Mysore
18
clear sky

Social Media

ಗುರುವಾರ, 22 ಜನವರಿ 2026
Light
Dark

ಚಾಮುಂಡಿಬೆಟ್ಟದಲ್ಲಿ ನಡೆಯುತ್ತಿರುವ ಕಾಮಗಾರಿ ವಿರೋಧಿಸಿ ಮುಂದುವರಿದ ಪ್ರತಿಭಟನೆ

ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು ಹಾಗೂ ವಿವಿಧ ಎನ್‌ಜಿಒ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.

ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ನಿರ್ಮಾಣ ಕಾರ್ಯಗಳಿಂದ ದೇವಾಲಯದ ಗರ್ಭಗುಡಿ ಸಮೀಪ ಹಾಗೂ ಬೆಟ್ಟದ ತುದಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಪ್ರದೇಶವು ಪರಿಸರದ ದೃಷ್ಟಿಯಿಂದ ಅತೀ ಸೂಕ್ಷ್ಮವಾಗಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವು ಯಾವುದೇ ಸಮರ್ಪಕ ವೈಜ್ಞಾನಿಕ ಅನುಮೋದನೆ, ಪರಿಸರ ಅನುಮತಿ ಹಾಗೂ ಆಧ್ಯಾತ್ಮಿಕ ಅನುಮತಿ ಪಡೆಯದೇ ಈ ಕಾರ್ಯಗಳನ್ನು ಮುಂದುವರಿಸುತ್ತಿರುವುದು ಅತ್ಯಂತ ಅಪಾಯಕಾರಿ. ಇದರಿಂದ ಬೆಟ್ಟದ ಪಾರಂಪರಿಕ ಮೌಲ್ಯಕ್ಕೆ ಧಕ್ಕೆ ಉಂಟಾಗುವುದಲ್ಲದೆ, ಈಗಾಗಲೇ ನಾಜೂಕಾಗಿರುವ ಪರಿಸರ ವ್ಯವಸ್ಥೆಗೆ ಅಪಾರ ಹಾನಿ ಸಂಭವಿಸಬಹುದು. ಭೂಕುಸಿತಗಳ ಅಪಾಯ ಹೆಚ್ಚಬಹುದು ಮತ್ತು ದೇವಾಲಯದ ರಚನೆಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.

Tags:
error: Content is protected !!