ಮೈಸೂರು ನಗರ

ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರಿಂದ ಪ್ರತಿಭಟನೆ

ಮೈಸೂರು: ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳಕಾರಿ ಹೇಳಿಕೆ ನೀಡಿದ್ದ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಮೈಸೂರಿನ ಟೌನ್‌ಹಾಲ್‌ನಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಕೂಡಲೇ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ಬಂಧಿಸುವಂತೆ ಒತ್ತಾಯಿಸಿದರು. ‌

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯ ಪ್ರಚಾರಕ್ಕಾಗಿ ವಕೀಲ ಅರುಣ್ ಕುಮಾರ್ ಹಾಗೂ ಭಾಸ್ಕರ್ ಪ್ರಸಾದ್ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಮಾತನಾಡುತ್ತಿದ್ದಾರೆ. ಒಳ ಮೀಸಲಾತಿ ವಿಚಾರವಾಗಿ ಅರೋಗ್ಯಕರವಾಗಿ ಹೋರಾಟ ನಡೆಸಲಿ. ಅದನ್ನು ಬಿಟ್ಟು ಸುಮ್ಮನೆ ಸಚಿವ ಹೆಚ್.ಸಿ.ಮಹದೇವಪ್ಪ ಹಾಗೂ ಎಂಎಲ್‌ಸಿ ಡಾ.ತಿಮ್ಮಯ್ಯ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ. ಇದೇ ರೀತಿ ಮುಂದುವರಿದರೆ ಅವರಿಬ್ಬರ ವಿರುದ್ಧ ನಾವು ಉಗ್ರ ಹೋರಾಟ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಆಂದೋಲನ ಡೆಸ್ಕ್

Recent Posts

ಕುಕ್ಕರಹಳ್ಳಿ ಕೆರೆಯಲ್ಲಿ ಕಟ್ಟಡ ನಿರ್ಮಾಣಕ್ಕೆ ವಿರೋಧ ; ಪ್ರತಿಭಟನೆ

ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…

2 mins ago

2 ಸಾವಿರ ಬೋಧಕ ಹುದ್ದೆಗಳಿಗೆ ನೇಮಕಾತಿ : ಉನ್ನತ ಶಿಕ್ಷಣ ಸಚಿವ ಸುಧಾಕರ್‌

ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…

18 mins ago

ಎಲ್‌ಪಿಜಿ ಗ್ರಾಹಕರಿಗೆ ಬಯೋಮೆಟ್ರಿಕ್ ದೃಢಿಕರಣ ಕಡ್ಡಾಯಗೊಳಿಸಿದ ಕೇಂದ್ರ ಸರ್ಕಾರ

ಹೊಸದಿಲ್ಲಿ : ಹಾರ್ಮುಜ್ ಜಲಸಂಧಿ ಸಂಘರ್ಷದಿಂದ ಉಂಟಾದ ಅಡುಗೆ ಅನಿಲ (ಎಲ್‌ಪಿಜಿ) ಸರಬರಾಜು ಕೊರತೆಯ ನಡುವೆ ಕೇಂದ್ರ ಪೆಟ್ರೋಲಿಯಂ ಮತ್ತು…

27 mins ago

ಜಾಹೀರಾತು ಫಲಕಗಳಲ್ಲಿ ಪ್ಲಾಸ್ಟಿಕ್ ನಿಷೇಧ : ಬೈರತಿ ಸುರೇಶ್

• ಅನಧಿಕೃತ ಜಾಹೀರಾತು ಹಾಕಿದರೆ ಕ್ರಿಮಿನಲ್ ಕೇಸ್ • ವಿಧಾನಸಭೆಯಲ್ಲಿ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಜಾಹೀರಾತು ನೀತಿ ಮಸೂದೆ ಮಂಡನೆ,…

1 hour ago

ವಕ್ಫ್‌ ಒತ್ತುವರಿ ಆಸ್ತಿ ತೆರವಿಗೆ ಕ್ರಮ : ಸಚಿವ ಜಮೀರ್‌ ಅಹಮದ್‌

ಬೆಂಗಳೂರು : ರಾಜ್ಯದಲ್ಲಿ ವಕ್ಛ್ ಆಸ್ತಿಗಳ ಒತ್ತುವರಿಯನ್ನು ತೆರವುಗೊಳಿಸಿ ಆಸ್ತಿಗಳನ್ನು ಮರಳಿ ಪಡೆಯಲು ಎಲ್ಲ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ವಸತಿ,…

2 hours ago

ಒಳಮೀಸಲಾತಿ ಮೂಲಕ ಪರಿಶಿಷ್ಟ ಜಾತಿಗಳನ್ನು ಒಡೆಯುತ್ತಿರುವ ಕಾಂಗ್ರೆಸ್ : ಬಿಎಸ್‌ಪಿ ಆರೋಪ

ಮಳವಳ್ಳಿ : ಒಳಮೀಸಲಾತಿ ಹೆಸರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಉದ್ದೇಶಪೂರ್ವಕವಾಗಿ ಪರಿಶಿಷ್ಟ ಜಾತಿಗಳನ್ನು ಒಡೆಯುವ ನೀತಿಯನ್ನು ಅನುಸರಿಸಿದೆ…

2 hours ago