ಮೈಸೂರು ನಗರ

ಸ್ವಂತ ಖರ್ಚಿನಲ್ಲೇ ಕಸ ಸಂಗ್ರಹ: ಪಾಲಿಕೆ ಮಾಜಿ ಸದಸ್ಯ ಕೆ.ವಿ.ಶ್ರೀಧರ್‌ ನಡೆಗೆ ಸಾರ್ವಜನಿಕರ ಮೆಚ್ಚುಗೆ

ಮೈಸೂರು: ಕಳೆದ ನಾಲ್ಕು ದಿನಗಳಿಂದ ಮೈಸೂರು ಮಹಾನಗರ ಪಾಲಿಕೆಯ ನೌಕರರು ಹಾಗೂ ಪೌರ ಕಾರ್ಮಿಕರು ಮುಷ್ಕರ ನಡೆಸುತ್ತಿರುವ ಹಿನ್ನೆಲೆ ಮೈಸೂರು ನಗರದ ಬಡಾವಣೆಗಳಲ್ಲಿ ಕಸ ಸಂಗ್ರಹ ಕಾರ್ಯ ಸ್ಥಗಿತಗೊಂಡಿದ್ದು, ಇತ್ತ ಮೈಸೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು ಸ್ವಂತ ಖರ್ಚಿನಿಂದಲೇ ಸ್ವತಃ ತಾವೇ ಮನೆ ಮನೆಗೆ ತೆರಳಿ ಕಸ ಸಂಗ್ರಹಿಸುತ್ತಿದ್ದಾರೆ.

ಮೈಸೂರಿನ ಹೆಬ್ಬಾಳ್ ಹಾಗೂ ಸೂರ್ಯ ಬೇಕರಿ ಸಮೀಪದ ಬಡಾವಣೆಗಳಲ್ಲಿ ಕಳೆದ ನಾಲ್ಕು ದಿನಗಳಿಂದ ಕಸ ಸಂಗ್ರಹಿಸಲು ಪೌರ ಕಾರ್ಮಿಕರು ಬರುತ್ತಿಲ್ಲ. ಆದ್ದರಿಂದ ಶ್ರೀಧರ್ ಅವರು ನಾಲ್ಕು ಟ್ರ್ಯಾಕ್ಟರ್‌ಗಳ ಮೂಲಕ ತಮ್ಮ ವಾರ್ಡ್‌ನಲ್ಲಿ ತಾವು ಹಾಗೂ ಅವರ ಸ್ನೇಹಿತರೊಂದಿಗೆ ಮನೆ ಮನೆಗೆ ತೆರಳಿ ಕಳೆದ ಮೂರು ದಿನಗಳಿಂದ ಸಂಗ್ರಹಗೊಂಡಿದ್ದ ಕಸವನ್ನು ಸಂಗ್ರಹಿಸಿ ಜನರ ಪಾಲಿಗೆ ನೆರವಾಗಿದ್ದಾರೆ.

ಈ ವೇಳೆ ಮಾತನಾಡಿದ ವಾರ್ಡ್‌ನ ನಿವಾಸಿಗಳು, ಪಾಲಿಕೆ ಮಾಜಿ ಸದಸ್ಯ ಕೆವಿ ಶ್ರೀಧರ್ ಅವರು ಯಾವುದೇ ಸಂದರ್ಭದಲ್ಲೂ ಸಮಸ್ಯೆ ಎದುರಾದಾಗ ಒಂದು ಕರೆ ಮಾಡಿದರೆ ಸಾಕು ಅಷ್ಟರಲ್ಲಿ ನಮ್ಮ ಸಮಸ್ಯೆಗೆ ಪರಿಹಾರ ಒದಗಿಸುತ್ತಾರೆ. ಕಳೆದ ನಾಲ್ಕು ದಿನಗಳಿಂದ ಮನೆಯಲ್ಲೇ ಕಸ ಸಂಗ್ರಹವಾಗಿದ್ದರಿಂದ ಸೊಳ್ಳೆಗಳ ಕಾಟವು ಹೆಚ್ಚಾಗಿತ್ತು. ಸದ್ಯ ಇಂದು ಅವರೇ ಟ್ರ್ಯಾಕ್ಟರ್ ಮೂಲಕ ಕಸ ಸಂಗ್ರಹಿಸುತ್ತಿದ್ದಾರೆ. ಆದ್ದರಿಂದ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇವೆ ಎಂದರು.

ಆಂದೋಲನ ಡೆಸ್ಕ್

Recent Posts

ಪಚ್ಚೆದೊಡ್ಡಿ ಗ್ರಾಮಕ್ಕೆ ತ್ರಿಸದಸ್ಯ ಸಮಿತಿ ತಂಡ ಭೇಟಿ

ಸಾರಿಗೆ ವ್ಯವಸ್ಥೆ ಕಲ್ಪಿಸಲು ಆಗ್ರಹಿಸಿ ಸಿಎಂಗೆ ಪತ್ರ ಬರೆದಿದ್ದ ಗ್ರಾಮದ ವಿದ್ಯಾರ್ಥಿಗಳು ಹನೂರು: ತಾಲ್ಲೂಕಿನ ಪಚ್ಚೆದೊಡ್ಡಿ ಗ್ರಾಮದ ನಿವಾಸಿಗಳಿಗೆ ಸಮರ್ಪಕ…

2 hours ago

ತ್ರಿಪುರ ಸುಂದರಿ ಅಮ್ಮನವರ ಜಾತ್ರೆಗೆ ಸಕಲ ಸಿದ್ಧತೆ

ಎಂ.ನಾರಾಯಣ್ ತಿ.ನರಸೀಪುರ ತಾಲ್ಲೂಕಿನ ಮೂಗೂರಿನಲ್ಲಿ ಜ.೩ರಂದು ಆಕರ್ಷಕ ಬಂಡಿ ಉತ್ಸವ; ೫ರಂದು ರಥೋತ್ಸವ ತಿ.ನರಸೀಪುರ: ಪುರಾಣ ಪ್ರಸಿದ್ಧ ತಾಲ್ಲೂಕಿನ ಮೂಗೂರಿನ…

2 hours ago

ಮತ್ತೆ ಆರಂಭವಾದ ಕೋಟೆ ಪೊಲೀಸ್ ಕ್ಯಾಂಟೀನ್

ಶಾಸಕರ ಸೂಚನೆಯ ಮೇರೆಗೆ ಕ್ಯಾಂಟೀನ್ ಆರಂಭ; ಬಡವರು, ಕಾರ್ಮಿಕರು, ವಿದ್ಯಾರ್ಥಿಗಳಿಗೆ ಸಂತಸ ಎಚ್.ಡಿ.ಕೋಟೆ: ಕಡಿಮೆ ದರದಲ್ಲಿ ರುಚಿಕರವಾದ ತಿಂಡಿ, ಊಟ…

2 hours ago

ಗುಬ್ಬಚ್ಚಿ ಶಾಲೆಯಲ್ಲಿ ಬರೀ 12 ವಿದ್ಯಾರ್ಥಿಗಳು!

ವರಹಳ್ಳಿ ಆನಂದ ಸಂಶೋಧನಾ ವಿದ್ಯಾರ್ಥಿ, ಮೈಸೂರು ವಿಶ್ವವಿದ್ಯಾನಿಲಯ ೧ರಿಂದ ೭ನೇ ತರಗತಿವರೆಗೆ ಪ್ರವೇಶಾವಕಾಶ ಇರುವ ಸ.ಹಿ.ಪ್ರಾ. ಶಾಲೆ ಮೈಸೂರು: ನೂರಾರು…

2 hours ago

ಕೊಡಗು‌ ಸಿದ್ದಾಪುರ ದರೋಡೆ ಪ್ರಕರಣ ಭೇದಿಸಲು ವಿಶೇಷ ಕಾರ್ಯಪಡೆ ಸಜ್ಜು

ಸಿದ್ದಾಪುರ :- ನಗರದಲ್ಲಿ ನಡೆದ ದರೋಡೆ ಪ್ರಕರಣ ಭೇದಿಸಲು ಜಿಲ್ಲಾ ಹೆಚ್ಚುವರಿ ಪೋಲೀಸ್ ಅಧೀಕ್ಷರ ಮಾರ್ಗದರ್ಶನದಲ್ಲಿ ವಿಶೇಷ ತಂಡ ರಚಿಸಲಾಗಿದೆ…

11 hours ago