ಮೈಸೂರು ನಗರ

ಆನೆ ಕಂದಕ, ಸೌರ ಬೇಲಿಗಳ ಸಮರ್ಪಕ ನಿರ್ವಹಣೆ ಮಾಡಿ: ಸಚಿವ ಈಶ್ವರ್‌ ಖಂಡ್ರೆ

ಮೈಸೂರು: ನಗರದಲ್ಲಿ ಆನೆಗಳ ಹಾವಳಿ ಇರುವ ಪ್ರದೇಶಗಳಲ್ಲಿ ತೋಡಲಾಗಿರುವ ಆನೆ ಕಂದಕಗಳು ಮತ್ತು ಸೌರ ಬೇಲಿಗಳನ್ನು ಸಮರ್ಪಕವಾಗಿ ನಿರ್ವಹಣೆ ಮಾಡಿ ವರದಿ ನೀಡಬೇಕೆಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ನಗರದ ಅರಣ್ಯ ಭವನದಲ್ಲಿಂದು ಮಾತನಾಡಿದ ಅವರು, ಮಾನವ-ವನ್ಯಜೀವಿಗಳ ಸಂಘರ್ಷ ತಡೆಗಟ್ಟಲು ಪ್ರಾಣಿಗಳಿಗೆ ಅವಶ್ಯವಿರುವ ಸಸ್ಯಗಳನ್ನು ಕಾಡಿನಲ್ಲಿ ಬೆಳೆಸುವುದು. ಕುಡಿಯಲು ನೀರು ಗುಂಡಿಗಳು ಬತ್ತದಂತೆ ಸೌರ್‌ ಪಂಪ್‌ಸೆಟ್‌ ಮೂಲಕ ಕೊಳವೆ ಬಾವಿಗಳಿಂದ ನೀರು ಹರಿಸುವುದು ಸೇರಿದಂತೆ ಪ್ರಾಣಿಗಳು ನಾಡಿಗೆ ಬರದಂತೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಿದರು.

ಬೇಸಿಗೆಯಲ್ಲಿ ಕಾಡ್ಗಿಚ್ಚು ಕಾಣಿಸಿಕೊಂಡು ಅರಣ್ಯ ನಾಶವಾಗುತ್ತದೆ. ಇದಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ ಒಂದು ವೇಳೆ ಕಾಡ್ಗಿಚ್ಚು ಕಾಣಿಸಿಕೊಂಡರೆ ಕೂಡಲೇ ನಂದಿಸಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು. ಹಾಗೆಯೇ ಅಗ್ನಿಶಾಮಕ ಸಿಬ್ಬಂದಿ ಸನ್ನದ್ದವಾಗಿರುವಂತೆ ನಿರ್ದೇಶಿಸಲು ಸೂಚಿಸಿದರು.

ಮೈಸೂರು ನಗರವನ್ನು ಏಕ ಪ್ಲಾಸ್ಟಿಕ್‌ ಮುಕ್ತ ನಗರವೆಂದು ಘೋಷಿಸಿದ್ದು, ನಗರದಲ್ಲಿ ಪ್ಲಾಸ್ಟಿಕ್‌ ಕ್ಯಾರಿಬ್ಯಾಗ್‌, ಲೋಟ, ಬಾಟಲಿ ಸೇರಿದಂತೆ ಒಂದು ಬಾರಿ ಬಳಸಿ ಬೀಸಾಡುವ ಪ್ಲಾಸ್ಟಿಕ್‌ ಬಳಕೆಗೆ ಕಡಿವಾಣ ಹಾಕಬೇಕು. ತಪಾಸಣೆ ನಡೆಸಿ ಈ ರೀತಿಯ ಪ್ಲಾಸ್ಟಿಕ್‌ ಬಳಸುವ ಅಂಗಡಿಗಳಿಗೆ ದಂಡ ವಿಧಿಸಲು ಸೂಚನೆ ನೀಡಿದರು.

ರಾಜ್ಯದಲ್ಲಿ ಕಲುಷಿತ ನೀರು ಕುಡಿದು ಅಸ್ವಸ್ತರಾಗುತ್ತಿರುವ ಘಟನೆಗಳು ಇತ್ತೀಚಿಗೆ ವರದಿಯಾದ ಹಿನ್ನಲೆಯಲ್ಲಿ, ಕುಡಿಯುವ ನೀರು ಪೂರೈಕೆ ಮಾಡುವ ಟ್ಯಾಂಕ್‌ಗಳ ನೀರಿನ ಗುಣಮಟ್ಟ ಪರೀಕ್ಷಿಸುವಂತೆ ಪರಿಸರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಮೈಸೂರು ವೃತ್ತದ ಸಿಸಿಎಫ್‌ ಮಾಲತಿ ಪ್ರಿಯಾ, ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ಕೆ.ಎನ್‌. ಬಸವರಾಜು ಹಾಗೂ ಅರಣ್ಯ ಅಧಿಕಾರಿಗಳು ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

10 hours ago

ಮೃಗಾಲಯದ ಬೇಟೆ ಚೀತಾ ‘ಬ್ರೂಕ್’ ಇನ್ನಿಲ್ಲ

ಮೈಸೂರು : ವಿಶ್ವವಿಖ್ಯಾತ ಮೈಸೂರು ಶ್ರೀ ಚಾಮರಾಜೇಂದ್ರ ಮೃಗಾಲಯದಲ್ಲಿ ಚುರುಕಿನ ಚಟುವಟಿಕೆಯಿಂದ ಸದಾ ಸಂದರ್ಶಕರ ಗಮನ ಸೆಳೆಯುತ್ತಿದ್ದ ಸುಮಾರು ಸುಮಾರು…

10 hours ago

ಸಿಲಿಂಡರ್‌ ಸ್ಫೋಟ ಪ್ರಕರಣ : ತನಿಖೆ ತೀವ್ರ ; ಮೈಸೂರಲ್ಲಿ ಖಾಕಿ ಕಟ್ಟೆಚ್ಚರ

ಮೈಸೂರು : ಗುರುವಾರ ಸಂಜೆ ಮೈಸೂರಿನ ಅಂಬಾವಿಲಾಸ ಅರಮನೆ ಮುಂಭಾಗ ಸಂಭವಿಸಿದ ಹಿಲೀಯಂ ಸಿಲಿಂಡರ್ ಸ್ಪೋಟ ಪ್ರಕರಣ ಸಂಬಂಧ ನಗರದ…

10 hours ago

ಎಚ್.ಡಿ.ಕೋಟೆ | ತಾಲ್ಲೂಕಿನ ಶೈಕ್ಷಣಿಕ ಪ್ರಗತಿಗೆ ಮಾದರಿ ಕಾರ್ಯಕ್ರಮ

ಎಚ್.ಡಿ.ಕೋಟೆ : ತಾಲ್ಲೂಕಿನಲ್ಲಿ ಶೈಕ್ಷಣಿಕ ಪ್ರಗತಿಗೆ ಅಗತ್ಯವಾದ ಮಾದರಿ ಕಾರ್ಯಕ್ರಮಗಳನ್ನು ಹಗಲಿರುಳು ಎನ್ನದೆ ಶಿಕ್ಷಣ ಇಲಾಖೆಯವರು ನಡೆಸುತ್ತಿದ್ದಾರೆ ಎಂದು ಶಾಸಕ…

11 hours ago

ಹೊಗೇನಕಲ್‌ ಜಲಪಾತಕ್ಕೆ ಪ್ರವಾಸಿಗರ ದಂಡು

ಹನೂರು : ಕರ್ನಾಟಕದ ನಯಾಗಾರ ಎಂದೇ ಪ್ರಖ್ಯಾತಿ ಪಡೆದಿರುವ ಹೊಗೇನಕಲ್ ಜಲಪಾತ ನೋಡಲು ತಮಿಳುನಾಡಿನ ಭಾಗದಿಂದ ಪ್ರವಾಸಿಗರ ದಂಡೇ ಹರಿದುಬರುತ್ತಿದ್ದು,…

11 hours ago

ಪುಷ್ಪ-2 ಕಾಲ್ತುಳಿತ ಪ್ರಕರಣ ; ವರ್ಷದ ಬಳಿಕ ಚಾರ್ಜ್‌ಶೀಟ್‌ ಸಲ್ಲಿಕೆ

ಹೈದರಾಬಾದ್‌ : ಪುಷ್ಪ-2 ಸಿನಿಮಾ ವಿಶೇಷ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತ ಪ್ರಕರಣದಲ್ಲಿ ವರ್ಷದ ಬಳಿಕ ಇದೀಗ ಪೊಲೀಸರು ಕೋರ್ಟ್ಗೆ…

11 hours ago