ಮೈಸೂರು ನಗರ

ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದ ಮೈಸೂರಿನ ಪೋರಿ

ಮೈಸೂರು: ಮನೆಯೇ ಮೊದಲ ಪಾಠಶಾಲೆ, ತಾಯಿಯೇ ಮೊದಲ ಗುರು ಎನ್ನುವ ಗಾದೆ ಮಾತಿನಂತೆ ಮೈಸೂರಿನ ಪೋರಿಯೊಬ್ಬಳು ಮನೆಯಲ್ಲಿಯೇ ವಿಶಿಷ್ಟ ಸಾಧನೆ ಮಾಡಿ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಹೌದು ಮೈಸೂರು ನಗರದ ಗಾಯಿತ್ರಿಪುರಂನ ಜಾನ್ ಸ್ಯಾಮ್ಯುಯೆಲ್ ಮತ್ತು ದಿವ್ಯ ದಂಪತಿಗಳ ಪುತ್ರಿ ಸಲೋಮಿ ಸ್ತುತಿ ಎಂಬ ಪುಟ್ಟ ಪೋರಿ ವಿಶಿಷ್ಟ ಸಾಧನೆ ಮಾಡುವ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದು, ಎಲ್ಲರನ್ನು ಅಚ್ಚರಿಗೊಳಿಸಿದ್ದಾಳೆ.

ಪ್ರೀ ಕೆಜಿಯಲ್ಲಿ ವ್ಯಾಸಂಗ ಮಾಡುತ್ತಿರುವ ಸಲೋಮಿ ಸ್ತುತಿ, ಚಿಕ್ಕ ವಯಸ್ಸಿನಲ್ಲೇ ಅಪಾರ ಸಾಧನೆ ಮಾಡಿ ಎಲ್ಲರ ಮೆಚ್ಚುಗೆಗೆ ಪಾತ್ರಳಾಗಿದ್ದಾಳೆ. ಈಕೆ ಎ ಟು ಜೆಡ್‌ವರೆಗೆ ಬರುವ ಎಲ್ಲಾ ದೇಶಗಳ, ರಾಜ್ಯಗಳ ಹೆಸರು ಮತ್ತು ರಾಜಧಾನಿ ಹೆಸರುಗಳನ್ನು ಕೂಡ ಹೇಳುತ್ತಾಳೆ. ಒಂದರಿಂದ ಹತ್ತರವರೆಗೆ ಏಳು ಭಾಷೆಗಳಲ್ಲಿ ನಂಬರ್ಸ್‌ಗಳನ್ನು ಸರಾಗವಾಗಿ ಹೇಳುವುದರ ಜೊತೆಗೆ ಅಮೇರಿಕಾದ 50 ರಾಜ್ಯಗಳ ಹೆಸರುಗಳನ್ನು ಸಲೀಸಾಗಿ ಒಪ್ಪಿಸುತ್ತಾಳೆ.

ಮನೆಯೇ ಮೊದಲ ಪಾಠ ಶಾಲೆ, ತಾಯಿಯೇ ಮೊದಲ ಗುರು ಎನ್ನುವ ಹಾಗೆ ಮನೆಯಲ್ಲಿರುವ ತಾಯಿ ಭವ್ಯ, ಸೋದರ ಅತ್ತೆ ರಾಜಮ್ಮ ಅವರ ಸಹಾಯದಿಂದ ಕಲಿಕೆ ಆರಂಭಿಸಿದ ಪುಟ್ಟ ಬಾಲೆ ಈಗ ಇಂಡಿಯಾ ಬುಕ್‌ ಆಫ್‌ ರೆಕಾರ್ಡ್ಸ್‌ನಲ್ಲಿ ದಾಖಲೆ ಬರೆದಿದ್ದಾಳೆ.

ಪೋಷಕರು ಈಕೆಯನ್ನು ಭವಿಷ್ಯದಲ್ಲಿ ಸುಪ್ರೀಂಕೋರ್ಟ್ ಜಡ್ಜ್ ಮಾಡಬೇಕೆಂಬ ಕನಸು ಹೊತ್ತಿದ್ದು, ಅವರ ಕನಸು ನನಸಾಗಲಿ ಎಂಬುದೇ ನಮ್ಮೆಲ್ಲರ ಆಶಯವಾಗಿದೆ.

 

ಆಂದೋಲನ ಡೆಸ್ಕ್

Recent Posts

ಆಯಾ ಕೆಲಸ ಮಾಡಿ ಮಕ್ಕಳನ್ನು ಮಾಸ್ಟರ್ಸ್‌ ಮಾಡಿದ ಸತ್ಯಮ್ಮ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…

44 seconds ago

ಮಂಜಿನ ನಗರಿಯಲ್ಲಿ ರಸ್ತೆಗಳ ದುಸ್ಥಿತಿ

ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…

8 mins ago

ಅ.೧, ೨ರಂದು ಶ್ರೀ ಗುರುಮಲ್ಲೇಶ್ವರ ದಾಸೋಹ ಭವನ ಉದ್ಘಾಟನೆ

ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…

14 mins ago

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

14 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

14 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

16 hours ago