Mysore
21
broken clouds

Social Media

ಮಂಗಳವಾರ, 25 ಆಗಸ್ಟ್ 2026
Light
Dark

ಕಾಂತಾರ ದೈವಕ್ಕೆ ಅಪಮಾನ: ಚಾಮುಂಡಿ ತಾಯಿ ಮುಂದೆ ಕಡೆಗೂ ಕ್ಷಮೆ ಕೇಳಿದ ರಣವೀರ್‌ ಸಿಂಗ್‌

ಮೈಸೂರು: ಕಾಂತಾರ ದೈವದ ಪಾತ್ರಕ್ಕೆ ಅಪಮಾನ ಮಾಡಿದ್ದ ಬಾಲಿವುಡ್‌ ನಟ ರಣವೀರ್‌ ಸಿಂಗ್‌ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ತಾಯಿಯೆದರು ಕ್ಷಮೆಯಾಚಿಸಿದ್ದಾರೆ.

ಸಾಮಾನ್ಯರಲ್ಲಿ ಸಾಮಾನ್ಯನಂತೆ ಕ್ಯೂನಲ್ಲಿ ಬಂದ ರಣವೀರ್‌ ಸಿಂಗ್‌ ಅವರು, ಗರ್ಭಗುಡಿವರೆಗೆ ಮಾಸ್ಕ್ ಧರಿಸಿ ಬಂದು ನಂತರ ಗರ್ಭಗುಡಿ ಪ್ರವೇಶ ಮಾಡಿದರು.

ಬಳಿಕ ತಾಯಿ ಎದುರು ಕುಳಿತು ತಲೆಬಾಗಿ ಕ್ಷಮೆ ಕೇಳಿದ್ದಾರೆ.

ಪ್ರಕರಣ ಸಂಬಂಧ ಹೈಕೋರ್ಟ್‌ ವಿಚಾರಣೆ ನಡೆಸುತ್ತಿದ್ದಾಗ, ರಣವೀರ್‌ ಸಿಂಗ ಸ್ವತಃ ಎಕ್ಸ್‌ನಲ್ಲಿ ಕ್ಷಮೆ ಕೇಳಿದ್ದರು. ಜೊತೆಗೆ ಚಾಮುಂಡೇಶ್ವರಿ ದೇವಾಲಯಕ್ಕೆ ಭೇಟಿ ನೀಡಿ ಕ್ಷಮೆ ಕೇಳುವುದಾಗಿ ತಿಳಿಸಿದ್ದರು.

 

 

Tags:
error: Content is protected !!