Mysore
23
overcast clouds

Social Media

ಶನಿವಾರ, 28 ಮಾರ್ಚ್ 2026
Light
Dark

ಆಂದೋಲನದ ವರದಿ ಬಳಿಕ ಎಚ್ಚೆತ್ತ ಜನಪ್ರತಿನಿಧಿಗಳು: ರಸ್ತೆ ಕಾಮಗಾರಿಗೆ ಶಾಸಕ ಜಿಟಿಡಿ ಗುದ್ದಲಿ ಪೂಜೆ

ಮೈಸೂರು: ಸಿಎಂ ಸಿದ್ದರಾಮಯ್ಯ ನಿವಾಸದ ಸಮೀಪವೇ ಕುಸಿದು ಬಿದ್ದ ರಸ್ತೆ ಎಂಬ ಶೀರ್ಷಿಕೆಯಡಿ ಆಂದೋಲನ ವರದಿ ಮಾಡಿದ ಬೆನ್ನಲ್ಲೇ ಎಚ್ಚೆತ್ತ ಜನಪ್ರತಿನಿಧಿಗಳು ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ.

ಮೈಸೂರಿನ ರಾಮಕೃಷ್ಣನಗರದ ಐ ಬ್ಲಾಕ್‌ನಲ್ಲಿರುವ 2ನೇ ಮೇನ್‌ನಲ್ಲಿ ರಸ್ತೆಯೊಂದು ಕುಸಿದು ಬಿದ್ದಿತ್ತು. ಈ ಬಗ್ಗೆ ಆಂದೋಲನದಲ್ಲಿ ವರದಿ ಮಾಡಲಾಗಿತ್ತು. ವರದಿಯಲ್ಲಿ ರಸ್ತೆ ಕುಸಿದು ಬಿದ್ದಿರುವುದರಿಂದ ಸಾರ್ವಜನಿಕರಿಗೆ ಯಾವ ರೀತಿ ತೊಂದರೆಯಾಗುತ್ತಿದೆ ಎಂಬುದರ ಬಗ್ಗೆ ಸವಿವರವಾಗಿ ಪ್ರಕಟಿಸಲಾಗಿತ್ತು.

ಈ ಸುದ್ದಿ ಪ್ರಸಾರದ ಬೆನ್ನಲ್ಲೇ ಒಂದೇ ದಿನದಲ್ಲಿ ಎಚ್ಚೆತ್ತ ಶಾಸಕ ಜಿ.ಟಿ.ದೇವೇಗೌಡ ಅವರು, ಇಂದು ಗುದ್ದಲಿ ಪೂಜೆ ನೆರವೇರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಎದುರಿಸುತ್ತಿದ್ದ ಸ್ಥಳೀಯ ನಿವಾಸಿಗಳು ಈಗ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

Tags:
error: Content is protected !!