ಮೈಸೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿಗಳಾದ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ವಿರುದ್ಧ ಮತ್ತು ಜೈನರ ಬಗ್ಗೆ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅವಹೇಳನಕಾಕರಿ ಹೇಳಿಕೆಗಳನ್ನು ಖಂಡಿಸಿ ಜೈನ ಸಮಾಜದಿಂದ ಶಾಂತಿಯುತ ಮೌನ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಶ್ರೀ ದಿಗಂಬರ ಜೈನ ಸಮಾಜದ ಮುಖಂಡರು ಹಾಗೂ ಕಾರ್ಯಕರ್ತರು, ಭಿತ್ತಿ ಪತ್ರಗಳನ್ನು ಹಿಡಿದು ಮೌನ ಪ್ರತಿಭಟನೆ ನಡೆಸಿದರು.
108 ಆಚಾರ್ಯ ಶ್ರೀ ಪುಣ್ಯಸಾಗರ ಮುನಿ ಮಹಾರಾಜರ ನೇತೃತ್ವದಲ್ಲಿ ನಡೆದ ಶಾಂತಿಯುತ ಮೌನ ಪ್ರತಿಭಟನೆಯಲ್ಲಿ ಶ್ರೀ ದಿಗಂಬರ ಜೈನ ಸಮಾಜದ ನೂರಾರು ಮಂದಿ ಭಾಗಿಯಾಗಿ ಜೈನ ಧರ್ಮದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡುತ್ತಿರುವ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು.





