ಮೈಸೂರು ನಗರ

ಜನಗಣತಿಗೆ ಸ್ವಯಂ ಪ್ರೇರಿತರಾಗಿ ಮಾಹಿತಿ ನೀಡಿ ; ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ

ಮೈಸೂರು : ಜಿಲ್ಲೆಯಲ್ಲಿ ಏ.16 ರಿಂದ ಮೇ 15ರವರೆಗೆ ನಡೆಯುವ ಜನಗಣತಿಗೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಜನಗಣತಿಗೂ ಮುನ್ನ ‘ಸ್ವಯಂ ಗಣತಿ’ಗೆ ಈಗಾಗಲೇ ಚಾಲನೆ ದೊರೆತಿದ್ದು, ಎಲ್ಲರು ಸ್ವಯಂ ಪ್ರೇರಿತರಾಗಿ ಸ್ವಯಂ ಗಣತಿಯಡಿ ಮಾಹಿತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮಿಕಾಂತ ರೆಡ್ಡಿ ಮನವಿ ಮಾಡಿದ್ದಾರೆ.

ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜನಗಣತಿಗೆ ನೇಮಕ ಮಾಡಿರುವ ಸಿಬ್ಬಂದಿ ಏ.16 ರಿಂದ ಮೇ 15ರ ಅವಧಿಯಲ್ಲಿ ಮನೆ ಮನೆಗಳಿಗೆ ಭೇಟಿ ನೀಡಿ ಜನಗಣತಿಗೆ ಪೂರಕವಾದ ಮಾಹಿತಿಯನ್ನು ಸಂಗ್ರಹಿಸಲಿದ್ದಾರೆ. ಈ ಕಾರ್ಯವನ್ನು ಸುಗಮಗೊಳಿಸುವ ಸಲುವಾಗಿ ‘ಸ್ವಯಂ ಗಣತಿ’ಗೆ ಅವಕಾಶ ನೀಡಲಾಗಿದ್ದು, ಈ ಸ್ವಯಂ ಗಣತಿಯು ಏ.15ರವರೆಗೆ ನಡೆಯಲಿದೆ. ಸಾರ್ವಜನಿಕರು www.se.census.gov.in ಆನ್‌ಲೈನ್ ಪೋರ್ಟಲ್ ಮೂಲಕ ಮಾಹಿತಿಯನ್ನು ಭರ್ತಿ ಮಾಡಬಹುದು ಎಂದು ತಿಳಿಸಿದರು.

ಸ್ವಯಂ ಗಣತಿಯಡಿ ಮಾಹಿತಿ ಭರ್ತಿ ಮಾಡಿದ ನಂತರ ದೊರೆಯುವ ಸ್ವೀಕೃತಿ ಸಂಖ್ಯೆಯನ್ನು ಜನಗಣತಿಗೆ ಮನೆಗೆ ಬರುವ ಗಣತಿದಾರರಿಗೆ ನೀಡಿದರೆ ಸಾಕು. ಒಂದು ವೇಳೆ ಸ್ವಯಂ ಗಣತಿ ಸಂದರ್ಭ ತಪ್ಪಾದ ಮಾಹಿತಿ ಅಪ್ಲೋಡ್ ಮಾಡಿದರೆ ನಿಮ್ಮ ಮನೆಗೆ ಬರುವ ಗಣತಿದಾರರ ಮೂಲಕ ತಿದ್ದುಪಡಿ ಮಾಡಲು ಅವಕಾಶವಿದೆ ಎಂದರು.

ಜನಗಣತಿಯು ಎರಡು ಹಂತದಲ್ಲಿ ನಡೆಯಲಿದೆ. ಮೊದಲನೇ ಹಂತದಲ್ಲಿ ಏ.16ರಿಂದ ಮೇ.15ರವರೆಗೆ ಮನೆಗಳ ಮಾಹಿತಿ ಸಂಗ್ರಹ ಕಾರ್ಯ ನಡೆಯಲಿದೆ. 2ನೇ ಹಂತದ ಜನಗಣತಿ 2027ರ ಫೆಬ್ರವರಿಯಲ್ಲಿ ನಡೆಯಲಿದೆ. ಮೊದಲ ಹಂತದ ಜನಗಣತಿಯ ಸಂದರ್ಭ ಎಷ್ಟು ಮನೆಗಳ ಇವೆ? ಕಚ್ಚಾ ಮನೆಯೇ ಅಥವಾ ಪಕ್ಕಾ ಮನೆಯೇ, ಟೆಲಿವಿಷನ್, ಲ್ಯಾಪ್‌ಟಾಪ್, ಕಂಪ್ಯೂಟರ್, ಮೋಟಾರ್ ಸೈಕಲ್, ಕಾರು ಇವೆಯೇ?, ಅಡುಗೆಗೆ ಬಳಸುವ ಇಂಧನ, ಶೌಚಗೃಹ, ಸ್ನಾನಗೃಹದ ಲಭ್ಯತೆ ಮುಂತಾದ 33 ಪ್ರಶ್ನೆಗಳಿಗೆ ಮಾಹಿತಿ ಪಡೆಯಲಾಗುವುದು. ಎರಡನೇ ಹಂತದಲ್ಲಿ ಮನೆಯಲ್ಲಿ ಎಷ್ಟು ಜನರು ಇದ್ದಾರೆ ಎಂಬ ಮಾಹಿತಿಯನ್ನು ಕಲೆ ಹಾಕಲಾಗುವುದು ಎಂದು ಹೇಳಿದರು.

ಪ್ರಸಕ್ತ ಜನಗಣತಿಯಲ್ಲಿ ದತ್ತಾಂಶ ಸಂಗ್ರಹಣೆಯ ಗುಣಮಟ್ಟ ಹೆಚ್ಚಿಸಲು ಮತ್ತು ಶೀಘ್ರದಲ್ಲೇ ಗಣತಿಯ ಮಾಹಿತಿ ಬಿಡುಗಡೆ ಮಾಡಲು ಮೊಬೈಲ್ ಅಪ್ಲಿಕೇಷನ್‌ಗಳು ಹಾಗೂ ಪೋರ್ಟಲ್‌ಗಳಂತಹ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜನರ ಆರ್ಥಿಕ ಚಟುವಟಿಕೆ, ಶಿಕ್ಷಣ, ವಸತಿ, ಗೃಹ ಸೌಲಭ್ಯಗಳು, ನಗರೀಕರಣ, ಫಲವತ್ತತೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳು, ಭಾಷೆ, ಧರ್ಮ, ಅಂಗವೈಕಲ್ಯ, ಇತರ ಹಲವು ಸಾಮಾಜಿಕ, ಸಾಂಸ್ಕೃತಿಕ ಮತ್ತು ಜನಸಂಖ್ಯಾ ದತ್ತಾಂಶ ಬಗ್ಗೆ ಮಾಹಿತಿ ಸಂಗ್ರಹಿಸಲಾಗುವುದು ಎಂದರು.

ಸುದ್ದಿಗೋಷ್ಠಿಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಪಿ. ಶಿವರಾಜು, ನಗರಪಾಲಿಕೆ ಉಪ ಆಯುಕ್ತ ಹಾಗೂ ಮೈಸೂರು ನಗರ ಜನಗಣತಿ ಅಧಿಕಾರಿ ಜಿ.ಎಸ್.ಸೋಮಶೇಖರ್ ಹಾಜರಿದ್ದರು.

ಆಂದೋಲನ ಡೆಸ್ಕ್

Recent Posts

ಕೊಪ್ಪಳದ ಗವಿಸಿದ್ದೇಶ್ವರ ಸ್ವಾಮಿಗಳಿಂದ ಈ ಬಾರಿ ದಸರಾ ಉದ್ಘಾಟನೆ

ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ-2026ಕ್ಕೆ ಈ ಬಾರಿ ಕೊಪ್ಪಳದ ಶ್ರೀ ಗವಿಸಿದ್ದೇಶ್ವರ ಮಹಾಸಂಸ್ಥಾನ ಮಠದ ಪೀಠಾಧಿಪತಿಗಳಾದ ಶ್ರೀ…

10 hours ago

ಕಾಡಾನೆ ದಾಳಿಗೆ 75 ತೆಂಗಿನ ಮರ ನಾಶ: ಬೆಳೆ ಪರಿಹಾರಕ್ಕೆ ರೈತ ಕುಟುಂಬದ ಮನವಿ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಪಾಳ್ಯ ಗ್ರಾಮದಲ್ಲಿ ಕಾಡಾನೆಗಳ ನಿರಂತರ ದಾಳಿಯಿಂದ ಕಷ್ಟಪಟ್ಟು ಬೆಳೆದಿದ್ದ ತೆಂಗಿನ ಮರ ಸಂಪೂರ್ಣ ನಾಶವಾಗಿರುವುದರಿಂದ…

15 hours ago

ಅ.29ರಿಂದ ನ.11ರವರೆಗೆ ಹಾಸನಾಂಬಾ ಜಾತ್ರಾ ಮಹೋತ್ಸವ

ಹಾಸನ: ಹಾಸನದ ಅಧಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿಯಾಗಿದೆ. ಈ ಕುರಿತು ಹಾಸನ ಜಿಲ್ಲಾಧಿಕಾರಿ ಕೆ.ಎಸ್.ಲತಾಕುಮಾರಿ ಮಾಹಿತಿ…

16 hours ago

ಕರ್ನಾಟಕಕ್ಕೆ ಮತ್ತೆ ಕಾವೇರಿ ಶಾಕ್ ನೀಡಿದ ಸುಪ್ರೀಂಕೋರ್ಟ್‌

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದ್ದು, CWMA ನೀಡಿರುವ ಆದೇಶವನ್ನು ಪಾಲಿಸುವಂತೆ ಸುಪ್ರೀಂಕೋರ್ಟ್‌ ಸೂಚನೆ ನೀಡಿದೆ.…

17 hours ago

ಕೋಟೆ ಟಿಎಪಿಸಿಎಂಎಸ್: ನಾಳೆ ಮೈತ್ರಿ ಪಕ್ಷದ 8 ಸದಸ್ಯರ ರಾಜೀನಾಮೆ ಭವಿಷ್ಯ ನಿರ್ಧಾರ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕು ಟಿಎಪಿಸಿಎಂಎಸ್‌ನ ಎಂಟು ಜನ ನಿರ್ದೇಶಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿ ಅಂಗೀಕಾರ ಮಾಡಲು ಮತ್ತು…

17 hours ago

ಓದುಗರ ಪತ್ರ: ಸಿಗಲಿ ನ್ಯಾಯ!

ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…

23 hours ago