Mysore
18
broken clouds

Social Media

ಮಂಗಳವಾರ, 11 ಫೆಬ್ರವರಿ 2025
Light
Dark

ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ: ಪ್ರೊ.ಟಿ.ಪಿ.ಸಿಂಗ್‌

ಮೈಸೂರು: ವಿಕಸಿತ ಭಾರತ-2047ರ ಗುರಿ ಸಾಧಿಸುವ ಸಲುವಾಗಿ ದೇಶದ ಆರ್ಥಿಕ ಬೆಳವಣಿಗೆಗೆ ವಿಶ್ವವಿದ್ಯಾನಿಲಯಗಳ ಪಾತ್ರ ಮಹತ್ವದ್ದಾಗಿದೆ ಎಂದು ನವದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಪ್ರೊ.ಟಿ.ಪಿ.ಸಿಂಗ್‌ ತಿಳಿಸಿದ್ದಾರೆ.

ಮೈಸೂರು ವಿಶ್ವವಿದ್ಯಾನಿಲಯದ ಕ್ರಾಫರ್ಡ್‌ ಭವನದಲ್ಲಿ ಇಂದು(ಜನವರಿ.18) ನಡೆದ ಘಟಿಕೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಷಣ ಮಾಡಿದ ಅವರು, ವಿಶ್ವವಿದ್ಯಾನಿಲಯಗಳಲ್ಲಿ ಮೂಲ ಸೌಲಭ್ಯಗಳ ವೃದ್ಧಿ ಹಾಗೂ ಭೋಧಕರ ಸಂಖ್ಯೆಯನ್ನು ಹೆಚ್ಚಿಸಲು ಸರ್ಕಾರ ಸೂಕ್ತ ಕ್ರಮ ವಹಿಸಬೇಕು. ಅಗತ್ಯ ಮಾನವ ಸಂಪನ್ಮೂಲಕ್ಕೆ ಗುಣಮಟ್ಟದ ಮತ್ತು ಪರಿಣಾಮಕಾರಿ ತರಬೇತಿ ನೀಡಿ ಸದುಪಯೋಗ ಪಡೆದುಕೊಳ್ಳಬೇಕು. ಅಲ್ಲದೇ ಇದರ ಲಾಭ ದೇಶದ ಪ್ರಗತಿಗೆ ಲಭ್ಯವಾಗುವಂತೆಯೂ ನೋಡಿಕೊಳ್ಳಬೇಕು ಎಂದು ಹೇಳಿದರು.

ಪ್ರಸ್ತುತ ವಿದ್ಯಮಾನದಲ್ಲಿ ಅಮೆರಿಕ ಸೇರಿದಂತೆ ಪ್ರಪಂಚದ ನಾನಾ ಕಡೆಗಳಲ್ಲಿ ಹಲವು ಅತ್ಯಾಧುನಿಕ ಕಂಪೆನಿಗಳ ನೇತೃತ್ವದನ್ನು ಭಾರತೀಯರೇ ವಹಿಸಿದ್ದು, ನಮ್ಮ ದೇಶದ ಗುಣಮಟ್ಟ ಹಾಗೂ ಸಾಮರ್ಥ್ಯವನ್ನು ತೋರಿಸುತ್ತದೆ. ಹೀಗಾಗಿ ವಿಶ್ವವಿದ್ಯಾನಿಲಯಗಳನ್ನು ಬಲವರ್ಧನೆಗೊಳಿಸಬೇಕು. ಅದರ ಜೊತೆಗೆ ವಿಶ್ವವಿದ್ಯಾನಿಲಯಗಳಿಗೆ ಅನುದಾನವನ್ನು ನೀಡಬೇಕು ಎಂದರು.

ವಿಶ್ವದಲ್ಲಿ ಪ್ರಸ್ತುತವಾಗಿ ಅನೇಕ ಅವಕಾಶಗಳ ಸಾಧ್ಯತೆಗಳನ್ನು ತೆರೆಯಲು ಸಿದ್ಧವಾಗಿದೆ. ಅದಕ್ಕೆ ತಕ್ಕಂತೆ ಪದವೀಧರರು ಸಜ್ಜಾಗಬೇಕು. ಪದವೀಧರರಲ್ಲಿ ಈಗ ಹಿಂದಿಗಿಂತಲೂ ಜ್ಞಾನ ಮತ್ತು ಕೌಶಲ್ಯಕ್ಕೆ ಅಧಿಕ ಗೌರವ ಲಭ್ಯವಾಗುತ್ತಿದೆ. ಜೊತೆಗೆ ಕೌಶಲ ಹೊಂದಿರುವವರಿಗೆ ಪುರಸ್ಕಾರ ದೊರೆಯುತ್ತಿದೆ ಎಂದು ತಿಳಿಸಿದರು.

Tags: