Health Officer Venkatesh
ಮೈಸೂರು: ಮಳೆಗಾಲದಲ್ಲಿ ಸೊಳ್ಳೆಗಳಿಂದ ಆರೋಗ್ಯ ಕಾಪಾಡಿಕೊಳ್ಳಿ ಎಂದು ಮೈಸೂರು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ವೆಂಕಟೇಶ್ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ಬಾರಿ ಮೈಸೂರಿಗೆ ಉತ್ತಮ ಮಳೆಯಾಗಿದ್ದು, ಮಳೆಯ ನೀರಿನಿಂದ ಸೊಳ್ಳೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಆದ್ದರಿಂದ ಜೂನ್ ತಿಂಗಳಲ್ಲಿ ಮಾರಣಾಂತಿಕ ಕಾಯಿಲೆ ಬರುವ ಸಾಧ್ಯತೆಗಳು ಹೆಚ್ಚಾಗಿದೆ. ನಿಂತ ನೀರಿನಿಂದ ಸೊಳ್ಳೆಗಳ ಸಂತಾನ ಹೆಚ್ಚಾಗಲಿದ್ದು, ನಾಗರೀಕರು ಸೊಳ್ಳೆ ಬಾರದ ಹಾಗೆ ಎಚ್ಚರವಹಿಸಿ, ಸ್ವಚ್ಛತೆ ಕಾಪಾಡಿಕೊಳ್ಳಬೇಕು ಎಂದು ಮನವಿ ಮಾಡಿದರು.
ಇನ್ನು ಜನತೆ ಕೋವಿಡ್ ಬಗ್ಗೆ ಭಯ ಪಡುವುದು ಬೇಡ. ನಾಗರೀಕರು ಎಲ್ಲೆಂದರಲ್ಲಿ ಕಸವನ್ನು ಬೀದಿಗೆ ಹಾಕಬಾರದು. ರಾತ್ರಿ ವೇಳೆ ಬೀದಿಬದಿ ವ್ಯಾಪಾರಸ್ಥರು ಹೆಚ್ಚಾಗಿ ಕಸ ಹಾಕುತ್ತಿದ್ದಾರೆ. ಬಿಸಾಕಿದ ಕಸವು ಮಳೆ ನೀರಿಗೆ ಸಿಲುಕಿ ಚರಂಡಿಗೆ ಸೇರಿಕೊಳ್ಳುತ್ತದೆ. ಇದರಿಂದ ಮಳೆಗಾಲದಲ್ಲಿ ನೀರು ಸರಾಗವಾಗಿ ಹರಿಯಲು ಸಾಧ್ಯವಾಗುವುದಿಲ್ಲ. ಆದ್ದರಿಂದ ನಮ್ಮೊಂದಿಗೆ ನಗರದ ಜನರು ಸಹಕರಿಸಬೇಕು. ಆರೋಗ್ಯದ ದೃಷ್ಟಿಯಿಂದ ಬೀದಿಬದಿ ಆಹಾರಗಳನ್ನು ಸೇವಿಸಬೇಡಿ ಎಂದು ಮನವಿ ಮಾಡಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ಕಸದ ಸಮಸ್ಯೆ ಇದ್ದರೆ ಪಾಲಿಕೆಗೆ ಒಂದೇ ಒಂದು ಕರೆ ಮಾಡಿ. ಕಸದ ಸಮಸ್ಯೆ ಎದುರಿಸಲು ನಮ್ಮ ತಂಡ ಸಜ್ಜಾಗಿದೆ. ಕಸ ಕಂಡಲ್ಲಿ ಒಂದೇ ಒಂದು ಫೋಟೋ ಅಥವಾ ಕರೆ ಮಾಡಿ ಮಾಹಿತಿ ನೀಡಿ. ಕೇವಲ ಒಂದೇ ಗಂಟೆಯಲ್ಲೇ ಸಮಸ್ಯೆ ಸರಿಪಡಿಸುತ್ತೇವೆ. ಎಲ್ಲೆಂದರಲ್ಲಿ ಕಸ ಬಿಸಾಕುವವರಿಗೆ ದಂಡ ಹಾಕುತ್ತಿದ್ದೇವೆ. ಕೆಲವು ಗಂಭೀರ ಪ್ರಕರಣವಿದ್ದರೆ ಎಫ್‌ಐಆರ್ ದಾಖಲಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.
ಬೆಂಗಳೂರು: ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣ ಹಾಗೂ ಸದನದಲ್ಲಿ ಚರ್ಚಿಸಬಹುದಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಾಲೋಚನೆ ನಡೆಸಲು ಜನವರಿ.28ರಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ…
ಬೆಂಗಳೂರು: ರಾಜ್ಯಪಾಲರು ಹಾಗೂ ಕಾಂಗ್ರೆಸ್ ಸರ್ಕಾರದ ನಡುವಿನ ಸಂಘರ್ಷ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರ್ನಾಟಕ ವಿಧಾನಸಭೆಯ ವಿಶೇಷ ಅಧಿವೇಶನದ ಮೊದಲ…
ದಾವಣಗೆರೆ: ಜಿಲ್ಲೆಯ ಆನಗೋಡಿನ ಇಂದಿರಾ ಪ್ರಿಯದರ್ಶಿನಿ ಕಿರು ಮೃಗಾಲಯದಲ್ಲಿ ನಾಲ್ಕು ಚುಕ್ಕೆ ಜಿಂಕೆಗಳ ಸಾವಿಗೆ ಕಾರಣ ಬಹಿರಂಗವಾಗಿದೆ. ನಾಲ್ಕು ಚುಕ್ಕೆ…
ಬೆಂಗಳೂರು: ವಾಲ್ಮೀಕಿ ಹಗರಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನೀಡಿದ್ದ ಜಾಮೀನು ರದ್ದು…
ಬೆಂಗಳೂರು: ರಾಜ್ಯಪಾಲರು ಭಾಷಣ ಓದದೇ ಸಂವಿಧಾನ ಉಲ್ಲಂಘಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ವಿಧಾನಸೌಧದಲ್ಲಿ ಮಾತನಾಡಿದ…
ಬೆಂಗಳೂರು: ವಿಧಾನಸೌಧದಲ್ಲಿ ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಬೇಕಿದ್ದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕೇವಲ ಎರಡನೇ ಮಾತಿನಲ್ಲಿ…