sudharshan
ಮೈಸೂರು: ಕನ್ನಡ ಪರ ಹೋರಾಟಗಾರ ಹಾಗೂ ರಾಮಕೃಷ್ಣನಗರದ ನೃಪತುಂಗ ಕನ್ನಡ ಶಾಲೆಯ ಸ್ಥಾಪಕರಲ್ಲೊಬ್ಬರಾದ ಸ.ರ.ಸುದರ್ಶನ್ ಅವರು ಹೃದಯಾಘಾತದಿಂದ ವಿಧಿವಶರಾಗಿದ್ದಾರೆ.
ಸ.ರ.ಸುದರ್ಶನ್ ಅವರು ವಿಜಯನಗರದ ತಮ್ಮ ಮನೆಯಲ್ಲಿ ಇಂದು ಬೆಳಿಗ್ಗೆ ಸುಮಾರು 8 ಗಂಟೆಯ ಸಮಯದಲ್ಲಿ ನಿಧನರಾದರು ಅವರಿಗೆ ಒಬ್ಬರೇ ಪುತ್ರಿ ಎಂಜಿನಿಯರ್ ಹಾಗೂ ರಂಗ ಕಲಾವಿದೆ ನುಡಿ ಸುದರ್ಶನ್ ಇದ್ದಾರೆ.
ಐವತ್ತು ವರ್ಷಗಳ ಹಿಂದೆಯೇ ಮೊದಲ ಬಾರಿಗೆ ಕನ್ನಡ ಚಳುವಳಿಯಲ್ಲಿ ಸುದರ್ಶನ್ ಪಾಲ್ಗೊಂಡಿದ್ದರು. ಅಂದಿನಿಂದ ಇಂದಿನವರೆಗೆ ಸತತವಾಗಿ ಕನ್ನಡ ಚಳುವಳಿಯಲ್ಲಿ ಭಾಗಿಯಾಗಿದ್ದ ಅವರು, ಎಂಭತ್ತರ ದಶಕದಲ್ಲಿ ಪ್ರಾರಂಭವಾದ ಗೋಕಾಕ್ ಚಳುವಳಿಯಲ್ಲಿ ಕನ್ನಡ ಕ್ರಿಯಾ ಸಮಿತಿ ವತಿಯಿಂದ ಆರಂಭದಿಂದಲೂ ಭಾಗಿಯಾಗಿದ್ದರು. ಕನ್ನಡ ಕ್ರಿಯಾ ಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ ಅಂದು ಆಯ್ಕೆಯಾಗಿ ಇಂದಿನವರೆಗೂ ಮುಂದುವರಿದಿದ್ದರು.
ಸರ್ಕಾರದ ವತಿಯಿಂದ ಕನ್ನಡಕ್ಕೆ ಕುತ್ತು ಬಂದ ಬಹುತೇಕ ಸಂದರ್ಭಗಳಲ್ಲಿ ಹೋರಾಟ ಮಾಡಿದ್ದ ಅವರು, ಹಲವಾರು ಧರಣಿಗಳು, ಪ್ರತಿಭಟನೆಗಳಲ್ಲಿ ಭಾಗಿಯಾಗಿ, ಹಲವು ಬಾರಿ ಬಂಧನವಾಗಿ ಬಿಡುಗಡೆಯಾಗಿದ್ದರು.
ಕಾಂತಾರ ಚಾಪ್ಟರ್ 1 ಯಶಸ್ಸಿನಲ್ಲಿರುವ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಯುಗಾದಿ ದಿನವೇ ಅಧ್ಯಾಯ ಎರಡು ಇಲ್ಲಿಂದ ಶುರು…
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಹವಾಮಾನ ವೈಪರೀತ್ಯ ಹಾಗೂ ಗುಡುಗು ಸಹಿತ ಮಳೆಯ ಅಬ್ಬರ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ…
ಬೆಂಗಳೂರು: ಕಳೆದ ಮೂರು ದಿನಗಳಿಂದ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಇಂದು ಸಂಜೆಯ ವೇಳೆಗೆ ಕೆಲ ಜಿಲ್ಲೆಗಳಲ್ಲಿ ಭಾರೀ ಭಾರೀ…
ಟೆಹರಾನ್: ಇರಾನ್ ಮೇಲೆ ಯುದ್ಧ ಆರಂಭವಾಗಿ ಸುಮಾರು 20 ದಿನಗಳು ಕಳೆಯುತ್ತಿರುವ ಬೆನ್ನಲ್ಲೇ ಪೊಲೀಸ್ ಅಧಿಕಾರಿಗಳ ಕೊಲೆ ಮತ್ತು ಅಮೇರಿಕಾ…
ಲಕ್ನೋ: ರಾಷ್ಟ್ರಪತಿ ದ್ರೌಪತಿ ಮುರ್ಮು ಅವರು ಅಯೋಧ್ಯೆಯ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಉತ್ತರ ಪ್ರದೇಶದ ರಾಜ್ಯಪಾಲರಾದ…
ಬೆಂಗಳೂರು: ಉದ್ಯಮಿ ಸಿಜೆ ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆ ಬಹುತೇಕ ಮುಕ್ತಾಯದ ಹಂತಕ್ಕೆ ಬಂದಿದ್ದು, ಮುಂದಿನ ವಾರದಲ್ಲಿ ತನಿಖಾ ತಂಡ…