Mysore
19
broken clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ಮತ್ತೊಮ್ಮೆ ವಿವಾದಾತ್ಮಕ ಹೇಳಿಕೆ ನೀಡಿದ ಪ್ರೊ.ಕೆ.ಎಸ್.ಭಗವಾನ್‌

ಮೈಸೂರು: ಹಿಂದೂ ಧರ್ಮದ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡುತ್ತಾ ವಿವಾದ ಸೃಷ್ಟಿಸುತ್ತಾ ಬಂದಿರುವ ಪ್ರೊ.ಕೆ.ಎಸ್.ಭಗವಾನ್‌ ಅವರು, ಈಗ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ದೇವಸ್ಥಾನಗಳನ್ನು ಕಟ್ಟುವುದು ಶೂದ್ರರು, ಆದರೆ ದೇವಸ್ಥಾನದ ಒಳಗೆ ಇರೋದು ಬ್ರಾಹ್ಮಣರು. ಹೀಗಾಗಿ ಶೂದ್ರರು ದೇವಸ್ಥಾನಗಳಿಗೆ ಹೋಗುವುದನ್ನು ನಿಲ್ಲಿಸಬೇಕು ಎಂದು ಹೇಳಿದ್ದಾರೆ.

ಮೈಸೂರಿನಲ್ಲಿ ನಡೆದ ಮಹಿಷ ದಸರಾದಲ್ಲಿ ಮಾತನಾಡಿದ ಅವರು, ಹಿಂದು ಧರ್ಮ ಎಂದರೆ ಅದು ಹಿಂದುಗಳು ಧರ್ಮ ಅಲ್ಲ. ಅದು ಬ್ರಾಹ್ಮಣರ ಧರ್ಮ. ಗಂಡಸರನ್ನು ಮಾತ್ರ ಬ್ರಾಹ್ಮಣರು ಅಂತಾರೆ. ಹೆಂಗಸರನ್ನು ಬ್ರಾಹ್ಮಣರು ಅನ್ನುವುದಿಲ್ಲ. ಅವರನ್ನು ಶೂದ್ರರು ಅಂತಾರೆ ಎಂದು ಹೇಳಿದ್ದಾರೆ. ಈ ಮೂಲಕ ಪ್ರೊ.ಕೆ.ಎಸ್.ಭಗವಾನ್‌ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿ, ಜನರ ಆಕ್ರೋಶಕ್ಕೆ ಗುರಿಯಾಗಿದ್ದಾರೆ.

 

Tags:
error: Content is protected !!