ಮೈಸೂರು ನಗರ

ದಲ್ಲಾಳಿಗಳ ಹಾವಳಿ ತಡೆಗಟ್ಟಿ: ರೈತ ಬಣದ ರಾಜ್ಯಾಧ್ಯಕ್ಷ ಇ.ಎನ್‌. ಕೃಷ್ಣೇಗೌಡ

ಮೈಸೂರು: ತಾಲೂಕು ಕೇಂದ್ರಗಳಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರ ಕೆಲಸಗಳು ಆಗುತ್ತಿಲ್ಲ. ಭೂಗಳ್ಳರಿಂದ ರೈತರು ಮೋಸ ಹೋಗುತ್ತಿದ್ದು, ಸರ್ಕಾರ ಕೂಡಲೇ ಇತ್ತ ಗಮನಹರಿಸಿ ರೈತರ ಸಮಸ್ಯೆ ಬಗೆಹರಿಸಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ (ರೈತ ಬಣ)ದ ರಾಜ್ಯಾಧ್ಯಕ್ಷ ಇ.ಎನ್.ಕೃಷ್ಣೇಗೌಡ ಒತ್ತಾಯಿಸಿದರು.

ಇಂದು (ಫೆ.4) ಜಲದರ್ಶಿನಿ ಅತಿಥಿ ಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ದಲ್ಲಾಳಿಗಳ ಹಾವಳಿ ಹೆಚ್ಚಾಗಿದೆ. ಕೆಲವರು ರೈತರ ಸೋಗಿನಲ್ಲಿ ಹಸಿರು ಟವಲ್ ಧರಿಸಿ ನಿಜವಾದ ರೈತರಿಗೆ ಮೋಸ ಮಾಡುತ್ತಿದ್ದಾರೆ.

ಜತೆಗೆ ಭೂಗಳ್ಳರ ಹಾವಳಿ ಹೆಚ್ಚಾಗಿದ್ದು, ಅಧಿಕಾರಿಗಳು ಭೂಗಳ್ಳರೊಂದಿಗೆ ಕೈ ಜೋಡಿಸಿ ಸರ್ಕಾರಿ ಭೂಮಿ ಕಬಳಿಸುತ್ತಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಬೇಕು. ಸರ್ಕಾರ ಈ ಕೂಡಲೇ ಎಚ್ಚೆತ್ತುಕೊಳ್ಳದಿದ್ದರೆ ಮತ್ತೊಂದು ಮುಡಾ ಹಗರಣದಂತಾಗುತ್ತದೆ ಎಂದು ಎಚ್ಚರಿಸಿದರು.

ಜಮೀನು ಉಳುಮೆ ಮಾಡುತ್ತಿರುವ ರೈತರಿಗೆ ಸಾಗುವಳಿ ಚೀಟಿ ಕೊಡಬೇಕು. ದುಡ್ಡಿಗಾಗಿ ಯಾರದೋ ಜಮೀನನ್ನು ಯಾರದೋ ಹೆಸರಿಗೆ ಮಾಡಿದರೆ ರೈತರನ್ನು ಒಗ್ಗೂಡಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲಾಗುವುದು. ರೈತರ ಎಲ್ಲಾ ಬೇಡಿಕೆಗಳನ್ನು ಈಡೇರಿಸದಿದ್ದರೆ ವಿಧಾನಸೌಧ ಚಲೋ ನಡೆಸಬೇಕಾಗುತ್ತದೆ ಎಂದು ಎಚ್ಚರಿಸಿದರು.

ಮೈಕ್ರೋ ಫೈನಾನ್ಸ್‌ಗಳಿಗೆ ಕಡಿವಾಣ ಹಾಕಿ:

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್‌ಗಳ ಹಾವಳಿ ಹೆಚ್ಚಾಗಿದೆ. ಸಾಲಕ್ಕೆ ಹೆದರಿ ರೈತರು ಊರು ಬಿಡುತ್ತಿದ್ದಾರೆ. ಹಲವು ಕಡೆ ಪ್ರತಿನಿತ್ಯ ಒಬ್ಬರಲ್ಲ ಒಬ್ಬರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ.

ರಾಷ್ಟ್ರೀಕೃತ ಬ್ಯಾಂಕ್‌ಗಳು ನಿಗದಿತ ಸಮಯಕ್ಕೆ ರೈತರಿಗೆ, ಜನ ಸಾಮಾನ್ಯರಿಗೆ ಸಾಲ ನೀಡದ ಕಾರಣ ರೈತರು ಖಾಸಗಿ ಬ್ಯಾಂಕ್, ಮೈಕ್ರೋ ಫೈನಾನ್ಸ್‌ಗಳಲ್ಲಿ ಸಾಲ ಪಡೆಯುತ್ತಿದ್ದಾರೆ. ಮೊದಲು ಸಾಲ ಕೊಡುವ ಮೈಕ್ರೋ ಫೈನಾನ್ಸ್‌ಗಳು ನಂತರ ಜನರ ರಕ್ತ ಹೀರುವ ಕೆಲಸ ಮಾಡುತ್ತಿವೆ. ಇದರ ವಿರುದ್ಧ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ತರಲು ಮುಂದಾಗಿರುವುದು ಸ್ವಾಗತಾರ್ಹ ಎಂದರು.

ಆಂದೋಲನ ಡೆಸ್ಕ್

Recent Posts

ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ: ಸಿಎಂ ಸಿದ್ದರಾಮಯ್ಯ ವ್ಯಂಗ್ಯ

ಮೈಸೂರು: ವಿರೋಧ ಪಕ್ಷ ಇರೋದೆ ಪ್ರತಿಭಟನೆ ಮಾಡೋಕೆ ಎಂದು ಸಿಎಂ ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಸರ್ಕಾರಿ ಆಹ್ವಾನ ಪತ್ರಿಕೆಯಲ್ಲಿ ಉರ್ದು ಬಳಸಿದ…

5 hours ago

ಹನೂರು| ಉಪಟಳ ನೀಡುತ್ತಿರುವ ಕಾಡಾನೆ ಸೆರೆ ಹಿಡಿಯಿರಿ: ಅರಣ್ಯಾಧಿಕಾರಿಗಳಿಗೆ ಗ್ರಾಮಸ್ಥರ ಮನವಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ಕಾಡಾನೆ ಬೆಳೆ ಹಾನಿ ಮಾಡುವುದರ ಜೊತೆಗೆ ಮನುಷ್ಯರ ಜೀವದ ಜೊತೆ…

9 hours ago

ರೇಷ್ಮೆ ಕಾರ್ಖಾನೆ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ವಿರೋಧ: ಟಿ.ನರಸೀಪುರ ಬಂದ್‌ ಮಾಡಲು ಚಿಂತನೆ

ಟಿ.ನರಸೀಪುರ: ಪಟ್ಟಣದ ಸಿಲ್ಕ್ ಫಿಲೇಚರ್ ಆವರಣದಲ್ಲಿ ಕ್ರೀಡಾಂಗಣ ನಿರ್ಮಾಣಕ್ಕೆ ಮುಂದಾಗಿರುವ ಸರ್ಕಾರದ ನಿರ್ಧಾರಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗಿದ್ದು, ತೀವ್ರ ತೆರನಾದ…

9 hours ago

ಹನೂರು ಪಟ್ಟಣದಲ್ಲಿ 50 ಹಾಸಿಗೆಗಳ ನೂತನ ಆಸ್ಪತ್ರೆ ನಿರ್ಮಾಣ: ಶಾಸಕರಿಂದ ಕಾಮಗಾರಿ ಪರಿಶೀಲನೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ 50 ಹಾಸಿಗೆಗಳ ನೂತನ ಆಸ್ಪತ್ರೆಯು ಸಾರ್ವಜನಿಕರಿಗೆ…

10 hours ago

ಹನೂರು| ಪ್ರತಿನಿತ್ಯ ಒಂಟಿಸಲಗ ದಾಳಿ: ಕಂಗಾಲಾದ ರೈತರು

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗ ಮಧ್ಯದ ಚಿಕ್ಕರಂಗಶೆಟ್ಟಿ ದೊಡ್ಡಿ ಗ್ರಾಮದ ಸಮೀಪ…

10 hours ago

ಸಮರ್ಪಕ ನೀರಿನ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹ: ಅಜ್ಜೀಪುರ ಗ್ರಾಮದಿಂದ ವಿಧಾನಸೌಧದವರೆಗೆ ಪಾದಯಾತ್ರೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು  ಹನೂರು: ತಾಲೂಕಿನ ಕುಡಿಯುವ ನೀರಿನ ದಾಹ ಇಂಗಿಸಲು ಕೆರೆಕಟ್ಟೆಗಳು, ಜನಜಾನುವಾರುಗಳಿಗೆ ಸಮರ್ಪಕ…

10 hours ago