ಮೈಸೂರು ನಗರ

ಕಾಂಗ್ರೆಸ್‌ ಸಮಾವೇಶ ವಿರೋಧಿಸಿ ವಿಧಾನಸೌಧ ಮುಂಭಾಗ ಪ್ರತಿಭಟನೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್‌

ಬೆಂಗಳೂರು: ಸರ್ಕಾರದ ಹಣವನ್ನು ಬಳಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌ ಸರ್ಕಾರ ತನ್ನ ಪಕ್ಷದ ಸಮಾವೇಶವನ್ನು ಮಾಡುತ್ತಿರುವುದು ಖಂಡನೀಯ. ಇದರ ವಿರುದ್ಧ ವಿಧಾನಸೌಧ ಮುಂಭಾಗ ನಾಳೆ ಪ್ರತಿಭಟಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸ್ವಾತಂತ್ರ್ಯ ದೊರೆತ ನಂತರ ಕಾಂಗ್ರೆಸ್‌ ಪಕ್ಷವನ್ನು ವಿಸರ್ಜಿಸಿ ಎಂದು ಮಹಾತ್ಮ ಗಾಂಧೀಜಿ ಹೇಳಿದ್ದರು. ನಕಲಿ ಗಾಂಧಿಗಳು ಕಾಂಗ್ರೆಸ್‌ ಪಕ್ಷವನ್ನು ಮುನ್ನಡೆಸಿ ಈಗ ಬೆಳಗಾವಿಯಲ್ಲಿ ಸಮಾವೇಶ ಮಾಡುತ್ತಿದ್ದಾರೆ. ಗಾಂಧೀಜಿ ಬಹಳ ಸರಳವಾಗಿದ್ದರು. ಆದರೆ ಕಾಂಗ್ರೆಸ್‌ ನಾಯಕರು ಆಡಂಬರದ ಬದುಕು ನಡೆಸುತ್ತಿದ್ದಾರೆ. ಪ್ರಧಾನಿ, ಗೃಹ ಸಚಿವರು, ಎಚ್‌.ಡಿ.ಕುಮಾರಸ್ವಾಮಿ, ಸಂಸದರು, ಯಾರನ್ನೂ ಆಹ್ವಾನಿಸದೆ ಕಾಂಗ್ರೆಸ್‌ ಪಕ್ಷದ ನಾಯಕರನ್ನು ಮಾತ್ರ ಸಮಾವೇಶಕ್ಕೆ ಆಹ್ವಾನಿಸಲಾಗಿದೆ. ಇದು ಸರ್ಕಾರಿ ಕಾರ್ಯಕ್ರಮವಲ್ಲ, ಕಾಂಗ್ರೆಸ್‌ ಪಕ್ಷದ ಕಾರ್ಯಕ್ರಮ ಎಂದು ದೂರಿದರು.

ಇದು ಕಾಂಗ್ರೆಸ್‌ನ ಕಾರ್ಯಕ್ರಮವಾಗಿರುವುದರಿಂದ ನಾವ್ಯಾರೂ ಹೋಗುವುದಿಲ್ಲ. ವಿಧಾನಸೌಧ ಮುಂಭಾಗದ ಗಾಂಧಿ ಪ್ರತಿಮೆಗೆ ನಾವೆಲ್ಲರೂ ಪುಷ್ಪ ನಮನ ಸಲ್ಲಿಸಲಿದ್ದೇವೆ ಎಂದು ತಿಳಿಸಿದರು.

ಕಾಂಗ್ರೆಸ್‌ನವರು ಅಖಂಡ ಭಾರತವನ್ನು ಒಡೆದು ಹಾಕಿದ್ದರು. ನಾವು ಅಖಂಡ ಭಾರತದ ಚಿತ್ರ ತೋರಿಸಿದರೆ, ಕಾಂಗ್ರೆಸ್‌ನವರು ಜಮ್ಮು-ಕಾಶ್ಮೀರ ಇಲ್ಲದ ಭಾರತದ ಚಿತ್ರ ತೋರಿಸುತ್ತಿದ್ದಾರೆ. ಭಾರತದ ಭೂಪಟವನ್ನೇ ಛಿದ್ರ ಮಾಡಿರುವುದು ಖಂಡನೀಯ. ಕಾಂಗ್ರೆಸ್‌ ಇಡೀ ದೇಶವನ್ನು ಒಡೆಯುವ ಮನಸ್ಥಿತಿ ಹೊಂದಿದೆ ಎಂದು ಕಿಡಿಕಾರಿದರು.

ಬಾಬಾ ಸಾಹೇಬ್‌ ಅಂಬೇಡ್ಕರ್‌ ಎಂದೂ ಕೂಡ ಕಾಂಗ್ರೆಸ್‌ನ ನಾಯಕರಾಗಿರಲಿಲ್ಲ. ಅವರು ಕಾಂಗ್ರೆಸ್‌ ಪಕ್ಷವನ್ನು ವಿರೋಧಿಸಿ, ಸರ್ಕಾರದ ವಿರುದ್ಧ ನಿಂತಿದ್ದರು. ತಮ್ಮದೇ ಪಕ್ಷ ಆರಂಭಿಸಿ ಅಲ್ಲಿಂದಲೇ ಸ್ಪರ್ಧಿಸಿದ್ದರು. ಅವರು ಚುನಾವಣೆಗೆ ನಿಂತಾಗ ಜವಹರಲಾಲ್‌ ನೆಹರು ಅವರ ವಿರುದ್ಧ ಪ್ರಚಾರ ಮಾಡಿ, ಅಂಬೇಡ್ಕರ್‌ ಸೋಲಿಸಿ ಎಂಬ ಸಂದೇಶ ನೀಡಿದ್ದರು. ಈಗ ಕಾಂಗ್ರೆಸ್‌ ನಾಯಕರು ಯಾವ ಮುಖ ಇಟ್ಟುಕೊಂಡು ಪ್ರತಿಭಟನೆ ಮಾಡುತ್ತಿದ್ದಾರೆ? ಎಂದು ಪ್ರಶ್ನಿಸಿದರು.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಹನೂರು ತಾಲ್ಲೂಕಿನಲ್ಲಿ ಕೇಂದ್ರ ಬರ ಅಧ್ಯಯನ ತಂಡದಿಂದ ಎರಡನೇ ದಿನದ ಸಮಗ್ರ ಪರಿಶೀಲನೆ

ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…

11 hours ago

ಬಿರುಗಾಳಿ ಮಳೆಗೆ ಬಾಳೆ ಬೆಳೆ ನೆಲಕಚ್ಚಿ:ರೈತರಿಗೆ ಲಕ್ಷಾಂತರ ರೂ. ನಷ್ಟ!

ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…

11 hours ago

ಕಾಡುಪ್ರಾಣಿಗಳ ಹಾವಳಿ ತಡೆಗೆ ಸ್ಟೀಲ್ ರೋಪ್ ಬ್ಯಾರಿಕೇಡ್

ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ  ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…

12 hours ago

ದಸರೆಯಲ್ಲಿ ಹೊಸ ಸಂಪ್ರದಾಯಕ್ಕೆ ಮುನ್ನುಡಿ ಬರೆದ ಮುಖ್ಯಮಂತ್ರಿ

ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…

12 hours ago

ಪೌರಕಾರ್ಮಿಕರಿಗೆ ಉಚಿತ ಸಾಬೂನು ಗ್ಯಾರಂಟಿ ಕೊಡಿ

ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…

12 hours ago

ಅಸ್ತ್ರಗಳು, ಅಂಧಕಾರ, ಆತಂಕ

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ   ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…

13 hours ago