ಮೈಸೂರು: ರಾಜಕೀಯ ತಜ್ಞ, ಲೇಖಕ ಪ್ರೊ.ಮುಜಾಫರ್ ಅಸ್ಸಾದಿ ನಿಧನರಾಗಿದ್ದಾರೆ. ಅವರಿಗೆ 63 ವರ್ಷ ವಯಸ್ಸಾಗಿತ್ತು.
ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇತ್ತೀಚೆಗೆ ಬೆಂಗಳೂರಿಗೆ ಹೋಗಿದ್ದ ಅಸ್ಸಾದಿ ಅವರು ಚಿಕಿತ್ಸೆ ಫಲಕಾರಿಯಾಗದೇ, ಬಹು ಅಂಗಾಂಗ ವೈಫಲ್ಯದ ಕಾರಣ ಕೊನೆಯುಸಿರೆಳೆದಿದ್ದಾರೆ.
ಮುಜಾಫರ್ ಅಸ್ಸಾದಿ ಅವರು, ಮೈಸೂರು ವಿಶ್ವವಿದ್ಯಾಲಯದ ಹಂಗಾಮಿ ಕುಲಪತಿಯಾಗಿ 2022ರಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಇದಕ್ಕೂ ಮೊದಲು ರಾಜ್ಯಶಾಸ್ತ್ರ ಅಧ್ಯಯನ ವಿಭಾಗದಲ್ಲಿ ಪ್ರಾಧ್ಯಾಪಕ, ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದರು.
ಉಡುಪಿ ಜಿಲ್ಲೆಯ ಶಿರ್ವ ಗ್ರಾಮದವರಾದ ಅವರು ಮಂಗಳೂರು ವಿಶ್ವವಿದ್ಯಾನಿಲಯದಿಂದ ಸ್ನಾತಕೋತ್ತರ ಪದವಿ, ನವದೆಹಲಿಯ ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯದಲ್ಲಿ ಎಂ.ಫಿಲ್ ಹಾಗೂ ಪಿಎಚ್‌ಡಿ, ಷಿಕಾಗೋ ವಿಶ್ವವಿದ್ಯಾಲಯದಲ್ಲಿ ಪೋಸ್ಟ್ ಡಾಕ್ಟೋರಲ್ ಪದವಿ ಪಡೆದಿದ್ದರು.
ವಾರದ ಹಿಂದೆಯಷ್ಟೇ ಮೈಸೂರಿನ ರಂಗಾಯಣದಲ್ಲಿ ನಡೆದ ಅವಸಾನದತ್ತ ನೀಲಗಿರಿ ಕನ್ನಡಿಗರು ಕೃತಿ ಬಿಡುಗಡೆ ಸಮಾರಂಭದಲ್ಲಿ ಪಾಲ್ಗೊಂಡಿದ್ದರು.
ಮೃತರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸರಸ್ವತಿಪುರಂ ಮುಸ್ಲಿಂ ವಿದ್ಯಾರ್ಥಿನಿಲಯದಲ್ಲಿ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…