ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಮುಗಿದ ಮೂರೇ ದಿನಕ್ಕೆ ಚಾಮುಂಡಿಬೆಟ್ಟ ಮತ್ತೊಂದು ಸಂಭ್ರಮಕ್ಕೆ ಸಾಕ್ಷಿಯಾಯಿತು.
ಶನಿವಾರವಷ್ಟೇ ದಸರಾ ಹಬ್ಬ ಸಂಪನ್ನಗೊಂಡಿದ್ದು, ಬೇರೆ ಬೇರೆ ರಾಜ್ಯ ಹಾಗೂ ದೇಶಗಳಿಂದ ಆಗಮಿಸಿದ್ದ ಪ್ರವಾಸಿಗರು ದಸರಾವನ್ನು ಕಣ್ತುಂಬಿಕೊಂಡು ಹಿಂದಿರುಗಿದ್ದಾರೆ.
ಈ ಮಧ್ಯೆ ಇಂದು ನಾಡದೇವತೆ ಚಾಮುಂಡೇಶ್ವರಿ ತಾಯಿ ನೆಲೆಸಿರುವ ಚಾಮುಂಡಿಬೆಟ್ಟದಲ್ಲಿ ಅದ್ಧೂರಿಯಾಗಿ ರಥೋತ್ಸವ ನೆರವೇರಿದೆ.
ಇಂದು ಬೆಳಿಗ್ಗೆಯಿಂದಲೇ ಬೆಟ್ಟದಲ್ಲಿ ಧಾರ್ಮಿಕ ವಿಧಿ ವಿಧಾನಗಳು ಆರಂಭಗೊಂಡಿದ್ದು, ಶುಭ ಮುಹೂರ್ತದಲ್ಲಿ ಚಾಮುಂಡೇಶ್ವರಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ರಥೋತ್ಸವಕ್ಕೂ ಮುನ್ನ ಚಾಮುಂಡಿಬೆಟ್ಟದಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳು ನೆರವೇರಿದವು. ನಂತರ ಸಾವಿರಾರು ಸಾರ್ವಜನಿಕರ ಸಮ್ಮುಖದಲ್ಲಿ ರಥೋತ್ಸವ ಅದ್ಧೂರಿಯಾಗಿ ನೆರವೇರಿತು.
ಈ ವೇಳೆ ನೆರೆದಿದ್ದ ಸಾರ್ವಜನಿಕರು ರಥಕ್ಕೆ ಹಣ್ಣು ಎಸೆದು ಚಾಮುಂಡೇಶ್ವರಿಗೆ ಜೈಕಾರ ಹಾಕಿ ತಾಯಿಯ ದರ್ಶನ ಪಡೆದು ಪುನೀತರಾದರು.
ಆ ಬಳಿಕ ಚಾಮುಂಡೇಶ್ವರಿ ತಾಯಿಯ ಮೂಲ ಮೂರ್ತಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಯಿತು.
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…