cm preparetion ,president, lakshimi kantha
ಮೈಸೂರು: ಸೆಪ್ಟೆಂಬರ್.1ರಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರಿನ ಅಖಿಲ ಭಾರತ ವಾಕ್ ಮತ್ತು ಶ್ರವಣ ಸಂಸ್ಥೆಯ ಸಿಲ್ವರ್ ಜ್ಯುಬಿಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಮೈಸೂರಿಗೆ ಆಗಮಿಸಲಿದ್ದಾರೆ.
ಈ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಸೂಚನೆ ನೀಡಿದರು.
ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಅಧಿಕಾರಿಗಳು ಎಚ್ಚರ ವಹಿಸಬೇಕು. ರಾಷ್ಟ್ರಪತಿಗಳು ರಾಡಿಷನ್ ಬ್ಲೂನಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಈ ಸಂಬಂಧ ಅಧಿಕಾರಿಗಳು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.
ರಾಷ್ಟ್ರಪತಿಗಳಿಗೆ ಸೂಕ್ತ ಪೊಲೀಸ್ ಭದ್ರತೆ ಒದಗಿಸುವ ಜೊತೆಯಲ್ಲಿ ಯಾವುದೇ ಅಸುರಕ್ಷತಾ ಘಟನೆಗಳಿಗೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಿದರು.
ಸಭೆಯಲ್ಲಿ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯುಕೇಶ್ ಕುಮಾರ್, ಪಾಲಿಕೆ ಆಯುಕ್ತ ಶೇಕ್ ತನ್ವಿರ್ ಆಸಿಫ್, ಡಿಸಿಪಿ ಸುಂದರ್‌ರಾಜ್ ಸೇರಿದಂತೆ ಹಲವು ಅಧಿಕಾರಿಗಳು ಭಾಗಿಯಾಗಿದ್ದರು.
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…
ಪೇಶಾವರ: ಪಾಕಿಸ್ತಾನದ ವಾಯುವ್ಯ ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಶಾಂತಿ ಸಮಿತಿ ಸದಸ್ಯರ ಮನೆಯಲ್ಲಿ ಶುಕ್ರವಾರ ರಾತ್ರಿ ನಡೆದ ವಿವಾಹ ಸಮಾರಂಭದ…