ಮೈಸೂರು ನಗರ

ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಉತ್ಸಾಹದಿಂದ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳು

ಮೈಸೂರು: ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯಿಸಿ ಪರೀಕ್ಷೆ ಆರಂಭವಾಗಿದ್ದು, ಮೈಸೂರು ಜಿಲ್ಲೆಯಾದ್ಯಂತ 50 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ.

ಬೆಳಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆವರೆಗೆ ಪರೀಕ್ಷೆ ಬರೆಯಲು ಸಮಯ ನಿಗದಿಯಾಗಿದೆ. ಮಾರ್ಚ್.‌20ರವರೆಗೆ ಪರೀಕ್ಷೆ ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ಸಕಲ ರೀತಿಯಲ್ಲೂ ಸಜ್ಜಾಗಿದ್ದಾರೆ. ಮೈಸೂರಿನ ನಗರ ವ್ಯಾಪ್ತಿಯಲ್ಲಿ 27 ಕೇಂದ್ರ, ತಾಲ್ಲೂಕು ವ್ಯಾಪ್ತಿಯಲ್ಲಿ 23 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದ್ದು, ಈ ಬಾರಿ 32,684 ಮಂದಿ ಹೊಸಬ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಅದರಲ್ಲಿ 14,680 ಮಂದಿ ಬಾಲಕರು ಹಾಗೂ 18,004 ಮಂದಿ ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ.

ಇನ್ನು 1650 ಮಂದಿ ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, 1028 ಮಂದಿ ಖಾಸಗಿ ಅಭ್ಯರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ವೆಬ್ ಕಾಸ್ಟಿಂಗ್ ಮೂಲಕ ಪರೀಕ್ಷಾ ಅಕ್ರಮ ತಡೆಗೆ ಕ್ರಮ ಕೈಗೊಳ್ಳಲಾಗಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆ ಮಾಡಲಾಗಿದೆ. ಒಂದು ಕೇಂದ್ರಕ್ಕೆ ಇಬ್ಬರು ಅಬ್ಸರ್ವರ್ ನೇಮಕ ಮಾಡಲಾಗಿದ್ದು, ಮುನ್ನೆಚ್ಚರಿಕೆಯಾಗಿ ಪರೀಕ್ಷಾ ಕೇಂದ್ರದ ಬಳಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ರಾಜಕಾರಣಿಗಳದ್ದು ‘ಆಚಾರವಿಲ್ಲದ ನಾಲಿಗೆ’ ಆಗಬಾರದಲ್ಲವೇ?

ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…

10 mins ago

ಓದುಗರ ಪತ್ರ: ಶೇ. ೭.೫ರಷ್ಟು ಮೀಸಲಾತಿ: ಜನ ಮೆಚ್ಚುವ ನಿರ್ಧಾರ

ರಾಜ್ಯ ಸರ್ಕಾರವು ವೃತ್ತಿಪರ ಕೋರ್ಸ್‌ಗಳ ಪ್ರವೇಶಾತಿಯಲ್ಲಿ ಗ್ರಾಮೀಣ ಸರ್ಕಾರಿ ಶಾಲಾ ಮಕ್ಕಳಿಗೆ ಶೇ. ೭.೫ರಷ್ಟು ಮೀಸಲಾತಿ ನೀಡಿರುವುದು ಜನ ಮೆಚ್ಚುವ…

12 mins ago

ಓದುಗರ ಪತ್ರ: ಸುಪ್ರೀಂಕೋರ್ಟ್ ಪೀಠಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಬೇಕು

ಸುಪ್ರೀಂ ಕೋರ್ಟ್ ಬಾಗಿಲು ಭಾರತದ ಪ್ರತಿಯೊಬ್ಬ ನಾಗರಿಕನಿಗೂ ತೆರೆದಿದೆ ಎಂದು ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಹೇಳಿದ್ದಾರೆ. ಆದರೆ ದೇಶದ ಉತ್ತರದ…

14 mins ago

‘ಬಂದೋಬಸ್ತ್ ’ ಎಂಬ ಬದ್ಧತೆ

ಎಸ್. ಎಲ್. ಚೆನ್ನಬಸವಣ್ಣ ,ಐಪಿಎಸ್, ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಇತಿಹಾಸದಿಂದ ಪ್ರಸ್ತುತ ಪೊಲೀಸ್ ಕರ್ತವ್ಯದವರೆಗೆ  ಸಾರ್... ಎಲ್ಲ…

16 mins ago

ರಾಮ್ ಜೀ ಸಕ್ಪಾಲ್ ಬಡಾವಣೆಯಲ್ಲಿ ಮೂಲಸೌಕರ್ಯ ಮರೀಚಿಕೆ

ಕೃಷ್ಣ ಸಿದ್ದಾಪುರ ನೀರಿಗೂ ಪರದಾಟ, ಕತ್ತಲಲ್ಲೇ ಮಕ್ಕಳ ವಿದ್ಯಾಭ್ಯಾಸ   ಸಿದ್ದಾಪುರ: ಕುಶಾಲನಗರ ತಾಲ್ಲೂಕಿನ ಚೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೊನ್ನತ್…

24 mins ago

ಡೆಡ್ ಬಾಡಿ ಬಿಸಾಕಿದ ಜಾಗದಲ್ಲಿ ಹೊಸ ಸುಳಿವು

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಸ್ಕಾರ್ಪಿಯೋ ಹೋಗಿ-ಬರುವುದು, ೩ ಜನರು ನಡೆದು ಬರುವುದು ವಿಡಿಯೋದಲ್ಲಿ ಸೆರೆ ನಾಳೆ ೧೦ ಗಂಟೆಯವರೆಗೆ…

36 mins ago