ಮೈಸೂರು: ಸಿಎಂ ಸಿದ್ದರಾಮಯ್ಯ ಅವರಿಂದು, ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿದರು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು, ಪತ್ರಿಕಾ ದಿನಾಚರಣೆ ಹಾಗೂ ಪತ್ರಕರ್ತರ ಸಮಸ್ಯೆಗಳ ಬಗ್ಗೆ ಸವಿವರವಾಗಿ ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮಸಲಹೆಗಾರ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ದೀಪಕ್, ಕಾರ್ಯದರ್ಶಿ ರವಿ ಪಾಂಡವಪುರ ಸೇರಿದಂತೆ ಹಲವು ಪದಾಧಿಕಾರಿಗಳು ಉಪಸ್ಥಿತರಿದ್ದರು.