ಮೈಸೂರು ನಗರ

ಇಂದು ಮತ್ತು ನಾಳೆ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನ ಪ್ರವೇಶ ನಿಷೇಧ

ಮೈಸೂರು : ಇಂದು ಮತ್ತು ನಾಳೆ  ಕೂಡ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕ ವಾಹನಗಳ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ನಿನ್ನೆ ಮೊದಲ ಆಷಾಢ ಶುಕ್ರವಾರದ ಪ್ರಯುಕ್ತ ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸುವ ಕಾರಣ ಯಾವುದೇ ರೀತಿ ಪಾರ್ಕಿಂಗ್‌ ಸಮಸ್ಯೆ, ಟ್ರಾಫಿಕ್‌ ಸಮಸ್ಯೆ, ಹಾಗೂ ಭಕ್ತರಿಗೆ ಯಾವುದೇ ತೊಂದರೆ ಆಗಬಾರದು ಎನ್ನುವ ದೃಷ್ಠಿಯಿಂದ ಚಾಮುಂಡಿಬೆಟ್ಟಕ್ಕೆ ಖಾಸಗಿ ವಾಹನಗಳನ್ನ ನಿಷೇಧಿಸಲಾಗಿತ್ತು. ಅಲ್ಲದೆ ಉಚಿತ ಬಸ್‌ ಗಳ ಮೂಲಕವೇ ಲಲಿತ‌ ಮಹಲ್‌ ಪಾರ್ಕಿಂಗ್‌ ನಿಂದ ಭಕ್ತರನ್ನ ಚಾಮುಂಡಿಬೆಟ್ಟಕ್ಕೆ ಕರೆದುಕೊಂಡು ಹೋಗಲಾಗಿತ್ತು.

ಇನ್ನು ವೀಕೆಂಡ್‌ ಇರುವ ಕಾರಣ ಇಂದು ಮತ್ತು ನಾಳೆ ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಚಾಮುಂಡಿಬೆಟ್ಟಕ್ಕೆ ಭೇಟಿ ಕೊಡುತ್ತಾರೆ. ಹೀಗಾಗಿ ಇಂದು ಮತ್ತು ನಾಳೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧವಿಧಿಸಲಾಗಿದೆ.

ನಿನ್ನೆ ಮೊದಲ ಅಷಾಢ ಶುಕ್ರವಾರ ಪ್ರಯುಕ್ತ ಎಲ್ಲಾ ಭಕ್ತರಿಗೂ ಉಚಿತವಾಗಿ ಬಸ್‌ ನಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿತ್ತು. ಆದರೆ ಇಂದು ಯಾವುದೇ ರೀತಿ ಉಚಿತ ಬಸ್‌ ವ್ಯವಸ್ಥೆ ಇಲ್ಲ. ಬದಲಾಗಿ ಬಸ್‌ ನಲ್ಲಿ ಟಿಕೆಟ್‌ ಪಡೆದು ಪ್ರಯಾಣಿಸಬೇಕು.

ಸಾರ್ವಜನಿಕರು ತಮ್ಮ ವಾಹನವನ್ನು ಲಲಿತಮಹಲ್‌ ಪಾರ್ಕಿಂಗ್‌ ನಲ್ಲೆ ನಿಲ್ಲಿಸಿ ಕೆ.ಎಸ್.ಆರ್‌.ಟಿ.ಸಿ ವಾಹನಗಳ ಮೂಲಕ ಹಣ ಪಾವತಿ ಮಾಡಿ ಟಿಕೆಟ್‌ ಪಡೆದು ಬೆಟ್ಟಕ್ಕೆ ಹೋಗಬೇಕು. ಮಹಿಳೆಯರಿಗೆ ಶಕ್ತಿಯೋಜನೆ ಅನ್ವಹಿಸುತ್ತದೆ.

ಇನ್ನು ಚಾಮುಂಡಿಬೆಟ್ಟದ ಗ್ರಾಮಸ್ಥರು ಈ ಸಮಯದಲ್ಲಿ ಚಾಮುಂಡಿಬೆಟ್ಟದ ಗ್ರಾಮದಲ್ಲಿ ವಿಳಾಸವಿರುವ ಆಧಾರ್‌ ಕಾರ್ಡ್‌ ಅನ್ನು ಹಾಜರು ಪಡಿಸಿ ಅಥವಾ ಪರಿಶೀಲನೆಗೆ ಒಳಪಡಿಸಿ ಪ್ರವೇಶವನ್ನು ಪಡೆಯಬಹುದು.

ಸವಿತಾ ಆಕಾಂಕ್ಷ್‌

ಮೂಲತಃ ಮೈಸೂರು ಜಿಲ್ಲೆಯ ಗೆಜ್ಜಗಳ್ಳಿ ಗ್ರಾಮದ ನಿವಾಸಿಯಾಗಿರುವ ನಾನು ಮೈಸೂರಿನ ಜೆಎಸ್‌ ಎಸ್‌ ಕಾಲೇಜಿನಲ್ಲಿ ಪದವಿ ಪಡೆದುಕೊಂಡಿದ್ದೇನೆ. ಬಳಿಕ ಮೈಸೂರಿನ ಸ್ಥಳೀಯ ಮಟ್ಟದ ಖಾಸಗಿ ಸುದ್ದಿ ವಾಹಿನಿಗಳಲ್ಲಿ ಹಾಗೂ ಪ್ರಾದೇಶಿಕ ದಿನಪತ್ರಿಕೆಯಲ್ಲಿ ಕೆಲಸ ಮಾಡಿದ್ದು, ಆರೂವರೆ ವರ್ಷಗಳ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಕಾಡುಪ್ರಾಣಿಗಳ ರಕ್ಷಣೆ ಮತ್ತು ಅರಣ್ಯ ಸಂರಕ್ಷಣೆ ಹಾಗೂ ವನ್ಯಜೀವಿಗಳ ಅಧ್ಯಯನ ಮಾಡುತ್ತಾ ಹೊಸ ಹೊಸ ವಿಷಯ ತಿಳಿದುಕೊಳ್ಳುವುದರಲ್ಲಿ ನನಗೆ ಆಸಕ್ತಿ ಹೆಚ್ಚಿದೆ. ಸಿಗುವ ಒಂದಷ್ಟು ಸಮಯ ಕುಟುಂಬಸ್ಥರೊಟ್ಟಿಗೆ ಕಾಲ ಕಳೆಯುತ್ತೇನೆ. ಜೊತೆಗೆ ವನ್ಯಜೀವಿಗಳ ಕುರಿತ ಪುಸ್ತಕ ಓದುವುದು ನನ್ನ ಮತ್ತೊಂದು ಹವ್ಯಾಸವಾಗಿದೆ.

Recent Posts

ಓದುಗರ ಪತ್ರ: ಪೌರಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣೆ ಸ್ವಾಗತಾರ್ಹ

ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…

3 hours ago

ಓದುಗರ ಪತ್ರ: ನಿಜವಾದ ಭಾವೈಕ್ಯತೆಯ ಸಂಗಮ

ಮಂಡ್ಯ ಜಿಯ ಮದ್ದೂರಿನಲ್ಲಿ ಭಾನುವಾರ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮುಸ್ಲಿಮರೇ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು, ಗೌರಿ -ಗಣೇಶ ಮೂರ್ತಿಗಳನ್ನು ಹೊತ್ತ ಟ್ರ್ಯಾಕ್ಟರ್…

3 hours ago

ಓದುಗರ ಪತ್ರ: ನಾಡಿಗೆ ಮಾದರಿ!

ನಾಡಿಗೆ ಮಾದರಿ! ವಿವಿಧ ಧರ್ಮ ಸಮುದಾಯಗಳ ಮನಸುಗಳ ಅಕ್ಕರೆಯಲಿ ಬೆಸೆವ ಸ್ನೇಹ ಸೌಹಾರ್ದ ಸಾಮರಸ್ಯದ ಪ್ರತೀಕ, ಹಬ್ಬ ಉತ್ಸವಗಳು! ನಾಡಿಗೆ…

3 hours ago

ಓದುಗರ ಪತ್ರ: ಪ್ರೀತಿಯ ಅಣ್ಣ ಪ್ರತಾಪ್ ಸಿಂಹ…

ನಾವಿಬ್ಬರು ಪ್ರೊ. ಬಿ. ಪಿ. ಮಹೇಶ್ ಚಂದ್ರ ಗುರುಗಳ ಶಿಷ್ಯರು. ನಮ್ಮಿಬ್ಬರಿಗೂ ಪ್ರೊ. ಗುರು ಇಷ್ಟ. ನೀನು ಮಂಗಳೂರು ವಿವಿ,…

3 hours ago

ದಸರಾ ಬರುತ್ತಿದೆ, ಮೈಸೂರು ಸಿದ್ಧವಾಗುತ್ತಿದೆಯೇ?

ಶ್ರೇಯಸ್ ದೇವನೂರು ಅಭಿವೃದ್ಧಿಯ ಹೆಸರಿನಲ್ಲಿ ಅರ್ಧ ಕಾಮಗಾರಿ, ಸಂಚಾರದ ಹೆಸರಿನಲ್ಲಿ ಹೆಚ್ಚುತ್ತಿರುವ ಸಂಕಷ್ಟ  ಮೈಸೂರು ದಸರಾ ಎಂದರೆ ಕೇವಲ ಹತ್ತು…

3 hours ago

ಫಾಲ್ಕೆ ಪ್ರಶಸ್ತಿ ಕಲಾಸೇವೆಗೆ ಸಂದ ಗೌರವ: ಅನಂತ್ ನಾಗ್‌

ಸಂದರ್ಶನ: ಬಾನಾಸು  ಇಂದು ಗುಜರಾತಿನ ಕೆವಾಡಿಯಾದಲ್ಲಿ ೭೨ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ನಡೆಯಲಿದೆ. ಚಿತ್ರರಂಗಕ್ಕೆ ಸಲ್ಲಿಸಿದ ಅಮೋಘ ಸೇವೆಗಾಗಿ…

3 hours ago