ಮೈಸೂರು ನಗರ

ಫೆ.28ರಿಂದ ಪಿಯುಸಿ ಪರೀಕ್ಷೆ : ಪರೀಕ್ಷಾ ಕೇಂದ್ರಗಳ ಸುತ್ತಲೂ ನಿಷೇಧಾಜ್ಞೆ ಜಾರಿ

ಮೈಸೂರು : ಫೆ.28ರಿಂದ ಮಾ.17ರವರೆಗೆ ಮೈಸೂರು ನಗರದ 28 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯಲಿದ್ದು, ಸದರಿ ಪರೀಕ್ಷೆಗಳನ್ನು ಸುಸೂತ್ರವಾಗಿ ನಡೆಸುವ ಉದ್ದೇಶದಿಂದ ಪರೀಕ್ಷಾ ಕೇಂದ್ರದ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರದ 200 ಮೀ. ವ್ಯಾಪ್ತಿ ಪ್ರದೇಶದ ಸುತ್ತಲೂ ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ಸೆಕ್ಷನ್ 163 ರೀತ್ಯ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಪರೀಕ್ಷಾ ಕೇಂದ್ರಗಳು
ಡಿ.ಬನುಮಯ್ಯ ಪಿಯು ಕಾಲೇಜು, ಸಯ್ಯಾಜಿರಾವ್ ರಸ್ತೆ, ಊಟಿ ರಸ್ತೆ, ಜೆಎಸ್‌ಎಸ್ ಪಿಯು ಕಾಲೇಜು, ಮಹಾರಾಜ ಸರ್ಕಾರಿ ಪಿಯು ಕಾಲೇಜು, ಮರಿಮಲ್ಲಪ್ಪ ಪಿಯು ಕಾಲೇಜು, ಮಹಾರಾಣಿ ಸರ್ಕಾರಿ ಪಿಯು ಕಾಲೇಜು, ಎನ್.ಎಸ್.ರಸ್ತೆ, ಸದ್ವಿದ್ಯಾ ಪದವಿಪೂರ್ವ ಕಾಲೇಜು, ಸರಸ್ವತಿಪುರಂ ಜೆಎಸ್‌ಎಸ್ ಪದವಿಪೂರ್ವ ಕಾಲೇಜು, ವಿಜಯವಿಠಲ ಪಿಯು ಕಾಲೇಜು, ಆದಿಚುಂಚನಗಿರಿ ಪದವಿ ಪೂರ್ವ ಕಾಲೇಜು, ಎಸ್‌ಬಿಐಸಿ ಜ್ಞಾನೋದಯ ಪದವಿ ಪೂರ್ವ ಕಾಲೇಜು, ಸೆಂಟ್ ಫಿಲೋಮಿನಾ ಪದವಿಪೂರ್ವ ಕಾಲೇಜುಗಳು ಪರೀಕ್ಷಾ ಕೇಂದ್ರಗಳಾಗಿರುತ್ತವೆ.

ಈ ಪ್ರದೇಶಗಳಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷಾ ಸಿಬ್ಬಂದಿಯನ್ನು ಹೊರತುಪಡಿಸಿ ಇತರೆ ಅನಧಿಕೃತ ವ್ಯಕ್ತಿಗಳು ಸಂಚರಿಸಬಾರದು ಮತ್ತು ಯಾರೂ ಆಕ್ಷೇಪಾರ್ಹ ವಸ್ತುಗಳನ್ನು ಒಯ್ಯಬಾರದು ಹಾಗೂ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿರುವ ಜೆರಾಕ್ಸ್/ಬ್ರೌಸಿಂಗ್ ಸೆಂಟರ್‌ಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚುವಂತೆ ಆದೇಶಿಸಲಾಗಿದೆ ಎಂದು ಮೈಸೂರು ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

3 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

3 hours ago

ಓದುಗರ ಪತ್ರ: ಕಾವೇರಿ:ಆದೇಶ ನಿಷ್ಪಕ್ಷಪಾತವಾಗಿರಲಿ

ಸಿಡಬ್ಲ್ಯುಆರ್‌ಸಿ ಆದೇಶದಂತೆ ಪ್ರತಿದಿನ ೬,೦೦೦ ಕ್ಯೂಸೆಕ್ಸ್‌ನಂತೆ ೧೫ ದಿನಗಳ ಕಾಲ ಕರ್ನಾಟಕ ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸಬೇಕಾಗುತ್ತದೆ. ಜಲಾಶಯದಲ್ಲಿ…

3 hours ago

ಮಲ್ಟಿಪ್ಲೆಕ್ಸ್: ಪ್ರಾದೇಶಿಕ ಭಾಷಾ ಚಿತ್ರಗಳಿಗೆ ಮಾರಕ ಹಂಚಿಕಾ ಸೂತ್ರ

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಅದೇಕೋ ಏನೋ ಕರ್ನಾಟಕಕ್ಕೂ ಇಲ್ಲಿರುವ ಮಲ್ಟಿಪ್ಲೆಕ್‌ಳಿಗೂ ಆಗಿ ಬರುತ್ತಿಲ್ಲ ಎನಿಸುತ್ತದೆ. ಅದು ಚಿತ್ರೋದ್ಯಮಕ್ಕೆ ಮಾತ್ರವಲ್ಲ,…

3 hours ago

ಕಸ್ತೂರಿ ರಂಗನ್ ವರದಿ ವಿರೋಧಿಸಿ ಇಂದು ಪ್ರತಿಭಟನೆ

ಲಕ್ಷ್ಮೀಕಾಂತ್ ಕೊಮಾರಪ್ಪ ಸುದರ್ಶನ ಸರ್ಕಲ್‌ನಿಂದ ಗಾಂಧಿ ಮೈದಾನದವರೆಗೆ ಪ್ರತಿಭಟನಾ ಮೆರವಣಿಗೆ  ಸೋಮವಾರಪೇಟೆ: ಮಲೆನಾಡ ಭಾಗದ ರೈತರ ಬದುಕಿನ ಮೇಲೆ ತೂಗುಗತ್ತಿಯಂತೆ ಪರಿಣಮಿಸಿರುವ…

3 hours ago

ಚಾ.ನಗರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಜೆ.ಯೋಗೇಶ್ ನೇಮಕ

ರಾಜೇಶ್ ಬೆಂಡರವಾಡಿ ಪ್ರಥಮ ಬಾರಿಗೆ ಇತರೆ ಹಿಂದುಳಿದ ವರ್ಗಕ್ಕೆ ಒಲಿದ ಡಿಸಿಸಿ ಅಧ್ಯಕ್ಷ ಸ್ಥಾನ  ಚಾಮರಾಜನಗರ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ…

3 hours ago