Protest by differently-abled continues demanding fulfillment of various demands
ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿದಿದೆ.
ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ಮತ್ತು ಎಂಆರ್‌ಡಬ್ಲ್ಯೂ ಕಾರ್ಯಕರ್ತರು, ಕನಿಷ್ಠ ವೇತನ ಜಾರಿ ಇಲ್ಲನೇ ನೌಕರಿ ಖಾಯಂಗೆ ಒತ್ತಾಯಿಸಿದ್ದಾರೆ.
ವಿಕಲಚೇತನ ಕಾರ್ಯಕರ್ತರು ರಾಜ್ಯದಾದ್ಯಂತ ಗ್ರಾಮೀಣ, ಪಟ್ಟಣ, ನಗರ ಪ್ರದೇಶಗಳಲ್ಲಿ ಹಿರಿಯ ನಾಗರೀಕರಿಗೆ ಸರ್ಕಾರಿ ಸೇವಾ ಮತ್ತು ಸವಲತ್ತುಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಪ್ರತಿಭಟನೆಯಲ್ಲಿ ಮಾತನಾಡಿದ ವಿಕಲಚೇತನರು, ಮಾಸಿಕ ವೇತನ ಕೇವಲ 9 ಸಾವಿರಕ್ಕೆ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ನಮ್ಮನ್ನ ಕನಿಷ್ಠ ವೇತನಕ್ಕೆ ಸೇರ್ಪಡೆ ಮಾಡಬೇಕು.ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಬಂದಿದ್ದೇವೆ. ಸಿಎಂ ಮತ್ತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮ ಒತ್ತಾಯಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.
ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…