ಮೈಸೂರು ನಗರ

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿಕೆ

ಮೈಸೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿಕಲಚೇತನರ ಪ್ರತಿಭಟನೆ ಮುಂದುವರಿದಿದೆ.

ಮೈಸೂರಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಕಳೆದ ನಾಲ್ಕು ದಿನಗಳಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿರುವ ವಿಆರ್‌ಡಬ್ಲ್ಯೂ, ಯುಆರ್‌ಡಬ್ಲ್ಯೂ ಮತ್ತು ಎಂಆರ್‌ಡಬ್ಲ್ಯೂ ಕಾರ್ಯಕರ್ತರು, ಕನಿಷ್ಠ ವೇತನ ಜಾರಿ ಇಲ್ಲನೇ ನೌಕರಿ ಖಾಯಂಗೆ ಒತ್ತಾಯಿಸಿದ್ದಾರೆ.

ವಿಕಲಚೇತನ ಕಾರ್ಯಕರ್ತರು ರಾಜ್ಯದಾದ್ಯಂತ ಗ್ರಾಮೀಣ, ಪಟ್ಟಣ, ನಗರ ಪ್ರದೇಶಗಳಲ್ಲಿ ಹಿರಿಯ ನಾಗರೀಕರಿಗೆ ಸರ್ಕಾರಿ ಸೇವಾ ಮತ್ತು ಸವಲತ್ತುಗಳನ್ನು ಒದಗಿಸುವ ಕೆಲಸ ಮಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ಪ್ರತಿಭಟನೆಯಲ್ಲಿ ಮಾತನಾಡಿದ ವಿಕಲಚೇತನರು, ಮಾಸಿಕ ವೇತನ ಕೇವಲ 9 ಸಾವಿರಕ್ಕೆ ಕೆಲಸ ಮಾಡುತ್ತಿದ್ದೇವೆ. ಆದ್ದರಿಂದ ನಮ್ಮನ್ನ ಕನಿಷ್ಠ ವೇತನಕ್ಕೆ ಸೇರ್ಪಡೆ ಮಾಡಬೇಕು.ನಮ್ಮ ಬೇಡಿಕೆ ಈಡೇರಿಸುವವರೆಗೂ ಪ್ರತಿಭಟನೆಯಿಂದ ಹಿಂದೆ ಸರಿಯಲ್ಲ. ಸಿಎಂ ಸಿದ್ದರಾಮಯ್ಯ ಅವರನ್ನ ಭೇಟಿ ಮಾಡಲು ಬಂದಿದ್ದೇವೆ. ಸಿಎಂ ಮತ್ತು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ನಮ್ಮ ಒತ್ತಾಯಗಳಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.

ಆಂದೋಲನ ಡೆಸ್ಕ್

Recent Posts

ಮೈಸೂರು | ಮಾನಸಗಂಗೋತ್ರಿಯಲ್ಲಿ ಜಾನಪದ ಝೇಂಕಾರ

ಮೈಸೂರು : ಪೂಜಾ ಕುಣಿತ, ಡೊಳ್ಳು ಕುಣಿತ, ಜಡೆ ಕೋಲಾಟ ಸೇರಿದಂತೆ ನಾನಾ ಜಾನಪದ ಕಲಾ ತಂಡಗಳು ಮಾನಸಗಂಗೋತ್ರಿ ಆವರಣದಲ್ಲಿ…

39 mins ago

ಬುಟಕಟ್ಟು ಕುಟುಂಬಗಳಿಗೆ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಣೆ

ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ…

50 mins ago

ಅಕ್ರಮ ದಾಸ್ತಾನುಗಳ ಮೇಲೆ ಜಂಟಿ ದಾಳಿ ಮಾಡಿ : ಸಚಿವ ರಿಜ್ವಾನ್‌ ಅರ್ಷದ್‌

ಮೈಸೂರು : ಅಕ್ರಮ ದಾಸ್ತಾನು, ಗ್ರಾಹಕರಿಗೆ ವಂಚನೆ ಇನ್ನಿತರ ಅಕ್ರಮಗಳ ಬಗ್ಗೆ ಆಹಾರ ಮತ್ತು ಕಾನೂನು ಮಾಪನ ಶಾಸ ಇಲಾಖೆ…

2 hours ago

ರೇಣುಕಾಸ್ವಾಮಿ ಕೊಲೆ ಪ್ರಕರಣ: ಮಾಫಿ ಸಾಕ್ಷಿ ಪ್ರದೋಷ್‌ ಹೇಳಿಕೆ ದಾಖಲು ಪ್ರಕ್ರಿಯೆ ಮುಂದೂಡಿಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಪ್ರಕರಣದಲ್ಲಿ ಮಾಫಿ ಸಾಕ್ಷಿಯಾಗಿ ಪರಿಗಣಿಸಲ್ಪಟ್ಟಿರುವ 14ನೇ ಆರೋಪಿ ಪ್ರದೋಷ್ ಹೇಳಿಕೆ ದಾಖಲಿಸುವ…

6 hours ago

ಆಹಾರ ಸುರಕ್ಷತೆ ಬಗ್ಗೆ ಕಳವಳ: ತಪಾಸಣೆಗೆ ಸಚಿವ ಯು.ಟಿ.ಖಾದರ್‌ ಸೂಚನೆ

ಮಂಗಳೂರು: ಜನರಿಗೆ ಶುದ್ಧ ಆಹಾರ ಪೂರೈಸುವ ನಿಟ್ಟಿನಲ್ಲಿ ತಜ್ಞರ ತಂಡದ ತಪಾಸಣೆ ನಿರಂತರವಾಗಿ ನಡೆಯಲಿದ್ದು, ಎರಡನೇ ಬಾರಿ ಲೋಪಗಳು ಕಂಡು…

7 hours ago

ನಾಗೇಂದ್ರ ರಾಜೀನಾಮೆ; ಅನಿಲ್‌ಗೆ ಸಚಿವ ಸ್ಥಾನ ಸಿಗುವುದೇ?

ಮಂಜು ಕೋಟೆ ಎಚ್.ಡಿ.ಕೋಟೆ: ನಾಯಕ ಸಮುದಾಯದ ಮುಖಂಡರಾದ ನಾಗೇಂದ್ರ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವ ಹಿನ್ನೆಲೆಯಲ್ಲಿ ತೆರವಾಗಿರುವ ಆ…

13 hours ago