ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ.
ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ ಯಾವುದೇ ಯೋಜನೆಗಳನ್ನು ನೀಡಿಲ್ಲ. ಪೌರ ಕಾರ್ಮಿಕರಿಗೆ ನೇರ ಪಾವತಿ ಮೂಲಕ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಈ ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿರುವುದರ ಕುರಿತಾಗಿ ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್ ಪ್ರತಿಭಟನೆ ಮಾಡುತ್ತೇವೆ. ಜಿಲ್ಲೆಯಾದ್ಯಂತ ಇರುವ 13 ಯುಎಲ್‌ಬಿಗಳಲ್ಲಿ ಕೆಲಸ ಮಾಡುವ ಸಾವಿರಾರು ಪೌರ ಕಾರ್ಮಿಕರುಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ. ಜೊತೆಗೆ ತಾಲೂಕು ಕೇಂದ್ರಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಲಿದ್ದಾರೆ.
ನೇರ ಪಾವತಿ ಇಲ್ಲದೇ ಏಜೆನ್ಸಿಗಳ ಮೂಲಕ ನಮಗೆ ವೇತನ ಸಿಗುತ್ತಿದೆ. ಅವರು ನಮಗೆ ಕಡಿಮೆ ಸಂಬಳ ನೀಡುತ್ತಾರೆ. ನೇರ ಪಾವತಿ ಮೂಲಕ ಸಂಬಳ ನೀಡಿದರೆ 21 ಸಾವಿರ ಸಿಗುತ್ತದೆ. ಏಜೆನ್ಸಿಗಳ ಮೂಲಕ ಕೊಟ್ಟರೆ ಕೇವಲ 15 ಸಾವಿರ ಸಿಗುತ್ತದೆ. ಅದರಲ್ಲೂ ಖಾಸಗಿ ಏಜೆನ್ಸಿಯವರು ಸಮಯಕ್ಕೆ ಸರಿಯಾಗಿ ಸಂಬಳ ನೀಡುವುದಿಲ್ಲ. ಆದ ಕಾರಣ ನೇರ ಪಾವತಿ ಮೂಲಕ ಸರ್ಕಾರವೇ ವೇತನ ಹಾಕಬೇಕು ಎಂದು ಆಗ್ರಹಿಸುತ್ತೇವೆ ಎಂದರು.
ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಮಂಚಯ್ಯ, ವಸಂತ ಕುಮಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.
ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ತಾಲ್ಲೂಕು ಮಟ್ಟದಲ್ಲಿ ಕರ್ನಾಟಕ ಗೃಹ ಮಂಡಳಿ(ಕೆಎಚ್‌ಬಿ) ಯಿಂದ ಮನೆಗಳನ್ನು ನಿರ್ಮಾಣ ಮಾಡಿ ಹಂಚಿಕೆ ಮಾಡಿದ್ದು…
ರಾಜ್ಯದಲ್ಲಿ, ಸುಮಾರು ಮೂರು ಸಾವಿರಕ್ಕೂ ಹೆಚ್ಚು ಸರ್ಕಾರಿ ಶಾಲಾ ಕಟ್ಟಡಗಳು ಶಿಥಿಲಗೊಂಡು, ಈ ಶಾಲೆಗಳು ಕುಸಿಯುವ ಹಂತ ತಲುಪಿವೆ ಎಂದು,…
ಎಚ್.ಡಿ.ಕೋಟೆ ತಾಲ್ಲೂಕಿನ ಮಾದಾಪುರ ಗ್ರಾಮದಿಂದ ಕೆಂಡಗಣ್ಣಸ್ವಾಮಿ ಗದ್ದಿಗೆ ಮಾರ್ಗವಾಗಿ ದಿನನಿತ್ಯ ಸಾವಿರಾರು ವಾಹನಗಳು ಸಂಚರಿಸುತ್ತವೆ. ರಸ್ತೆಯ ಎರಡೂ ಬದಿಗಳಲ್ಲಿರುವ ಬಹುತೇಕ…
ಮೈಸೂರು ಮಹಾರಾಜರ ಕಾಲದಲ್ಲಿ ನಿರ್ಮಾಣಗೊಂಡ ಕಟ್ಟಡಗಳು ಇಂದಿಗೂ ಸದೃಢವಾಗಿ ಕಂಗೊಳಿಸುತ್ತಿರುವುದು ಮೈಸೂರಿನ ಭವ್ಯ ಪರಂಪರೆಗೆ ಸಾಕ್ಷಿಯಾಗಿವೆ. ಇಂತಹ ಪಾರಂಪರಿಕ ಕಟ್ಟಡಗಳ…
ಮಡಿಕೇರಿ: ಓದುವ ಛಲ, ಆತ್ಮವಿಶ್ವಾಸ, ಪ್ರೋತ್ಸಾಹ, ಮಾರ್ಗದರ್ಶನವಿದ್ದರೆ ಮಕ್ಕಳು ಸರ್ಕಾರಿ ಕಾಲೇಜಿನಲ್ಲಿ ಓದಿದರೂ ಉತ್ತಮ ಅಂಕ ಗಳಿಸಲು ಸಾಧ್ಯವಿದೆ. ಇದಕ್ಕೆ…
ಪಿರಿಯಾಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಪಿರಿಯಾಪಟ್ಟಣ: ತಂಗಿಗೆ ಆಸ್ತಿಯನ್ನು ನೀಡಲೇಬಾರದು ಎಂದು ತೀರ್ಮಾನಿಸಿ ತನ್ನ ಸೋದರ ಅಳಿಯನನ್ನು ಕೊಲ್ಲಲು…