ಮೈಸೂರು ನಗರ

ಕನ್ನಡದ ಖ್ಯಾತ ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ ನಿಧನ

ಮೈಸೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್‌ ಅಸ್ಸಾದಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.

ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಬೆಂಗಳೂರಿಗೆ ಹೋಗಿದ್ದ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ, ಬಹು ಅಂಗಾಂಗ ವೈಫಲ್ಯದ ಕಾರಣ ಕೊನೆಯುಸಿರೆಳೆದಿದ್ದಾರೆ.

ಮುಜಾಫರ್‌ ಅಸ್ಸಾದಿ ಅವರು, ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇದಕ್ಕೂ ಮೊದಲು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕ, ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.

ಉಡುಪಿ ಜಿಲ್ಲೆಯ ಶಿರ್ವ ಗ್ರಾಮದವರಾದ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜವಾಹರಲಾಲ್‌ ನೆಹರೂ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್‌ ಹಾಗೂ ಪಿಎಚ್‌ಡಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಪೋಸ್ಟ್‌ ಡಾಕ್ಟೋರಲ್‌ ಪದವಿ ಪಡೆದಿದ್ದರು.

ವಾರದ ಹಿಂದೆಯಷ್ಟೇ ಮೈಸೂರಿನ ರಂಗಾಯಣದಲ್ಲಿ ನಡೆದ ಅವಸಾನದತ್ತ ನೀಲಗಿರಿ ಕನ್ನಡಿಗರು ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.

ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸರಸ್ವತಿಪುರಂ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನವೆಂಬರ್‌ನಲ್ಲೇ 1.59 ಕೋಟಿ ರೂ ರಾಜಸ್ವ ಸಂಗ್ರಹ

ನವೀನ್ ಡಿಸೋಜ ಮಡಿಕೇರಿ ಪ್ರಾದೇಶಿಕ ಸಾರಿಗೆ ಕಚೇರಿ ಅಧಿಕಾರಿಗಳ ಸಾಧನೆ ಜಿಲ್ಲೆಯಾದ್ಯಂತ ನಿರಂತರ ವ್ಯಾಪಕ ತಪಾಸಣಾ ಕ್ರಮ ಮಡಿಕೇರಿ: ಪ್ರಾದೇಶಿಕ…

1 hour ago

ಅದ್ದೂರಿಯಾಗಿ ನೆರವೇರಿದ ಶ್ರೀ ಮುತ್ತುರಾಯಸ್ವಾಮಿ ಜಾತ್ರೆ

ನಾಗರಹೊಳೆ ಅರಣ್ಯದ ಮಧ್ಯಭಾಗದಲ್ಲಿರುವ ದೇವಸ್ಥಾನಕ್ಕೆ ವಿವಿಧೆಡೆಯಿಂದ ಸಾವಿರಾರು ಮಂದಿ ಭೇಟಿ ಪಿರಿಯಾಪಟ್ಟಣ: ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ಮೀಸಲು…

1 hour ago

ಹಳೆಯ ವಿದ್ಯಾರ್ಥಿಗಳಿಂದ ಕನ್ನಡಮಯವಾದ ಸರ್ಕಾರಿ ಶಾಲೆ

ಎಂ.ಗೂಳೀಪುರ ನಂದೀಶ್ ಕೆಸ್ತೂರು ಪ್ರೌಢಶಾಲೆಯ ಸುತ್ತುಗೋಡೆಯಲ್ಲಿ ಕನ್ನಡ ಸಾಹಿತಿಗಳ, ಸಾಧಕರ ಸೊಗಸಾದ ಚಿತ್ರಗಳ ಚಿತ್ತಾರ ಯಳಂದೂರು: ಶಾಲೆಯ ಸುತ್ತುಗೋಡೆಯಲ್ಲಿ ರಾರಾಜಿಸುತ್ತಿರುವ…

1 hour ago

ಈ ಬಾರಿಯೂ ತೆಪ್ಪೋತ್ಸವ ನಡೆಯುವುದು ಅನುಮಾನ

ಎಂ.ಬಿ.ರಂಗಸ್ವಾಮಿ ಮೂಗೂರಿನ ತ್ರಿಪುರ ಸುಂದರಿ ದೇಗುಲದ ನೂತನ ಕಲ್ಯಾಣಿಯಲ್ಲಿ ೪ ವರ್ಷಗಳಿಂದ ನಡೆಯದ ತೆಪ್ಪೋತ್ಸವ ಮೂಗೂರು: ಐತಿಹಾಸಿಕ ಹಿನ್ನೆಲೆಯುಳ್ಳ ಧಾರ್ಮಿಕ…

1 hour ago

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

9 hours ago