ಮೈಸೂರು: ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಮೈಸೂರಿನಲ್ಲಿಂದು ಪೌರ ಕಾರ್ಮಿಕರಿಗೆ ಚಹಾ, ಬನ್ ಹಾಗೂ ಬಾಳೆಹಣ್ಣು ವಿತರಿಸಲಾಯಿತು.
ನಗರದ ಚಾಮುಂಡಿಪುರಂನಲ್ಲಿ ಅಪೂರ್ವ ಸ್ನೇಹ ಬಳಗದ ವತಿಯಿಂದ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶಾಸಕ ಟಿ.ಎಸ್.ಶ್ರೀವತ್ಸ ಹಾಗೂ ಅಪೂರ್ವ ಸ್ನೇಹ ಬಳಗದ ಕಾರ್ಯಕರ್ತರು ಪೌರಕಾರ್ಮಿಕರಿಗೆ ಚಹಾ, ಬನ್ ಹಾಗೂ ಬಾಳೆಹಣ್ಣು ವಿತರಣೆ ಮಾಡಿದರು.
ಇದನ್ನು ಓದಿ : ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ: ಗಣ್ಯರಿಂದ ಶುಭಾಶಯ
ಈ ವೇಳೆ ಮಾತನಾಡಿದ ಶಾಸಕ ಟಿ.ಎಸ್.ಶ್ರೀವತ್ಸ ಅವರು, ದೇಶದ ಮುಂದಿನ ಭವಿಷ್ಯಕ್ಕಾಗಿ ಆರ್ಥಿಕವಾಗಿ ಭದ್ರ ಬುನಾದಿ ಹಾಗೂ ದೇಶದ ಗಡಿಯನ್ನು ಬಲಿಷ್ಠಗೊಳಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ಅತ್ಯುತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ದೇಶದ ಪ್ರಗತಿಗಾಗಿ ಪೌರಕಾರ್ಮಿಕರ ಸ್ವಚ್ಛತಾ ಕಾರ್ಯ ಸೇವೆ ಪ್ರಮುಖವಾದದ್ದು ಎಂದು ಹೇಳಿದರು.
ಈ ವೇಳೆ ಮಾಜಿ ನಗರ ಪಾಲಿಕೆ ಸದಸ್ಯ ಮಾ.ವಿ.ರಾಮಪ್ರಸಾದ್, ಎಂ.ಟಡಿ.ಪಾರ್ಥಸಾರಥಿ, ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…