ಮೈಸೂರು: ಚಾಮುಂಡಿ ಬೆಟ್ಟದಲ್ಲಿ ನಡೆಯುತ್ತಿರುವ ಅವೈಜ್ಞಾನಿಕ ತೋಡಿಕೆ ಮತ್ತು ನಿರ್ಮಾಣ ಕಾರ್ಯಗಳ ವಿರುದ್ಧ ಮೈಸೂರಿನ ಹಲವು ನಾಯಕರು, ಚಿಂತಿತ ನಾಗರಿಕರು ಹಾಗೂ ವಿವಿಧ ಎನ್‌ಜಿಒ ಸಂಸ್ಥೆಗಳು ಪ್ರತಿಭಟನಾ ಮೆರವಣಿಗೆಯನ್ನು ನಡೆಸಿದರು.
ಈ ವೇಳೆ ಮಾತನಾಡಿದ ಪ್ರತಿಭಟನಾಕಾರರು, ಈ ನಿರ್ಮಾಣ ಕಾರ್ಯಗಳಿಂದ ದೇವಾಲಯದ ಗರ್ಭಗುಡಿ ಸಮೀಪ ಹಾಗೂ ಬೆಟ್ಟದ ತುದಿಯಲ್ಲಿ ನಡೆಯುತ್ತಿರುವ ಕಾಮಗಾರಿಯಿಂದ ಭೂಕುಸಿತವಾಗುವ ಸಾಧ್ಯತೆಯಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಪ್ರದೇಶವು ಪರಿಸರದ ದೃಷ್ಟಿಯಿಂದ ಅತೀ ಸೂಕ್ಷ್ಮವಾಗಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಡಳಿತವು ಯಾವುದೇ ಸಮರ್ಪಕ ವೈಜ್ಞಾನಿಕ ಅನುಮೋದನೆ, ಪರಿಸರ ಅನುಮತಿ ಹಾಗೂ ಆಧ್ಯಾತ್ಮಿಕ ಅನುಮತಿ ಪಡೆಯದೇ ಈ ಕಾರ್ಯಗಳನ್ನು ಮುಂದುವರಿಸುತ್ತಿರುವುದು ಅತ್ಯಂತ ಅಪಾಯಕಾರಿ. ಇದರಿಂದ ಬೆಟ್ಟದ ಪಾರಂಪರಿಕ ಮೌಲ್ಯಕ್ಕೆ ಧಕ್ಕೆ ಉಂಟಾಗುವುದಲ್ಲದೆ, ಈಗಾಗಲೇ ನಾಜೂಕಾಗಿರುವ ಪರಿಸರ ವ್ಯವಸ್ಥೆಗೆ ಅಪಾರ ಹಾನಿ ಸಂಭವಿಸಬಹುದು. ಭೂಕುಸಿತಗಳ ಅಪಾಯ ಹೆಚ್ಚಬಹುದು ಮತ್ತು ದೇವಾಲಯದ ರಚನೆಗೂ ಹಾನಿಯಾಗುವ ಸಾಧ್ಯತೆ ಇದೆ ಎಂದು ಕಳವಳ ವ್ಯಕ್ತಪಡಿಸಿದರು.
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಪಿ.ದೊಡ್ಡಿ ಗ್ರಾಮದಲ್ಲಿ 5 ಕಾಡಾನೆಗಳ ಹಿಂಡು ಬೀಡುಬಿಟ್ಟು ಕಬ್ಬಿನ ಬೆಳೆ ಫಸಲನ್ನು ನಾಶಗೊಳಿಸಿರುವ ಘಟನೆ…
ಮಡಿಕೇರಿ : ಮೈಸೂರು-ಗೋಣಿಕೊಪ್ಪ ಹೆದ್ದಾರಿಯ ದಕ್ಷಿಣ ಕೊಡಗಿನ ತಿತಿಮತಿ ವ್ಯಾಪ್ತಿಯಲ್ಲಿ ಹುಲಿಯೊಂದು ಕಾಣಿಸಿಕೊಂಡು ಆತಂಕ ಸೃಷ್ಟಿಸಿದ್ದು, ಹುಲಿ ಸೆರೆಗೆ ಶಾಸಕ…
ನಂಜನಗೂಡು : ತಾಲ್ಲೂಕಿನ ಕಲ್ಲಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯು ಖಾಸಗಿ ಶಾಲೆಗಳನ್ನು ಸಹ ನಾಚಿಸುವಂತಹ ಆಧುನಿಕ ಸೌಲಭ್ಯಗಳನ್ನು…
ಬೃಹತ್ ಕೈಗಾರಿಕೆ ಸಚಿವಾಲಯ ಅಧೀನದ ಎಆರ್‌ಎಐ ಘಟಕ ಸ್ಥಾಪನೆಗೆ ಪರಿಶೀಲನೆ ನಡೆಯುತ್ತಿದೆ : ಕುಮಾರಸ್ವಾಮಿ ಮಂಡ್ಯ : ಜಿಲ್ಲೆಯಲ್ಲಿ ಕೈಗಾರಿಕೆ…
ಮಂಡ್ಯ : ಕರ್ನಾಟಕ ರಾಜ್ಯವೇ ನನ್ನ ಪರಿಮಿತಿ. ಜನರು ಎಲ್ಲಿ ಅಪೇಕ್ಷೆ ಮಾಡುತ್ತಾರೆ ಅಲ್ಲಿಂದ ನನ್ನ ಸ್ಪರ್ಧೆ ಮಾಡುತ್ತೇನೆ ಎನ್ನುವ…
ಮಂಡ್ಯ : ರಾಜ್ಯಪಾಲರ ವಿರುದ್ಧ ಗೋ ಬ್ಯಾಕ್ ಗೋ ಬ್ಯಾಕ್ ಎನ್ನುತ್ತಿರುವ ರಾಜ್ಯ ಕಾಂಗ್ರೆಸ್ ಏನೂ ಸಾಧಿಸುವುದಿಲ್ಲ. ಗೋ ಬ್ಯಾಕ್…