ಮೈಸೂರು: ರಸಗೊಬ್ಬರ ಖರೀದಿಗೆ ಎಫ್ಐಡಿ ಕಡ್ಡಾಯ ಮಾಡಿರುವುದನ್ನು ವಿರೋಧಿಸಿ ರೈತ ಮುಖಂಡರು ಪ್ರತಿಭಟನೆ ನಡೆಸಿದರು.
ಮೈಸೂರಿನ ಕಾಡಾ ಕಛೇರಿ ಆವರಣದಲ್ಲಿರುವ ಜಂಟಿ ಕೃಷಿ ನಿರ್ದೇಶಕರ ಕಚೇರಿ ಮುಂದೆ ಜಮಾಯಿಸಿದ ರೈತರು ಕೇಂದ್ರ ಸರ್ಕಾರದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕಬ್ಬು ಬೆಳೆಗಾರರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರ ಎರಡು ಕೂಡ ರೈತರನ್ನು ಕೃಷಿಯಿಂದ ಒಕ್ಕಲು ಎಬ್ಬಿಸುವ ಕೆಲಸ ಮಾಡುತ್ತಿವೆ.
ರೈತರ ಕೃಷಿ ಆದಾಯವನ್ನು 2026ಕ್ಕೆ ದ್ವಿಗುಣ ಗೊಳಿಸುತ್ತೇವೆ ಎಂದು ನರೇಂದ್ರ ಮೋದಿ ಪ್ರಚಾರ ಮಾಡುತ್ತಿದ್ದಾರೆ. ಆದರೆ ಕೃಷಿ ಆದಾಯ ದ್ವಿಗುಣಗೊಳ್ಳದೆ ಕೃಷಿಗೆ ಬಳಸುವ ರಸಗೊಬ್ಬರದ ಬೆಲೆ ಏರಿಕೆಯಾಗಿದೆ.
ರಾಜ್ಯದಲ್ಲಿ ಎರಡು ಕೋಟಿ ಟನ್‌ನಷ್ಟು ಯೂರಿಯಾ ರೈತರಿಗೆ ಬೇಕಾಗಿದೆ. ಆದರೆ 50% ರಸಗೊಬ್ಬರ ಇದೆ. ರೈತರಿಗೆ 50% ರಸ ಗೊಬ್ಬರದ ಕೊರತೆ ಆಗುವ ಸಾಧ್ಯತೆ ಇದೆ. ಎಫ್ ಐ ಡಿ ಇಲ್ಲದೆ ಬಗರು ಹುಕುಂ, ಗುತ್ತಿಗೆ ಮಾಡುವ ರೈತರ ಜಮೀನು, 10-15% ಪೌತಿ ಖಾತೆ ಆಗಿರುವುದಿಲ್ಲ. ಇವರಿಗೆ ರಸಗೊಬ್ಬರ ಕೊಡುವವರು ಯಾರು?. ರಾಜ್ಯ ಸರ್ಕಾರ ಪರ್ಯಾಯ ಮಾರ್ಗವನ್ನು ಕಂಡುಹಿಡಿದು ರೈತರಿಗೆ ರಸ ಗೊಬ್ಬರ ದೊರೆಯುವಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…
ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…