Mysore
23
few clouds

Social Media

ಮಂಗಳವಾರ, 20 ಜನವರಿ 2026
Light
Dark

ನಾಡ ಅಧಿದೇವತೆ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ರಥೋತ್ಸವದ ಸಂಭ್ರಮ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಮೂರೇ ದಿನಕ್ಕೆ ಚಾಮುಂಡಿಬೆಟ್ಟ ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಯಿತು.

ಶನಿವಾರವಷ್ಟೇ ದಸರಾ ಹಬ್ಬ ಸಂಪನ್ನಗೊಂಡಿದ್ದು, ಬೇರೆ ಬೇರೆ ರಾಜ್ಯ ಹಾಗೂ ದೇಶಗಳಿಂದ ಆಗಮಿಸಿದ್ದ ಪ್ರವಾಸಿಗರು ದಸರಾವನ್ನು ಕಣ್ತುಂಬಿಕೊಂಡು ಹಿಂದಿರುಗಿದ್ದಾರೆ.

ಈ ಮಧ್ಯೆ ಇಂದು ನಾಡದೇವತೆ ಚಾಮುಂಡೇಶ್ವರಿ ತಾಯಿ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಅದ್ಧೂರಿಯಾಗಿ ರಥೋತ್ಸವ ನೆರವೇರಿದೆ.

ಇಂದು ಬೆಳಿಗ್ಗೆಯಿಂದಲೇ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿದ್ದು, ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ರಥೋತ್ಸವಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ನಂತರ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.

ಈ ವೇಳೆ ನೆರೆದಿದ್ದ ಸಾರ್ವಜನಿಕರು ರಥಕ್ಕೆ ಹಣ್ಣು ಎಸೆದು ಚಾಮುಂಡೇಶ್ವರಿಗೆ ಜೈಕಾರ ಹಾಕಿ ತಾಯಿಯ ದರ್ಶನ ಪಡೆದು ಪುನೀತರಾದರು.

ಆ ಬಳಿಕ ಚಾಮುಂಡೇಶ್ವರಿ ತಾಯಿಯ ಮೂಲ ಮೂರ್ತಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಯಿತು.

 

Tags:
error: Content is protected !!