ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯ ತೆವಲಿಗೋಸ್ಕರ ಯತೀಂದ್ರ ಸಿದ್ದರಾಮಯ್ಯ ಈ ರೀತಿ ಅವಹೇಳನ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಯತೀಂದ್ರ ಅವರು ನಾಲ್ವಡಿ ಕೃಷ್ಣರಾಜ ರಾಜ ಒಡೆಯರ್ ಅವರ ಕಾಲಿನ ಧೂಳಿಗೂ ಸಮ ಇಲ್ಲ. ವಿವಾದಾತ್ಮಕ ಹೇಳಿಕೆ ನೀಡಿರುವ ಯತೀಂದ್ರ ಈ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವರು ಭಾಗಿಯಾಗಿದ್ದರು.





