: Content is protected !!