ಮೈಸೂರು: ನಗರದ ಹೊರವಲಯದಲ್ಲಿ ರೇವ್ ಪಾರ್ಟಿ ನಡೆಸಿದ್ದ ಸ್ಥಳಕ್ಕೆ ಪೊಲೀಸರು ದಾಳಿ ಮಾಡಿ, ಯುವತಿಯರು ಸೇರಿದಂತೆ 50ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಈ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ನಡೆದಿರುವ ರೇವ್ ಪಾರ್ಟಿಯ ಬಗ್ಗೆ ಎಸ್.ಪಿ ವಿಷ್ಣುವರ್ಧನ್ ಮಾಹಿತಿ ನೀಡಿದ್ದಾರೆ. ಕಾನೂನು ರೀತ್ಯ ಪೊಲೀಸರು ತನಿಖೆ ನಡೆಸಿ ಕ್ರಮ ತೆಗೆದುಕೊಳ್ಳುತ್ತಾರೆ. ಪಾರ್ಟಿ ಆಯೋಜಕರು ಈ ಬಗ್ಗೆ ಯಾವುದೇ ಅನುಮತಿ ಪಡೆದಿರಲಿಲ್ಲ. ಎಲ್ಲಾ ಆಯಾಮದಲ್ಲಿ ತನಿಖೆ ನಡೆಸಿ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ವರದಿ ಬಂದ ಬಳಿಕ ಕ್ರಮ
ಇನ್ನೂ ಎಸ್.ಪಿ ವಿಷ್ಣುವರ್ಧನ್ ಮಾತನಾಡಿ, ಪಾರ್ಟಿಯಲ್ಲಿ ಯಾವುದೇ ಮಾದಕ ದ್ರವ್ಯ ಸಿಕ್ಕಿಲ್ಲ. ಸ್ಥಳದಲ್ಲಿ ಮದ್ಯ, ಸಿಗರೇಟ್ ಸಿಕ್ಕಿದೆ. ವಿದೇಶಿಗರು ಪಾರ್ಟಿಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಧ್ಯಮದವರು ಮಾಹಿತಿ ನೀಡಿದ್ದಾರೆ. ಈ ಬಗ್ಗೆಯು ಪರಿಶೀಲಿಸಲಾಗುವುದು ಎಂದರು.
ಎಲ್ಲರ ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿದೆ. ವರದಿ ಬಂದ ನಂತರ ಈ ಬಗ್ಗೆ ಸ್ಪಷ್ಟತೆ ಸಿಗಲಿದೆ. ಪಾರ್ಟಿ ಆಯೋಜಕರು, ಭೂ ಮಾಲೀಕರ ವಿರುದ್ದ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.