ಮೈಸೂರು: ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ನ್ಯಾಯಾಲಯ ತೀರ್ಪು ನೀಡುವ ಮುನ್ನವೇ ತಮ್ಮ ತಂದೆಯವರಾದ ಸಿದ್ದರಾಮಯ್ಯ ಅವರ ಹೆಸರನ್ನು ಅನವಶ್ಯಕವಾಗಿ ಪ್ರಸ್ತಾಪ ಮಾಡುವುದು ಕಾನೂನು ಬಾಹಿರ ಎಂದು ವಿಧಾನ ಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ದೂರಿದ್ದಾರೆ.
ನಗರದಲ್ಲಿ ಇಂದು (ಜ.19) ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದ ತನಿಖೆ ಕುರಿತು ಸಿಬಿಐಗೆ ವಹಿಸಬೇಕೆ ಬೇಡವೇ ಎಂಬ ವಿಚಾರ ಜ.26 ರಂದು ನ್ಯಾಯಾಲಯದ ಮುಂದೆ ಬರುತ್ತಿದೆ. ಇಂತಹ ಸಮಯದಲ್ಲಿ ಇಡಿ ಅಧಿಕಾರಿಗಳು ನ್ಯಾಯಾಲಯವನ್ನು ತಪ್ಪು ದಾರಿಗೆಳೆಯಲು ಉದ್ದೇಶಪೂರ್ವಕವಾಗಿ ಟ್ವೀಟ್ ಮಾಡಿ ಹಂಚಿಕೊಳ್ಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ಕಾನೂನು ಪ್ರಕಾರ ಹೋರಾಟ ಮಾಡುತ್ತೇವೆ ಎಂದಿದ್ದಾರೆ ಎಂದು ಅಪ್ಪನ ಪರ ಬ್ಯಾಟ್ ಬೀಸಿದರು.
ಇಡಿ ಮುಟ್ಟುಗೋಲು ಹಾಕಿಕೊಂಡಿರುವ ನಿವೇಶನಗಳಲ್ಲಿ ತಾಯಿ ಪಾರ್ವತಿ ಅವರಿಗೆ ಹಂಚಿಕೆಯಾಗಿದ್ದ 14 ನಿವೇಶನಗಳು ಸೇರಿಲ್ಲ. ಆದರೂ ಬಿಜೆಪಿ ಸಿದ್ದರಾಮಯ್ಯ ಅವರ ಹೆಸರನ್ನು ಹಾಳುಮಾಡಲು ಈ ರೀತಿಯ ಪಿತೂರಿ ನಡೆಸುತ್ತಿದೆ ಎಂದು ಆರೋಪಿಸಿದರು.
50:50 ಅನುಪಾತದಡಿ ನಿವೇಶನಗಳು ಹಂಚಿಕೆಯಾಗಿರುವುದು ಬಿಜೆಪಿ ಸರ್ಕಾರದ ಅವಧಿಯಲ್ಲಿ. ಅಂದಿನ ಸರ್ಕಾರದಲ್ಲಿ ಇದ್ದ ಸಚಿವರು ಹಾಗೂ ಆಗಿನ ಅಧಿಕಾರಿಗಳನ್ನು ಬೇಕಾದರೆ ತನಿಖೆಗೆ ಒಳಪಡಿಸಲಿ ಎಂದು ಆಗ್ರಹಿಸಿದರು.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…