ಮೈಸೂರು: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವ ಗಾದೆ ಮಾತಿನಂತೆ ಮೈಸೂರಿನ ಪೋರಿಯೊಬ್ಬಳು ಮನೆಯಲ್ಲಿಯೇ ವಿಶಿಷ್ಟ ಸಾಧನೆ ಮಾಡಿ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.
ಹೌದು ಮೈಸೂರು ನಗರದ ಗಾಯಿತ್ರಿಪುರಂನ ಜಾನ್ ಸ್ಯಾಮ್ಯುಯೆಲ್ ಮತ್ತು ದಿವ್ಯ ದಂಪತಿಗಳ ಪುತ್ರಿ ಸಲೋಮಿ ಸ್ತುತಿ ಎಂಬ ಪುಟ್ಟ ಪೋರಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದು, ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.
ಪ್ರೀ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಲೋಮಿ ಸ್ತುತಿ, ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಈಕೆ ಎ ಟು ಜೆಡ್‌ವರೆಗೆ ಬರುವ ಎಲ್ಲಾ ದೇಶಗಳ, ರಾಜ್ಯಗಳ ಹೆಸರು ಮತ್ತು ರಾಜಧಾನಿ ಹೆಸರುಗಳನ್ನು ಕೂಡ ಹೇಳುತ್ತಾಳೆ. ಒಂದರಿಂದ ಹತ್ತರವರೆಗೆ ಏಳು ಭಾಷೆಗಳಲ್ಲಿ ನಂಬರ್ಸ್‌ಗಳನ್ನು ಸರಾಗವಾಗಿ ಹೇಳುವುದರ ಜೊತೆಗೆ ಅಮೇರಿಕಾದ 50 ರಾಜ್ಯಗಳ ಹೆಸರುಗಳನ್ನು ಸಲೀಸಾಗಿ ಒಪ್ಪಿಸುತ್ತಾಳೆ.
ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎನ್ನುವ ಹಾಗೆ ಮನೆಯಲ್ಲಿರುವ ತಾಯಿ ಭವ್ಯ, ಸೋದರ ಅತ್ತೆ ರಾಜಮ್ಮ ಅವರ ಸಹಾಯದಿಂದ ಕಲಿಕೆ ಆರಂಭಿಸಿದ ಪುಟ್ಟ ಬಾಲೆ ಈಗ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.
ಪೋಷಕರು ಈಕೆಯನ್ನು ಭವಿಷ್ಯದಲ್ಲಿ ಸುಪ್ರೀಂಕೋರ್ಟ್ ಜಡ್ಜ್ ಮಾಡಬೇಕೆಂಬ ಕನಸು ಹೊತ್ತಿದ್ದು, ಅವರ ಕನಸು ನನಸಾಗಲಿ ಎಂಬುದೇ ನಮ್ಮೆಲ್ಲರ ಆಶಯವಾಗಿದೆ.
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಅಪರಾಧ ಸಾಬೀತುಪಡಿಸಿದ ತನಿಖಾ ತಂಡಕ್ಕೆ 25 ಲಕ್ಷ ರೂ. ನಗದು ಬಹುಮಾನ…
ಬೆಂಗಳೂರು: ರಾಜ್ಯಪಾಲರು ಜಂಟಿ ಅಧಿವೇಶನದಲ್ಲಿ ರಾಷ್ಟ್ರಗೀತೆ ಹಾಡದೇ ಹೋಗಿದ್ದು ಸಂವಿಧಾನದ ಉಲ್ಲಂಘನೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕೆ ಮಾಡಿದರು. ಈ…
ಕೇರಳ: ವಿಧಾನಸಭೆ ಚುನಾವಣೆ ನಡೆಯಲಿರುವ ಕೇರಳಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಸರಣಿ ಅಭಿವೃದ್ಧಿ ಯೋಜನೆಗಳಿಗೆ ಉದ್ಘಾಟನೆ…
ಮಂಡ್ಯ: ಕಳೆದ ಬಾರಿಗಿಂತ ಈ ಬಾರಿ ವಿಶೇಷವಾಗಿ 2 ಲಕ್ಷಕ್ಕೂ ಅಧಿಕ ಹೂಗಳನ್ನು ಬಳಿಸಿ ವಿಶೇಷ ಫಲಪುಷ್ಪ ಪ್ರದರ್ಶನವನ್ನು ಮಾಡಲಾಗಿದೆ…
ಮೈಸೂರು: ಅಪಾರ್ಟ್‌ಮೆಂಟ್‌ವೊಂದರಲ್ಲಿ ಬಣ್ಣ ಹೊಡೆಯುವ ವೇಳೆ ಕಾಲು ಜಾರಿ ಕೆಳಗೆ ಬಿದ್ದು ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಮೈಸೂರಿನ ದಿವಾನ್ಸ್ ರಸ್ತೆಯಲ್ಲಿರುವ…
ಮಹಾದೇಶ್ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಜೆ 6 ಗಂಟೆಯಿಂದ ಬೆಳಗಿನ ಜಾವ 6…