Mysore
34
scattered clouds

Social Media

ಶನಿವಾರ, 21 ಮಾರ್ಚ್ 2026
Light
Dark

ಮೈಸೂರಿನಲ್ಲಿ ಸಂಭ್ರಮದಿಂದ ರಂಜಾನ್‌ ಹಬ್ಬ ಆಚರಣೆ

ಮೈಸೂರು: ನಾಡಿನಾದ್ಯಂತ ರಂಜಾನ್‌ ಹಬ್ಬದ ಸಂಭ್ರಮ ಮನೆಮಾಡಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಮೂಲಕ ಸಡಗರದಿಂದ ಹಬ್ಬ ಆಚರಣೆ ಮಾಡಿದರು.

ಮೈಸೂರಿನ ಮಂಡಿ ಮೊಹಲ್ಲಾದಲ್ಲಿರುವ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ರಂಜಾನ್‌ ಹಬ್ಬದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಮಸೀದಿಗಳಿಗೆ ತೆರಳಿ ವಿಶೇಷ ಪ್ರಾರ್ಥನೆ ಸಲ್ಲಿಸಿ ಉಪವಾಸ ಅಂತ್ಯಗೊಳಿಸಿದರು.

ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದ ಬಳಿಕ ವಯಸ್ಸಿನ ಅಂತರ ಮರೆತು ಪರಸ್ಪರ ಒಬ್ಬರಿಗೊಬ್ಬರು ಅಪ್ಪಿಕೊಂಡು ರಂಜಾನ್‌ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.

 

Tags:
error: Content is protected !!