ಮೈಸೂರು: ರೌಡಿಶೀಟರ್ ಕಾರ್ತಿಕ್ ಕೊಲೆ ವಿಚಾರವಾಗಿ ಪ್ರಚೋದನಾತ್ಮಕ ಪೋಸ್ಟ್ ಹಾಕಿದ್ದ ಆರು ಮಂದಿ ವಿರುದ್ಧ ಉದಯಗಿರಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೇ.5ರಂದು ರೌಡಿಶೀಟರ್ ಕಾರ್ತಿಕ್ ಎಂಬಾತನನ್ನು ದುಷ್ಕರ್ಮಿಗಳು ಭೀಕರ ಹತ್ಯೆ ಮಾಡಿದ್ದರು. ಕೊಲೆ ವಿಚಾರವಾಗಿ ಆರು ಮಂದಿ ಕಿಡಿಗೇಡಿಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್ ಹಾಕಿದ್ದರು. ಇದಲ್ಲದೇ ಪೊಲೀಸರ ಅನುಮತಿ ಪಡೆಯದೇ ಮೆರವಣಿಗೆ ಮಾಡಿ ಶಾಂತಿ ಸುವ್ಯವಸ್ಥೆಗೆ ಭಂಗ ಉಂಟು ಮಾಡಿದ್ದರು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್ ಆಗುತ್ತಿದ್ದಂತೆ ಎಚ್ಚೆತ್ತ ಉದಯಗಿರಿ ಠಾಣೆ ಪೊಲೀಸರು ಸಾರ್ವಜನಿಕರಿಗೆ ಭೀತಿ ಹುಟ್ಟಿಸಿದ್ದ ಆರು ಮಂದಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.
ಇದನ್ನೂ ಓದಿ:- ಸಹಜ ಸ್ಥಿತಿಗೆ ಮರಳಿದ ಜಮ್ಮು-ಕಾಶ್ಮೀರ: ಶಾಲೆಗಳು ಓಪನ್
ಪ್ರಚೋದನಕಾರಿ ಪೋಸ್ಟ್ ಹಾಕಿದ್ದ ಆರು ಮಂದಿಯನ್ನು ಬಂಧಿಸಿದ್ದು, ಮೆರವಣಿಗೆಗೆ ಬಳಸಿದ್ದ ಆರು ದ್ವಿಚಕ್ರ ವಾಹನಗಳನ್ನು ವಶಕ್ಕೆ ಪಡೆದಿದ್ದಾರೆ.





