ಮೈಸೂರು ನಗರ

ವಿಷ್ಣು ಸಮಾಧಿ ತೆರವು ಖಂಡಿಸಿ ಪೌರಕಾರ್ಮಿಕರಿಂದ ಪ್ರತಿಭಟನೆ

ಮೈಸೂರು : ಪೌರಕಾರ್ಮಿಕರ ವತಿಯಿಂದ ಬೆಂಗಳೂರಿನ ಅಭಿಮಾನ್ ಸ್ಟುಡಿಯೋದಲ್ಲಿರುವ ಡಾ.ವಿಷ್ಣುವರ್ಧನ್ ರವರ ಪುಣ್ಯಭೂಮಿ ದ್ವಂಸ ಮಾಡಿರುವುದನ್ನು ಖಂಡಿಸಿ ಪೌರಕಾರ್ಮಿಕರು ಪ್ರತಿಭಟನೆ ನಡೆಸಿದರು.

ನಗರದ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನ ಎದುರಿನ ಡಾ.ವಿಷ್ಣುವರ್ಧನ್ ಉದ್ಯಾನವನ ಮುಂಭಾಗ ಜಮಾವಣೆಗೊಂಡ ಪ್ರತಿಭಟನಕಾರರು, ವಿಷ್ಣು ಪರ ಘೋಷಣೆ ಕೂಗಿದರು.

ಬಳಿಕ ಮಾತನಾಡಿದ ಮಾಜಿನಗರ ಪಾಲಿಕಾ ಸದಸ್ಯ ಎಂ.ಡಿ ಪಾರ್ಥಸಾರಥಿ, ಡಾ.ವಿಷ್ಣುವರ್ಧನ್ ಸಮಾಧಿಯ ಜಾಗವನ್ನು ಕೆಲವರು ತಮ್ಮ ಭೂಮಿ ಎಂದು ಹೇಳಿಕೊಂಡು, ಸಮಾಧಿಯನ್ನು ರಾತ್ರೋರಾತ್ರಿ ದ್ವಂಸ ಮಾಡಿರುವುದು ಲಕ್ಷಾಂತರ ಅಭಿಮಾನಿಗಳಿಗೆ ನೋವು ತಂದಿದೆ. ಸರ್ಕಾರ ಈ ಕೂಡಲೇ ಕನ್ನಡ ಮತ್ತು ಸಂಸ್ಕೃತಿಯ ಪ್ರತೀಕವಾಗಿ ಅಭಿವೃದ್ಧಿಪಡಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯು ಈ ಭೂಮಿಯನ್ನು ತಕ್ಷಣ ಸ್ವಾಧೀನ ಪಡಿಸಿಕೊಂಡು ಮಾಲೀಕರಿಗೆ ನಿಯಮಾನುಸಾರ, ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ನಂತರದಲ್ಲಿ ಮಾತನಾಡಿದ ಪೌರಕಾರ್ಮಿಕ ಮಹದೇವ್, ವಿಷ್ಣುವರ್ಧನ್ ಅವರ ಪುಣ್ಯಭೂಮಿ ಸರಿಪಡಿಸಬೇಕು ಎಂದು ಸರ್ಕಾರಕ್ಕೆ ಕೈಮುಗಿದು ಮನವಿ ಮಾಡಿದರು. ಇಲ್ಲವಾದಲ್ಲಿ ಸ್ವಚ್ಛತಾ ಕೆಲಸವನ್ನು ಬಿಟ್ಟು ಉಗ್ರವಾಗಿ ಪ್ರತಿಭಟಿಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಸಂತೋಷ್, ಕರುಣಾಮಯಿ ವಿಷ್ಣು ಅಭಿಮಾನಿ ಬಳಗದ ಅಧ್ಯಕ್ಷ ಎಸ್ ಎನ್ ರಾಜೇಶ್, ಪೌರಕಾರ್ಮಿಕರಾದ ಮುರುಗೇಶ್, ಪ್ಯಾಲೆಸ್ ಮಹದೇವ್, ಗೋಪಾಲ್, ಪಳನಿ, ಎಂ.ಪಿ ಮುರುಗೇಶ್, ಮಹದೇವ, ವಿಜಯ್ ಹಾಗೂ ಇನ್ನಿತರ ಪೌರಕಾರ್ಮಿಕರು ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

2 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

3 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

4 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

6 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

10 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

10 hours ago