ಮೈಸೂರು ನಗರ

ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಅಮಿತ್‌ ಶಾ ಅವಹೇಳನಕಾರಿ ಹೇಳಿಕೆ: ಜ.7ಕ್ಕೆ ಮೈಸೂರು ಬಂದ್‌ಗೆ ಬೆಂಬಲಿಸುವಂತೆ ಪುರುಷೋತ್ತಮ್‌ ಮನವಿ

ಮೈಸೂರು: ಅಂಬೇಡ್ಕರ್‌ ಬಗ್ಗೆ ಅಮಿತ್‌ ಶಾ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಜನವರಿ.7 ರಂದು ಡಾ.ಬಿ.ಆರ್.ಅಂಬೇಡ್ಕರ್‌ ಅಭಿಮಾನಿಗಳ ಹೋರಾಟ ಸಮಿತಿಯು ಮೈಸೂರು ಬಂದ್‌ಗೆ ಕರೆ ನೀಡುತ್ತಿದ್ದು, ಸ್ವಯಂ ಪ್ರೇರಿತರಾಗಿ ಎಲ್ಲರೂ ಭಾಗವಹಿಸಬೇಕು ಎಂದು ಮಾಜಿ ಮೇಯರ್‌ ಪುರುಷೋತ್ತಮ್‌ ಮನವಿ ಮಾಡಿದ್ದಾರೆ.

ನಗರದ ಜಲದರ್ಶಿನಿ ಅತಿಥಿ ಗೃಹದಲ್ಲಿ ಇಂದು(ಜನವರಿ.2) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ರಾಜ್ಯಸಭೆಯಲ್ಲಿ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ.

ಅಮಿತ್‌ ಶಾ ಅವರ ಈ ಹೇಳಿಕೆಯನ್ನು ಖಂಡಿಸಿ ಜನವರಿ.7ರಂದು ಅಂದು ಬೆಳಿಗ್ಗೆ 6 ರಿಂದ ಸಂಜೆ 4 ಗಂಟೆಯವರೆಗೂ ಬಂದ್‌ ನಡೆಯಲಿದೆ. ಅಲ್ಲದೇ ಈ ಬಂದ್‌ಗೆ ಈಗಾಗಲೇ ವಿವಿಧ ಸಂಘಟನೆಗಳು ಮತ್ತು ಒಕ್ಕೂಟಗಳು ಬೆಂಬಲ ನೀಡಿವೆ. ಹೀಗಾಗಿ ಶಾಲೆ-ಕಾಲೇಜು, ಸಾರಿಗೆ ಸೇವೆ ಹಾಗೂ ವ್ಯಾಪಾರ-ವಹಿವಾಟನ್ನು ಸ್ಥಗಿತಗೊಳಿಸುವ ಮೂಲಕ ಬಂದ್‌ಗೆ ಬೆಂಬಲಿಸಬೇಕು ಎಂದು ಮನವಿ ಮಾಡಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

3 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

4 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

5 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

7 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

7 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

8 hours ago