ಮೈಸೂರು: ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ.
ವಸತಿ ಹಂಚಿಕೆಯಲ್ಲಿ ಕಾಂಗ್ರೆಸ್ ಶಾಸಕನ ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್‌ಗೆ ಕಪ್ಪ ಕಾಣಿಕೆ ಸಲ್ಲಿಸಲು ರಾಜ್ಯ ಸರ್ಕಾರ ಲೂಟಿ ಹೊಡೆಯುತ್ತಿದೆ. 60% ಸರ್ಕಾರದಲ್ಲಿ ಪ್ರತಿ ಇಲಾಖೆಯಲ್ಲೂ ಭ್ರಷ್ಟಾಚಾರ ನಡೆಯುತ್ತಿದೆ. ಬಡವರ ಮನೆ ಹಂಚಿಕೆಯಲ್ಲೂ ಹಣ ವಸೂಲಿ ಮಾಡುತ್ತಿದ್ದಾರೆ. 36% ಹಣವನ್ನು ವಸತಿ ಇಲಾಖೆಯಲ್ಲೂ ಕೇಳುತ್ತಿದ್ದಾರೆ. ಅಬಕಾರಿ ಇಲಾಖೆಯಲ್ಲೂ ಲೂಟಿ ಮಾಡಿದ್ದಾರೆ. ವಾಲ್ಮೀಕಿ ಹಗರಣ, ಮುಡಾ ಹಗರಣದಲ್ಲೂ ಲೂಟಿ ಆಯಿತು.
ಮುಖ್ಯಮಂತ್ರಿಯಿಂದ ಹಿಡಿದು ಎಲ್ಲಾ ಸಚಿವರೂ ಲೂಟಿ ಮಾಡುವ ಕೆಲಸಕ್ಕೆ ಇಳಿದಿದ್ದಾರೆ. ಹೈಕಮಾಂಡ್‌ಗೆ ಕಪ್ಪಕಾಣಿಕೆ ನೀಡಲು ನಾ ಮುಂದು ತಾ ಮುಂದು ಎಂದು ನಿಂತಿದ್ದಾರೆ. ಹೈಕಮಾಂಡ್‌ಗೆ ಯಾರು ಜಾಸ್ತಿ ಕಪ್ಪಕಾಣಿಕೆ ನೀಡುತ್ತಾರೋ ಅವರಿಗೆ ಬೆಲೆ ಜಾಸ್ತಿ ಆದಂತಾಗಿದೆ. ಬಿಹಾರ್ ಸೇರಿದಂತೆ ಬೇರೆ ರಾಜ್ಯಗಳ ಚುನಾವಣೆಗಾಗಿ ಕರ್ನಾಟಕದಿಂದ ಲೂಟಿ ಮಾಡಲಾಗುತ್ತಿದೆ. ಲೂಟಿ ಹೊಡೆದು ಸಚಿವ ಸ್ಥಾನದಿಂದ ಸಚಿವರು ಮುಂದುವರಿಯುತ್ತಿದ್ದಾರೆ. ನಾಳೆಯಿಂದ ಹೋರಾಟದ ರೂಪುರೇಷೆ ಸಿದ್ದವಾಗುತ್ತಿದೆ. ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದ್ದೇವೆ. ಮುಖ್ಯಮಂತ್ರಿಗಳಿಗೆ ಗೌರವವಿದ್ದರೆ ಇಷ್ಟೊತ್ತಿಗೆ ಸಚಿವರ ರಾಜೀನಾಮೆ ಪಡೆಯಬೇಕಿತ್ತು ಎಂದು ಕಿಡಿಕಾರಿದರು.
ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮಾಜಿ ಸಚಿವ ಜಿ.ಟಿ.ದೇವೇಗೌಡರ ನೇತೃತ್ವದಲ್ಲಿ ಇಸ್ಕಾನ್ ಸಂಸ್ಥೆಯ ಅಕ್ಷಯಪಾತ್ರೆ ಫೌಂಡೇಶನ್ ಸಹಯೋಗದೊಂದಿಗೆ…
ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಅವರ ಕಚೇರಿಯಲ್ಲಿ ಸಮವಸ್ತ್ರದಲ್ಲಿದ್ದಾಗಲೇ ಮಹಿಳೆಯೊಂದಿಗೆ ನಡೆಸಿದ್ದಾರೆ ಎನ್ನಲಾದ ರಾಸಲೀಲೆಯ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್…
ಉತ್ತರ ಅಟ್ಲಾಂಟಿಕ್ ಸಮುದ್ರದಲ್ಲಿ ಇರುವ ವಿಶ್ವದ ಅತಿದೊಡ್ಡ ದ್ವೀಪವಾಗಿರುವ ಹಾಗೂ ಡೆನ್ಮಾರ್ಕ್ ದೇಶದ ನಿಯಂತ್ರಣದಲ್ಲಿರುವ ‘ಗ್ರೀನ್ ಲ್ಯಾಂಡ್’ ದ್ವೀಪವನ್ನು ತನ್ನ…
ನವೀನ್ ಡಿಸೋಜ ಅರಣ್ಯ ಇಲಾಖೆಯಿಂದ ಬೆಂಕಿ ರೇಖೆ ನಿರ್ಮಾಣ ಕಾರ್ಯ ಚುರುಕು; ಜನರಲ್ಲಿ ಜಾಗೃತಿ ಮೂಡಿಸಲು ಚಿಂತ ಮಡಿಕೇರಿ: ಬೇಸಿಗೆ…
ಎಂ ಯೋಗಾನಂದ್ ಜ.೨೩ರಿಂದ ೨೬ರವರೆಗೆ ಜಾತ್ರಾ ಮಹೋತ್ಸವ; ಮೆರುಗು ನೀಡಲಿರುವ ಗಾಡಿ ಓಡಿಸುವ ಸ್ಪರ್ಧೆ ಹುಣಸೂರು: ತಾಲ್ಲೂಕಿನ ಬಾಚಳ್ಳಿ ಗ್ರಾಮದಲ್ಲಿ…