ಮೈಸೂರು ನಗರ

ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಮುಂದುವರಿದ ಪ್ರತಿಭಟನೆ

ಮೈಸೂರು: ನಾಲ್ವಡಿ ಕೃಷ್ಣರಾಜ ಒಡೆಯರ್‌ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಕನ್ನಡಾಂಬೆ ರಕ್ಷಣಾ ವೇದಿಕೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಮೈಸೂರಿನ ಹಳೆ ಜಿಲ್ಲಾಧಿಕಾರಿ ಕಚೇರಿ ಬಳಿ ಜಮಾಯಿಸಿದ ಕನ್ನಡಾಂಬೆ ರಕ್ಷಣಾ ವೇದಿಕೆ ಕಾರ್ಯಕರ್ತರು, ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಿವಿಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ರಾಜಕೀಯ ತೆವಲಿಗೋಸ್ಕರ ಯತೀಂದ್ರ ಸಿದ್ದರಾಮಯ್ಯ ಈ ರೀತಿ ಅವಹೇಳನ ಹೇಳಿಕೆ ಕೊಡುವುದನ್ನು ನಿಲ್ಲಿಸಬೇಕು. ಯತೀಂದ್ರ ಅವರು ನಾಲ್ವಡಿ ಕೃಷ್ಣರಾಜ ರಾಜ ಒಡೆಯರ್‌ ಅವರ ಕಾಲಿನ ಧೂಳಿಗೂ ಸಮ ಇಲ್ಲ. ವಿವಾದಾತ್ಮಕ ಹೇಳಿಕೆ ನೀಡಿರುವ ಯತೀಂದ್ರ ಈ ಕೂಡಲೇ ಬಹಿರಂಗವಾಗಿ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಪ್ರತಿಭಟನೆ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.

ಕನ್ನಡಾಂಬೆ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ರಾಜಶೇಖರ್ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಹಲವರು ಭಾಗಿಯಾಗಿದ್ದರು.

ಆಂದೋಲನ ಡೆಸ್ಕ್

Recent Posts

ಯುದ್ಧಕ್ಕೆ ದಿನಾಂಕ ಫಿಕ್ಸ್: ‘ವಿಜಯದಶಮಿ’ಗೆ ಸಮರ ಸಾರಿದ ಕೇಂದ್ರ ಸಚಿವ ಎಚ್‌ಡಿಕೆ

ಹಾಸನ: ಇಡೀ ದೇಶವೇ ಅಲ್ಲೋಲ, ಕಲ್ಲೋಲ ಆಗುವ ಸುದ್ದಿ ಕೊಡುತ್ತೇನೆ ಎಂಬ ಮಾತನ್ನು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪುನರುಚ್ಛರಿಸಿದ್ದಾರೆ. ಈ…

12 hours ago

ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ಘೋಷಿಸಿದ ಪಾಕ್‌

ಇಸ್ಲಾಮಾಬಾದ್:‌ ಉಗ್ರ ಮಸೂದ್‌ ಅಜರ್‌ ಸುಳಿವು ಕೊಟ್ಟವರಿಗೆ 24 ಲಕ್ಷ ರೂ ಬಹುಮಾನ ನೀಡುವುದಾಗಿ ಪಾಕಿಸ್ತಾನ ಘೋಷಣೆ ಮಾಡಿದೆ. ದೇಶದ…

12 hours ago

ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ

ಬೆಂಗಳೂರು: ಮುಂಗಾರು ಮಳೆಯ ಅಬ್ಬರ ಕಾಣಬೇಕಿದ್ದ ಸೆಪ್ಟೆಂಬರ್ ತಿಂಗಳಲ್ಲೇ ಕರ್ನಾಟಕದಲ್ಲಿ ಬಿರು ಬೇಸಿಗೆಯ ವಾತಾವರಣ ನಿರ್ಮಾಣವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ…

13 hours ago

ಅದ್ದೂರಿ ಶ್ರೀರಂಗಪಟ್ಟಣ ದಸರಾ ಬದಲು ಸಾಂಪ್ರದಾಯಿಕ ಆಚರಣೆ: ಸಚಿವ ಎನ್. ಚಲುವರಾಯಸ್ವಾಮಿ

ಮಂಡ್ಯ: ಮೈಸೂರು ದಸರಾಗಿಂತಲೂ ಪುರಾತನವಾದ ಶ್ರೀರಂಗಪಟ್ಟಣ ದಸರಾವನ್ನು ಈ ಬಾರಿ ಬರಗಾಲದ ಹಿನ್ನೆಲೆಯಲ್ಲಿ ಅದ್ದೂರಿತನದ ಬದಲು ಸಾಂಪ್ರದಾಯಿಕವಾಗಿ ಆಚರಿಸಲು ತೀರ್ಮಾನಿಸಲಾಗಿದೆ…

13 hours ago

ಹನೂರು: ಬಿಸಿಯೂಟಕ್ಕೂ ನೀರಿಲ್ಲ – ಖಾಲಿ ಬಿಂದಿಗೆ ಹಿಡಿದು ವಿದ್ಯಾರ್ಥಿಗಳ ಪ್ರತಿಭಟನೆ

ಹನೂರು: ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂದನಪಾಳ್ಯ ಗ್ರಾಮದ ಸೆಂಟ್ ಆಂಥೋನಿ ಶಾಲೆಯಲ್ಲಿ ಕಳೆದ ಆರು ತಿಂಗಳಿನಿಂದ ಕುಡಿಯುವ…

14 hours ago

ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಜವರಾಯನ ಅಟ್ಟಹಾಸ: ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಸಾವು

ಮಂಡ್ಯ: ಬೈಕ್‌ಗೆ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ಮಂಡ್ಯ…

17 hours ago