ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಪ್ರದೇಶದ ಸುತ್ತಲೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163 ರೀತ್ಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಪರೀಕ್ಷಾ ಕೇಂದ್ರಗಳು
ಡಿ.ಬನುಮಯ್ಯ ಪಿಯು ಕಾಲೇಜು, ಸಯ್ಯಾಜಿರಾವ್ ರಸ್ತೆ, ಊಟಿ ರಸ್ತೆ, ಜೆಎಸ್‌ಎಸ್ ಪಿಯು ಕಾಲೇಜು, ಮಹಾರಾಜ ಸರ್ಕಾರಿ ಪಿಯು ಕಾಲೇಜು, ಮರಿಮಲ್ಲಪ್ಪ ಪಿಯು ಕಾಲೇಜು, ಮಹಾರಾಣಿ ಸರ್ಕಾರಿ ಪಿಯು ಕಾಲೇಜು, ಎನ್.ಎಸ್.ರಸ್ತೆ, ಸದ್ವಿದ್ಯಾ ಪದವಿಪೂರ್ವ ಕಾಲೇಜು, ಸರಸ್ವತಿಪುರಂ ಜೆಎಸ್‌ಎಸ್ ಪದವಿಪೂರ್ವ ಕಾಲೇಜು, ವಿಜಯವಿಠಲ ಪಿಯು ಕಾಲೇಜು, ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು, ಎಸ್‌ಬಿಐಸಿ ಜ್ಞಾನೋದಯ ಪದವಿ ಪೂರ್ವ ಕಾಲೇಜು, ಸೆಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿರುತ್ತವೆ.
ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್/ಬ್ರೌಸಿಂಗ್ ಸೆಂಟರ್‌ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೊಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ಇಂದು ಮತದಾನ ನಡೆಯುತ್ತಿದೆ. ಈ ಹೊತ್ತಿನಲ್ಲೇ ಆತಂಕಕಾರಿ ಘಟನೆಯೊಂದು…
ಬೆಂಗಳೂರು : ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗೆ ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದೆ. ಪಶ್ಚಿಮ…
ಹುಣಸೂರು: ತಾಲ್ಲೂಕಿನ ಬಿಳಿಕೆರೆ ಗ್ರಾಮದ ಕೆರೆಯ ಬಳಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಒಡಿಶಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ನೀರು ಕುಡಿಯಲು ಬಂದು ಕೆಸರಿನಲ್ಲಿ ಸಿಲುಕಿಕೊಂಡು ನಿತ್ರಾಣಗೊಂಡಿದ್ದ ಹೆಣ್ಣಾನೆ ಚಿಕಿತ್ಸೆಗೆ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮೊದಲ ಹಂತಕ್ಕೆ ನಾಳೆ ಮತದಾನ ನಡೆಯಲಿದೆ. ನಾಳೆ ಉತ್ತರ ಬಂಗಾಳದ ಎಲ್ಲಾ 152…