ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ಬಂಧಿಸುವಂತೆ ಒತ್ತಾಯಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯ ಪ್ರಚಾರಕ್ಕಾಗಿ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ. ಒಳ ಮೀಸಲಾತಿ ವಿಚಾರವಾಗಿ ಅರೋಗ್ಯಕರವಾಗಿ ಹೋರಾಟ ನಡೆಸಲಿ. ಅದನ್ನು ಬಿಟ್ಟು ಸುಮ್ಮನೆ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಎಂಎಲ್‌ಸಿ ಡಾ.ತಿಮ್ಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದೇ ರೀತಿ ಮುಂದುವರಿದರೆ ಅವರಿಬ್ಬರ ವಿರುದ್ಧ ನಾವು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.





