photography contest
ಎಚ್.ಡಿ.ಕೋಟೆ : ತಾಲೂಕಿನ ವೃತ್ತಿಪರ ಛಾಯಾಗ್ರಾಹಕರ ಸಂಘದ ವತಿಯಿಂದ ಆಯೋಜಿಸಲಾಗಿದ್ದ 186ನೇ ವಿಶ್ವ ಛಾಯಾಗ್ರಹಣ ದಿನದ ಅಂಗವಾಗಿ ನಡೆದ ಛಾಯಾಚಿತ್ರ ಸ್ಪರ್ಧೆಯಲ್ಲಿ ಪ್ರತಿನಿಧಿ ಪತ್ರಿಕೆ ವರದಿಗಾರ ಮುರಳೀಧರ ಜಕ್ಕಹಳ್ಳಿ ಅವರು ತೆಗೆದ ಛಾಯಾಚಿತ್ರಕ್ಕೆ ಪ್ರಥಮ ಬಹುಮಾನ ಲಭಿಸಿದೆ. ʻಮದುವೆಯ ಮಧುರ ಕ್ಷಣಗಳುʼ ಎಂಬ ಶೀರ್ಷಿಕೆಯಡಿ ಆಯೋಜಿಸಲಾಗಿದ್ದ ಈ ಸ್ಪರ್ಧೆಯಲ್ಲಿ ಮುರಳೀಧರ ಅವರಿಗೆ ಪ್ರಥಮ ಬಹುಮಾನ ಲಭಿಸಿದ್ದು, 3,000 ನಗದು ಮತ್ತು ಟ್ರೋಫಿ ನೀಡಲಾಗಿದೆ.
ಉಳಿದಂತೆ ಗುರುಸ್ವಾಮಿ ದ್ವಿತೀಯ ಬಹುಮಾನ, ಪರಮೇಶ್ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ವಿಜೇತರಿಗೆ ಶಾಸಕ ಅನಿಲ್ ಚಿಕ್ಕಮಾದು ಬಹುಮಾನವನ್ನು ವಿತರಿಸಿದರು. ಇದೇ ಸಂದರ್ಭದಲ್ಲಿ ವನ್ಯಜೀವಿ ಛಾಯಾಗ್ರಾಹಕ ಜಿ.ಎಸ್.ರವಿಶಂಕರ್, ಜಿಲ್ಲಾ ಛಾಯಾಗ್ರಾಹಕರ ಸಂಘದ ಅಧ್ಯಕ್ಷ ರವಿ ಕುಮಾರ್, ತಾಲೂಕು ಅಧ್ಯಕ್ಷ ರವಿ ಆರಾಧ್ಯ, ತಜಸೀಲ್ದಾರ್ ಶ್ರೀನಿವಾಸ್, ಛಾಯಾ ಚಿತ್ರದ ತೀರ್ಪುಗಾರ ಮಹೇಶ್ ಬರಣಿ, ಆದಿ ಕರ್ನಾಟಕ ಮಹಾಸಭಾ ಅಧ್ಯಕ್ಷ ಶಿವರಾಜು ಹೈರಿಗೆ, ತಾಲೂಕು ಛಾಯಾಗ್ರಾಹಕರ ಸಂಘದ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತು ಮಾಜಿ ಅಧ್ಯಕ್ಷರು, ಸದಸ್ಯರು ಹಾಜರಿದ್ದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…