ಮೈಸೂರು ನಗರ

ಬಜೆಟ್‌ನಲ್ಲಿ ಪೌರ ಕಾರ್ಮಿಕರ ಕಡೆಗಣನೆ ಖಂಡಿಸಿ ನಾಳೆ ಪ್ರತಿಭಟನೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಸ್ವಚ್ಚತಾ ನೌಕರರನ್ನು ಕಡೆಗಣನೆ ಮಾಡಿರುವುದನ್ನು ಖಂಡಿಸಿ ನಾಳೆ ಮೈಸೂರಿನಲ್ಲಿ ಪ್ರತಿಭಟನೆ ನಡೆಸಲು ಪೌರಕಾರ್ಮಿಕರು ಮುಂದಾಗಿದ್ದಾರೆ.

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ರಾಜ್ಯಾಧ್ಯಕ್ಷ ಡಿ.ಆರ್‌.ರಾಜು, ರಾಜ್ಯ ಬಜೆಟ್‌ನಲ್ಲಿ ನಮ್ಮ ಪರವಾದ ಯಾವುದೇ ಯೋಜನೆಗಳನ್ನು ನೀಡಿಲ್ಲ. ಪೌರ ಕಾರ್ಮಿಕರಿಗೆ ನೇರ ಪಾವತಿ ಮೂಲಕ ವೇತನ ನೀಡುವುದಾಗಿ ಸರ್ಕಾರ ಭರವಸೆ ನೀಡಿತ್ತು. ಆದರೆ, ಈ ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬಜೆಟ್‌ನಲ್ಲಿ ನಮ್ಮನ್ನು ಕಡೆಗಣಿಸಿರುವುದರ ಕುರಿತಾಗಿ ನಾಳೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬೃಹತ್‌ ಪ್ರತಿಭಟನೆ ಮಾಡುತ್ತೇವೆ. ಜಿಲ್ಲೆಯಾದ್ಯಂತ ಇರುವ 13 ಯುಎಲ್‌ಬಿಗಳಲ್ಲಿ ಕೆಲಸ ಮಾಡುವ ಸಾವಿರಾರು ಪೌರ ಕಾರ್ಮಿಕರುಈ ಪ್ರತಿಭಟನೆಗೆ ಸಹಕಾರ ನೀಡಿದ್ದಾರೆ. ಜೊತೆಗೆ ತಾಲೂಕು ಕೇಂದ್ರಗಳಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಮಿಕರು ಆಗಮಿಸಲಿದ್ದಾರೆ.

ನೇರ ಪಾವತಿ ಇಲ್ಲದೇ ಏಜೆನ್ಸಿಗಳ ಮೂಲಕ ನಮಗೆ ವೇತನ ಸಿಗುತ್ತಿದೆ. ಅವರು ನಮಗೆ ಕಡಿಮೆ ಸಂಬಳ ನೀಡುತ್ತಾರೆ. ನೇರ ಪಾವತಿ ಮೂಲಕ ಸಂಬಳ ನೀಡಿದರೆ 21 ಸಾವಿರ ಸಿಗುತ್ತದೆ. ಏಜೆನ್ಸಿಗಳ ಮೂಲಕ ಕೊಟ್ಟರೆ ಕೇವಲ 15 ಸಾವಿರ ಸಿಗುತ್ತದೆ. ಅದರಲ್ಲೂ ಖಾಸಗಿ ಏಜೆನ್ಸಿಯವರು ಸಮಯಕ್ಕೆ ಸರಿಯಾಗಿ ಸಂಬಳ ನೀಡುವುದಿಲ್ಲ. ಆದ ಕಾರಣ ನೇರ ಪಾವತಿ ಮೂಲಕ ಸರ್ಕಾರವೇ ವೇತನ ಹಾಕಬೇಕು ಎಂದು ಆಗ್ರಹಿಸುತ್ತೇವೆ ಎಂದರು.

ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ರಾಜ್ಯ ಪೌರ ಕಾರ್ಮಿಕರ ಸಂಘದ ಕಾರ್ಯಾಧ್ಯಕ್ಷ ಮಂಚಯ್ಯ, ವಸಂತ ಕುಮಾರಿ ಸೇರಿದಂತೆ ಹಲವರು ಭಾಗಿಯಾಗಿದ್ದರು.

 

ಆಂದೋಲನ ಡೆಸ್ಕ್

Recent Posts

ದಸರಾ ವೆಬ್‌ಸೈಟ್‌ ಲೋಕಾರ್ಪಣೆ : ಅ.11ರಿಂದ 21ರವರೆಗೆ ನಡೆಯಲಿರುವ ಕಾರ್ಯಕ್ರಮಗಳ ಮಾಹಿತಿ

ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…

12 hours ago

ತಮಿಳುನಾಡಿಗೆ ಕಾವೇರಿ ನೀರು: 3 ಸಾವಿರ ಕ್ಯೂಸೆಕ್‌ಗೆ ಇಳಿಸಲು ರಾಜ್ಯ ಸರ್ಕಾರ ಮನವಿ

ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್‌ ನೀರನ್ನು 3 ಸಾವಿರ…

14 hours ago

ರಾಜ್ಯ ರಾಜಕೀಯದಲ್ಲಿ ಮತ್ತೊಂದು ಮಹತ್ವದ ಬೆಳವಣಿಗೆ: ಸೆಪ್ಟೆಂಬರ್.18 ರಿಂದ ಅಮಿತ್ ಶಾ 2 ದಿನ ರಾಜ್ಯ ಪ್ರವಾಸ ‌

ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…

14 hours ago

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

19 hours ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

23 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

24 hours ago