Mysore
21
scattered clouds

Social Media

ಶುಕ್ರವಾರ, 26 ಡಿಸೆಂಬರ್ 2025
Light
Dark

ಮೈಸೂರು| ಪ್ರೊ.ರಾಜಪ್ಪ ದಳವಾಯಿ ಪತ್ನಿ ಮಂಜುಳಾ ಬಿ.ಸಿ. ನಿಧನ

ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.

ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ ಮಗ ಮೇಜರ್ ಭಾರತಿ ನಂದ ಇದ್ದಾರೆ.

ಹಾಸನ ಸಮೀಪದ ಬುಸ್ತೇನಹಳ್ಳಿಯಲ್ಲಿ ಜನಿಸಿದ ಅವರು ವಿದ್ಯಾಭ್ಯಾಸಕ್ಕಾಗಿ ಕೂಡ ಹೋರಾಟ ಮಾಡಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದರು. ಅನಂತರ ಮೈಸೂರಿನಲ್ಲಿ ಕನ್ನಡ ಎಂ.ಎ ಮುಗಿಸಿ ಕನ್ನಡ ಅಧ್ಯಾಪಕರಾಗಿ ಸೇರಿಕೊಂಡರು.

ಅನೇಕ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದ ಅವರು, ಅನೇಕ ಲೇಖನಗಳನ್ನು ಕೂಡ ಬರೆದಿದ್ದಾರೆ. ನಾಸ್ತಿಕರಾಗಿದ್ದ ಅವರು, ಶುಷ್ಕ ಆಚರಣೆಗಿಂತ ಹೆಣ್ಣಿಗೆ ವಿದ್ಯೆ ಮುಖ್ಯ ಎಂದು ನಂಬಿದ್ದರು.

ಬುಧವಾರ (ಏಪ್ರಿಲ್ 16) ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಅವರ ಸ್ವಗೃಹದಲ್ಲಿ (ಬೋಗಾದಿ ದಕ್ಷಿಣ ಎರಡನೇ ಹಂತ, ವಾಗ್ದೇವಿನಗರ, ಎಸ್.ಜೆ.ಸಿ.ಇ. ಮುಖ್ಯರಸ್ತೆ) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

Tags:
error: Content is protected !!