ಮೈಸೂರು: ನಗರದ ಬಾಸುದೇವ ಸೋಮಾನಿ ಕಾಲೇಜಿನಲ್ಲಿ ಕನ್ನಡ ಅಧ್ಯಾಪಕಿಯಾಗಿ ನಿವೃತ್ತರಾಗಿದ್ದ ಮಂಜುಳಾ ಬಿ.ಸಿ. (65) ಬಹು ಅಂಗಾಂಗ ವೈಫಲ್ಯದಿಂದ ಸೋಮವಾರ ರಾತ್ರಿ ಬೆಂಗಳೂರಿನಲ್ಲಿ ನಿಧನರಾದರು.
ಮಹಿಳಾ ಸಂಘಟನೆಯಲ್ಲಿ ಕ್ರಿಯಾಶೀಲರಾಗಿದ್ದ ಅವರಿಗೆ ಪತಿ ಬೆಂಗಳೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ರಾಜಪ್ಪ ದಳವಾಯಿ ಹಾಗೂ ಮಗ ಮೇಜರ್ ಭಾರತಿ ನಂದ ಇದ್ದಾರೆ.
ಹಾಸನ ಸಮೀಪದ ಬುಸ್ತೇನಹಳ್ಳಿಯಲ್ಲಿ ಜನಿಸಿದ ಅವರು ವಿದ್ಯಾಭ್ಯಾಸಕ್ಕಾಗಿ ಕೂಡ ಹೋರಾಟ ಮಾಡಬೇಕಾದ ಪರಿಸ್ಥಿತಿಯನ್ನು ಎದುರಿಸಿದ್ದರು. ಅನಂತರ ಮೈಸೂರಿನಲ್ಲಿ ಕನ್ನಡ ಎಂ.ಎ ಮುಗಿಸಿ ಕನ್ನಡ ಅಧ್ಯಾಪಕರಾಗಿ ಸೇರಿಕೊಂಡರು.
ಅನೇಕ ವಿಚಾರ ಸಂಕಿರಣಗಳಲ್ಲಿ ಪ್ರಬಂಧಗಳನ್ನು ಮಂಡಿಸಿದ್ದ ಅವರು, ಅನೇಕ ಲೇಖನಗಳನ್ನು ಕೂಡ ಬರೆದಿದ್ದಾರೆ. ನಾಸ್ತಿಕರಾಗಿದ್ದ ಅವರು, ಶುಷ್ಕ ಆಚರಣೆಗಿಂತ ಹೆಣ್ಣಿಗೆ ವಿದ್ಯೆ ಮುಖ್ಯ ಎಂದು ನಂಬಿದ್ದರು.
ಬುಧವಾರ (ಏಪ್ರಿಲ್ 16) ಬೆಳಿಗ್ಗೆ 8 ಗಂಟೆಗೆ ಮೈಸೂರಿನ ಅವರ ಸ್ವಗೃಹದಲ್ಲಿ (ಬೋಗಾದಿ ದಕ್ಷಿಣ ಎರಡನೇ ಹಂತ, ವಾಗ್ದೇವಿನಗರ, ಎಸ್.ಜೆ.ಸಿ.ಇ. ಮುಖ್ಯರಸ್ತೆ) ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಂತರ ಚಾಮುಂಡಿ ಬೆಟ್ಟದ ತಪ್ಪಲಿನ ಸ್ಮಶಾನದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…
ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು…
ವಾಷಿಂಗ್ಟನ್: ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್…
ಬೆಂಗಳೂರು: ಇಸ್ರೇಲ್-ಇರಾನ್ ನಡುವಿನ ಯುದ್ಧ ಪರಿಸ್ಥಿತಿಯಿಂದಾಗಿ ಚಿನ್ನ ಮತ್ತು ಬೆಳ್ಳಿ ದರಗಳ ಸತತ ಕುಸಿತ ಮುಂದುವರೆದಿದೆ. ಇಂದೂ ಕೂಡ ಚಿನ್ನ,…
ನವದೆಹಲಿ: ಇರಾನ್-ಇಸ್ರೇಲ್ ಸಂಘರ್ಷದಿಂದಾಗಿ ಪಶ್ಚಿಮ ಏಷ್ಯಾದಲ್ಲಿ ರಾಷ್ಟ್ರಗಳ ಸ್ಥಿತಿ ಚಿಂತಾಜನಕವಾಗಿದೆ. ಯುದ್ಧದಿಂದ ಭಾರತದ ಮೇಲೆ ಪರಿಣಾಮ ಬೀರಿದೆ ಎಂದು ಪ್ರಧಾನಿ…
ಟೆಹರಾನ್: ಯುದ್ಧದ ಖರ್ಚು ನಿಭಾಯಿಸಲು ಸಂಚಾರ ಮಾಡುವ ವ್ಯಾಪಾರಿ ಹಡಗುಗಳಿಗೆ ಶುಲ್ಕ ವಿಧಿಸಲು ಇರಾನ್ ನಿರ್ಧರಿಸಿದೆ. ಹಾರ್ಮುಜ್ ಜಲಸಂಧಿ ಮೂಲಕ…