ಮೈಸೂರು: ನಾವು ಯಾವುದೇ ಉತ್ಪನಗಳನ್ನು ಮಾರಾಟ ಮಾಡಬೇಕಾದರೆ ಗುಣಮಟ್ಟ ಎಂಬುದು ಬಹಳ ಮುಖ್ಯ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ.ಪಿ.ಶಿವರಾಜು ಅವರು ಹೇಳಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಭಾರತೀಯ ಮಾನಕ ಬ್ಯೂರೋ ಬೆಂಗಳೂರು ಶಾಖಾ ಕಾರ್ಯಾಲಯ, ಗ್ರಾಹಕ ವ್ಯವಹಾರಗಳ ಸಚಿವಾಲಯ, ಆಹಾರ ಮತ್ತು ಸಾರ್ವಜನಿಕ ವಿತರಣೆ, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಡಿ.ಎಲ್.ಓ ಸಂವೇಧನಶೀಲತಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಈ ಕಾರ್ಯಗಾರಾದ ಉದ್ದೇಶ ನಾವು ಉತ್ಪನ್ನಗಳನ್ನು ಖರೀದಿ ಮಾಡಬೇಕಾದರೆ ಉತ್ಪನ್ನಗಳ ಗುಣಮಟ್ಟ ಉತ್ತಮವಾಗಿದೆಯೇ ಅಥವಾ ಕಳಪೆಯಿಂದ ಕೂಡಿದೆಯೇ ಅದನ್ನು ನಾವು ಹೇಗೆ ಪತ್ತೆ ಹಚ್ಚಬಹುದು ಎಂಬುದನ್ನು ತಿಳಿಸುವುದಾಗಿದೆ. ಈ ಕಾರ್ಯಗಾರದ ಸದುಪಯೋಗವನ್ನು ಪ್ರತಿಯೊಂದು ಇಲಾಖೆಯವರು ಪಡೆದುಕೊಂಡು ನಿಮ್ಮ ಇಲಾಖೆಯವರಿಗೂ ಇದೇ ರೀತಿಯಾದಂತಹ ಮಾಹಿತಿಯನ್ನು ತಿಳಿಸಬೇಕು ಎಂದು ತಿಳಿಸಿದರು.
ಸರ್ಕಾರ ಕುಡಿಯುವ ನೀರಿನಿಂದ ಹಿಡಿದು ಚಿನ್ನದ ಹೂಡಿಕೆಯವರೆಗೂ ಪ್ರತಿಯೊಂದು ಮಾನದಂಡಗಳನ್ನು ವಿಧಿಸಿರುವುದರಿಂದ ಯಾವುದೇ ಉತ್ಪನವನ್ನು ಏನಾದರೂ ಮಾಡಬಹುದು ಎಂಬ ವ್ಯವಸ್ಥೆ ಸರ್ಕಾರದಲ್ಲಿ ಇಲ್ಲ ಎಂದರು.
ಕೆಲವರು ನಕಲಿ ಉತ್ಪನ್ನಗಳಿಗೆ ಸರ್ಕಾರದ ಮಾರ್ಕ್ ಅಳವಡಿಸಿ ಮಾರಾಟ ಮಾಡುತ್ತಿದ್ದಾರೆ. ಅಂತಹವುಗಳನ್ನು ಹೇಗೆ ಕಂಡು ಹಿಡಿಯುವುದು ಎಂಬುದು ಸಹ ಈ ಕಾರ್ಯಾಗಾರದಲ್ಲಿ ತಿಳಿಯುತ್ತದೆ. ಈ ಕಾರ್ಯಗಾರವು ಆಸಕ್ತಿದಾಯಕವಾದಂತಹ ವಿಷಯವನ್ನು ತಿಳಿಸುವುದರ ಜೊತೆಗೆ ಜ್ಞಾನವನ್ನು ನೀಡುತ್ತದೆ ಎಂದು ಹೇಳಿದರು.
ಭಾರತೀಯ ಮಾನಕ ಬ್ಯೂರೋ ನಿರ್ದೇಶಕರಾದ ನರೇಂದ್ರ ರೆಡ್ಡಿ ಬೀಸು ಅವರು ಮಾತನಾಡಿ, ಗ್ರಾಹಕರು ಪ್ರತಿಯೊಂದು ಉತ್ಪನ್ನಗಳನ್ನು ಖರೀದಿಸುವುದರಿಂದ ಉತ್ಪನ್ನಗಳ ಮೇಲೆ ಹೆಚ್ಚು ಗಮನ ವಹಿಸಬೇಕು ಎಂದು ಹೇಳಿದರು.
ಪ್ರತಿಯೊಂದು ಉತ್ಪನ್ನಗಳಿಗೂ ಸರ್ಕಾರದಿಂದ ಅದರದೇ ಆದಂತಹ ಮಾರ್ಕ್‌ಗಳು ಇರುವುದರಿಂದ ಪ್ರತಿ ಇಲಾಖೆಯು ಅದರ ಬಗ್ಗೆ ಹೆಚ್ಚು ಗಮನವಹಿಸಿ ಸಾರ್ವಜನಿಕರಿಗೆ ಜಾಗೃತಿಯನ್ನು ಮೂಡಿಸಬೇಕು ಎಂದರು.
ಪ್ರತಿಯೊಂದು ಉತ್ಪನ್ನಗಳ ಬಗ್ಗೆ ತಿಳಿದುಕೊಳ್ಳಲು ಬಯಸುವವರು ಉತ್ಪನ್ನಗಳ ವೆಬ್ ಸೈಟ್: www.bis.gov.in ಹಾಗೂ ಇ- ಮೇಲ್ bnbo@bis.gov.in ನ್ನು ಸಂಪರ್ಕಿಸಬಹುದು ಎಂದು ಕಾರ್ಯಗಾರದಲ್ಲಿ ಭಾಗಿಯಾಗಿದ್ದ ವಿವಿಧ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.
ಕಾರ್ಯಗಾರದಲ್ಲಿ ಭಾರತೀಯ ಮಾನಕ ಬ್ಯೂರೋ ಸದಸ್ಯರಾದ ಶಿವಕುಮಾರ್. ಎಂ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸಿತರಿದ್ದರು.
ಇಸ್ಲಾಮಾಬಾದ್: ಪಶ್ಚಿಮ ಏಷ್ಯಾ ಯುದ್ಧವನ್ನು ಕೊನೆಗೊಳಿಸಲು ಇಸ್ಲಾಮಾಬಾದ್‌ನಲ್ಲಿ ಅಮೇರಿಕಾ-ಇರಾನ್ ನಡುವೆ ಕದನ ವಿರಾಮ ಮಾತುಕತೆ ನಡೆದಿದೆ. ಸಂಸದೀಯ ಸ್ಪೀಕರ್ ಮೊಹಮ್ಮದ್…
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪಮಾನ ಏರಿಕೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹೀಟ್ ವೇವ್ ಎಚ್ಚರಿಕೆ…
ಬೆಂಗಳೂರು: ಇಲ್ಲಿನ ಡಿ.ಜೆ.ಹಳ್ಳಿ ಬಳಿಯ ಶಾಂಪುರ ರಸ್ತೆಯಲ್ಲಿ ಕಿಡಿಗೇಡಿಯೊಬ್ಬ ಬೆಂಕಿ ಹಚ್ಚಿ ಆರು ಹಸುಗಳನ್ನು ಸಜೀವ ದಹನ ಮಾಡಿದ್ದ ಪ್ರಕರಣಕ್ಕೆ…
ನವದೆಹಲಿ: ಇದೇ ಏಪ್ರಿಲ್.15ರಿಂದ ಈ ವರ್ಷದ ಅಮರನಾಥ ಯಾತ್ರೆಗೆ ಮುಂಗಡ ನೋಂದಣಿ ಆರಂಭವಾಗಲಿದೆ. ಭಾರತದಾದ್ಯಂತ ಒಂದೇ ಸಮಯಕ್ಕೆ ಬುಕಿಂಗ್ ಪ್ರಾರಂಭವಾಗಲಿದ್ದು,…
ಕೊಡಗು: ಕಾಫಿ ತೋಟದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿರುವ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕಿನ ಬೇತ್ರಿ ಗ್ರಾಮದಲ್ಲಿ ನಡೆದಿದೆ.…
ನವದೆಹಲಿ: ಸಂಸತ್ತಿನ ಆವರಣದಲ್ಲಿ ಕಾರಿನಿಂದ ಇಳಿದು ಬಂದ ಪ್ರಧಾನಿ ನರೇಂದ್ರ ಮೋದಿ ಅವರು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ಗಾಂಧಿ…