MLA Srivatsa
ಮೈಸೂರು: ಮುಂದಿನ ಚುನಾವಣೆಯಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ತಕ್ಷಣ ಆರ್‌ಎಸ್‌ಎಸ್ ಬ್ಯಾನ್ ಮಾಡುತ್ತೇವೆ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಟಿ.ಎಸ್.ಶ್ರೀವತ್ಸ ತಿರುಗೇಟು ನೀಡಿದ್ದಾರೆ.
ಈ ಕುರಿತು ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್‌ಎಸ್‌ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ. ಆರ್‌ಎಸ್‌ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್‌ಎಸ್‌ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ ಖರ್ಗೆ ಮಾತಾಡುತ್ತಿದ್ದಾರೆ.
ಆರ್‌ಎಸ್‌ಎಸ್ ಬಗ್ಗೆ ಪ್ರಿಯಾಂಕ ಖರ್ಗೆಗೆ ಏನೂ ಗೊತ್ತಿಲ್ಲ. ಈ ಹಿಂದೆ ಇದೆ ಕಾಂಗ್ರೆಸ್ ಆರ್‌ಎಸ್‌ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ರು. ಹೀಗಾಗಿ ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್‌ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ಕಿಡಿಕಾರಿದರು.
ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…
ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…
ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…
ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…
ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…
ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…